ಫಿಟ್‌ನೆಸ್, ಜಿಮ್ ಆಯ್ದ ಕ್ರೀಡಾ ಚಟುವಟಿಕೆ ಆರಂಭಕ್ಕೆ ಮನವಿ
Team Udayavani, May 14, 2020, 8:19 AM IST
ಬೆಂಗಳೂರು: ರಾಜ್ಯದಲ್ಲಿನ ಫಿಟ್‌ನೆಸ್ ಸೆಂಟರ್, ಜಿಮ್, ಗಾಲ್ಫ್ ಸೇರಿದಂತೆ ಆಯ್ದ ಕ್ರೀಡಾ ಅಭ್ಯಾಸಕ್ಕೆ ಅವಕಾಶ ನೀಡಬೇಕೆಂಬ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿಗಳು, ಕೇಂದ್ರದ ಸೂಚನೆ ಆಧರಿಸಿ ಮೇ 17ರ ಬಳಿಕ ಸಾಧ್ಯವಾದಷ್ಟು ಸಡಿಲಿ ಕೆಗೆ ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಸಚಿವ ಸಿ.ಟಿ.ರವಿ ಹೇಳಿದರು.
ಗೃಹ ಕಚೇರಿ “ಕೃಷ್ಣಾ’ದಲ್ಲಿ ಬುಧವಾರ ಮುಖ್ಯ ಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಬಳಿಕ ಪ್ರತಿ ಕ್ರಿಯಿಸಿ, ಫಿಟ್‌ನೆಸ್ ಸೆಂಟರ್, ಜಿಮ್ ನಡೆಸುವವರು, ಈಜುಗಾರಿಕೆ ಸಂಬಂಧಿತ ಸಂಸ್ಥೆಯವರು ಭೇಟಿಯಾಗಿ ಆಯ್ದ ಚಟುವಟಿಕೆ, ತಯಾರಿಗೆ ಅವಕಾಶ ನೀಡುವಂತೆ ಕೋರಿದ್ದರು. ಆ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಯಿತು ಎಂದು ಹೇಳಿದರು. ಫಿಟ್‌ನೆಸ್ ಸೆಂಟರ್, ಜಿಮ್‌ಗಳಲ್ಲಿ ಸಾಮಾಜಿಕ ಅಂತರದ ಜತೆಗೆ ನೈರ್ಮಲ್ಯಕ್ಕೆ ಒತ್ತು ನೀಡುವುದಾಗಿ ಹೇಳಿದ್ದಾರೆ.
ಗುಂಪಿಗೆ ಬದಲಾಗಿ ವ್ಯಕ್ತಿಗತ ವಾಗಿ ಕ್ರೀಡಾ ಚಟುವಟಿಕೆ, ಅಭ್ಯಾಸಕ್ಕೆ ಅವಕಾಶ ಕೋರಿದ್ದಾರೆ. ಗಾಲ್ಫ್ ಕ್ರೀಡೆಯಲ್ಲಿ ಸಾಕಷ್ಟು ಅಂತ ರವಿರುತ್ತದೆ. ಜತೆಗೆ ಸುರಕ್ಷತೆಗೂ ಒತ್ತು ನೀಡುವು ದಾಗಿ ಹೇಳಿದ್ದಾರೆ. ಈ ಬಗ್ಗೆ ಮುಖ್ಯ ಮಂತ್ರಿಗಳ ಬಳಿ ಪ್ರಸ್ತಾಪಿಸಲಾಯಿತು. ಕೇಂದ್ರ ಸರ್ಕಾರ ನೀಡುವ ಮುಂದಿನ ಸೂಚನೆ ಆಧರಿಸಿ ಕೆಲ ಷರತ್ತುಗಳೊಂದಿಗೆ ಸೀಮಿತ ಚಟುವಟಿಕೆ ನಡೆ ಸಲು ಅವಕಾಶ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಹೆಚ್ಚು ಸಂಕಷ್ಟಕ್ಕೆ ಸಿಲುಕಿರುವ ರಾಜ್ಯಗಳಿಗೆ ಕೇಂದ್ರ ಅನುದಾನ ಬಿಡುಗಡೆ ಮಾಡಿದೆ. ಮಹಾರಾಷ್ಟ್ರ, ಪಶ್ಚಿಮ ಬಂಗಾಳದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡಿದೆ. ಈ ವಿಚಾರದಲ್ಲಿ ರಾಜಕೀಯ ಬೆರೆಸುವುದು ಸರಿಯಲ್ಲ. ಕೇಂದ್ರ ಸರ್ಕಾರ ತಾರತಮ್ಯ ತೋರಿಲ್ಲ. ಇದು ಪ್ರತಿಪಕ್ಷಗಳು ವಿರೋಧಕ್ಕಾಗಿಯೇ ಇರುವಂತಹ ಮನಸ್ಥಿತಿಯನ್ನು ತೋರಿಸುತ್ತದೆ.
-ಸಿ.ಟಿ.ರವಿ, ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.