ಲಾಕ್‌ಡೌನ್‌ ಪರಿಸ್ಥಿತಿ ನಿರ್ವಹಣೆಗೆ ಪಂಚ ಸೂತ್ರ


Team Udayavani, Apr 15, 2020, 8:21 AM IST

ಲಾಕ್‌ಡೌನ್‌ ಪರಿಸ್ಥಿತಿ ನಿರ್ವಹಣೆಗೆ ಪಂಚ ಸೂತ್ರ

ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ಲಾಕ್‌ಡೌನ್‌ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಪೊಲೀಸರು ಮಂಗಳವಾರ ಬೈಕ್‌ ಸವಾರರಿಗೆ ಲಾಠಿ ಬೀಸಿದರು.

ಲಾಕ್‌ಡೌನ್‌ ಅವಧಿ ಏ.14 ರವರೆಗೆ ನಿಗದಿಯಾಗಿತ್ತಾದರೂ ಕರ್ನಾಟಕ ಸೇರಿ ದೇಶದ ವಿವಿಧೆಡೆ ಸೋಂಕು ಪ್ರಕರಣ ಹೆಚ್ಚುತ್ತಿರುವುದರಿಂದ 2ನೇ ಹಂತದಲ್ಲಿ ಮೇ 3ರವರೆಗೆ ವಿಸ್ತರಿಸಲಾಗಿದೆ. ಲಾಕ್‌ ಡೌನ್‌ ನಿರ್ವಹಣೆ ವಿಚಾರದಲ್ಲಿ ರಾಜಕೀಯ ಮುಖಂಡರು, ರೈತ, ಕಾರ್ಮಿಕ ನಾಯಕರ ಸಲಹೆ ಏನು ಎಂಬುದನ್ನು ‘ಉದಯವಾಣಿ’ ಜನರ ಮುಂದಿಟ್ಟಿದೆ. ಲಾಕ್‌ಡೌನ್‌ ವಿಸ್ತರಣೆಯನ್ನು ಬಹುತೇಕ ಎಲ್ಲ ನಾಯಕರು ಪಕ್ಷಾತೀತವಾಗಿ ಸ್ವಾಗತಿಸಿದ್ದಾರೆ. ಜತೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸರ್ಕಾರಕ್ಕೆ ಕೆಲ ಸಲಹೆಗಳನ್ನು ನೀಡಿದ್ದಾರೆ.

ನಿಯಮಗಳು ಪಾಲನೆಯಾಗಲಿ
ಸಿದ್ಧರಾಮಯ್ಯ, ಪ್ರತಿಪಕ್ಷ ನಾಯಕ

1 ಲಾಕ್‌ ಡೌನ್‌ ವಿಸ್ತರಣೆಗೆ ನಮ್ಮ ಪಕ್ಷದ ಸಹಮತವಿದೆ. ಆದರೆ, ಲಾಕ್‌ ಡೌನ್‌ ನಿಯಮಗಳು ನೂರಕ್ಕೆ ನೂರರಷ್ಟು ಪಾಲನೆ ಆಗುವಂತೆ ನೋಡಿಕೊಳ್ಳಬೇಕು.

2 ಕೃಷಿ ಉತ್ಪನ್ನಗಳಿಗೆ ಬೆಲೆ ಸಿಗದೆ, ಸಾಗಣೆ ಹಾಗೂ ಮಾರುಕಟ್ಟೆ ಸೌಲಭ್ಯವಿಲ್ಲದೆ ರೈತರು ಕಂಗಾಲಾಗಿದ್ದಾರೆ. ಇದರಿಂದ ತಾವು ಬೆಳೆದ ಬೆಳೆಗಳನ್ನು ರೈತರು ಬೀದಿಗೆ ಸುರಿಯುವ ಸನ್ನಿವೇಶ ನಿರ್ಮಾಣವಾಗಿದೆ. ಮಾವು ಹಾಗೂ ಇತರ ಹಣ್ಣುಗಳ ಸೀಸನ್‌ ಈಗ ಶುರುವಾಗಿದೆ. ಆದ್ದರಿಂದ ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ, ಸಾಗಣೆ ಹಾಗೂ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವತ್ತ ಸರ್ಕಾರ ಕ್ರಮ ಕೈಗೊಳ್ಳಬೇಕು.

3 ಲಕ್ಷಾಂತರ ವಲಸಿಗ ಕಾರ್ಮಿಕರು ಸ್ವಂತ ಊರುಗಳಿಗೆ ಹೋಗಲು ಆಗದೆ ಅಲ್ಲಲ್ಲಿ ಆಶ್ರಯ ಪಡೆದಿದ್ದಾರೆ. ಊಟ, ತಿಂಡಿ ಇಲ್ಲದೆ ಪರದಾಡುತ್ತಿರುವ ಅವರ ನೆರವಿಗೆ ಸರ್ಕಾರ ತಕ್ಷಣ ಧಾವಿಸಬೇಕು.

4 ಇಂದಿರಾ ಕ್ಯಾಂಟೀನ್‌ಗಳಲ್ಲಿ ಈ ಹಿಂದಿನಂತೆ ಉಚಿತವಾಗಿ ಊಟ, ತಿಂಡಿ ವಿತರಿಸಬೇಕು. ಈಗ ದರ ನಿಗದಿ ಮಾಡಿರುವುದರಿಂದ ಬಹುತೇಕ ಕ್ಯಾಂಟೀನ್‌
ಗಳು ಜನರಿಲ್ಲದೆ ಮುಚ್ಚುವ ಹಂತ ತಲುಪಿದೆ.

5 ಅಸಂಘಟಿತ ವಲಯದವರು ಸೇರಿದಂತೆ ಎಲ್ಲ ವರ್ಗದ ಕಾರ್ಮಿಕರಿಗೆ ಸರ್ಕಾರದ ಕಾರ್ಯಕ್ರಮಗಳು ತಲುಪುವಂತೆ ನೋಡಿಕೊಳ್ಳಬೇಕು. ವೈದ್ಯ ವಲಯದ
ಎಲ್ಲ ಹಂತದ ಸಿಬ್ಬಂದಿಯ ರಕ್ಷಣೆ ಜವಾಬ್ದಾರಿ ಸರ್ಕಾರದ್ದು. ವೈದ್ಯಕೀಯ ಉಪಕರಣಗಳು ಸೇರಿದಂತೆ ಅವರಿಗೆ ಅಗತ್ಯವಾದ ಸೌಲಭ್ಯವನ್ನು ಸರ್ಕಾರ
ಒದಗಿಸಬೇಕು.

ರಾಜ್ಯದ ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ನಿಗಾ ಅಗತ್ಯ
 ನಳಿನ್‌ಕುಮಾರ್‌ ಕಟೀಲ್‌, ಬಿಜೆಪಿ ರಾಜ್ಯಾಧ್ಯಕ್ಷರು

1 ರಾಜ್ಯ ಸರ್ಕಾರ ಈಗಾಗಲೇ ರೂಪಿಸಿರುವ ಮಾರ್ಗಸೂಚಿಗಳನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಜಾರಿಗೊಳಿಸುವತ್ತ ಗಮನ ಹರಿಸಬೇಕು. ಹಾಗೆಯೇ
ಕೇಂದ್ರ ಸರ್ಕಾರ ನೀಡಲಿರುವ ಮಾರ್ಗಸೂಚಿಗಳನ್ನು ಯಥಾವತ್ತಾಗಿ ಪಾಲನೆಯಾಗುವಂತೆ ನೋಡಿಕೊಳ್ಳ‌ಬೇಕು.

2 ತುರ್ತು ಸೇವೆ, ಅನಿವಾರ್ಯ ಪ್ರಯಾಣಕ್ಕೆ ಪಾಸ್‌ಗಳನ್ನು ನೀಡುವಾಗ ಎಚ್ಚರ ವಹಿಸಬೇಕು. ದೆಹಲಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಿಂದಾಗಿ ಕೊರೊನಾ ಹರಡುವಿಕೆ ಇನ್ನಷ್ಟು ಹೆಚ್ಚಾಯಿತು. ಹಾಗಾಗಿ ಅನಗತ್ಯ ಸಂಚಾರಕ್ಕೆ ಕಡಿವಾಣ ಬೀಳಬೇಕು.

3 ಪೊಲೀಸರ ತಪಾಸಣೆ ಕಾರ್ಯ ಇನ್ನಷ್ಟು ಬಿಗಿಯಾಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಸಮುದಾಯದ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಸರ್ಕಾರ
ಕೈಗೊಂಡಿರುವ ಕ್ರಮಗಳನ್ನು ಪಾಲಿಸದವರು, ಉಲ್ಲಂಘಿಸುವವರ ವಿರುದಟಛಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು.

4 ಮದ್ಯ ಮಾರಾಟಕ್ಕೆ ವಿಶೇಷ ಅವಕಾಶ ನೀಡಲು ಸಾಧ್ಯವಾಗದು. ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು 48 ದಿನ ವ್ರತ ಅನುಸರಿಸುವಂತೆ ಮದ್ಯ ವರ್ಜಿಸಲು ಲಾಕ್‌ ಡೌನ್‌ ಅವಧಿ ಕೂಡ ಒಂದು ವ್ರತ ಎಂಬಂತೆ ಪಾಲಿಸುವತ್ತ ಚಿಂತಿಸಬೇಕು.

5 ರಾಜ್ಯದ ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ನಿಗಾ ವ್ಯವಸ್ಥೆ ಮಾಡಬೇಕು. ಮಹಾರಾಷ್ಟ್ರದಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕಟ್ಟುನಿಟ್ಟಿನ ನಿಗಾ ವಹಿಸಬೇಕು. ಕೇರಳದಲ್ಲಿ ಸೋಂಕು ನಿಯಂತ್ರಣಕ್ಕೆ ಬಂದಿದೆ. ಆದರೆ ಕಾಸರಗೋಡಿನಲ್ಲಿ ಹೆಚ್ಚಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲಿನಿಂದಲೇ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರಿಂದ ಸಂಪೂರ್ಣ ನಿಯಂತ್ರಣದಲ್ಲಿದೆ.

ಸಮಾಜದ ಎಲ್ಲಾ ವರ್ಗದವರನ್ನು ರಕ್ಷಿಸಿ
ಡಿ.ಕೆ.ಶಿವಕುಮಾರ್‌, ಕೆಪಿಸಿಸಿ ಅಧ್ಯಕ್ಷ

1 ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣ ವಿಷಯದಲ್ಲಿ ಇದುವರೆಗೂ ನೀಡಿರುವ ಭರವಸೆಯಂತೆ ನುಡಿದಂತೆ ನಡೆದುಕೊಳ್ಳಬೇಕು. ಎಲ್ಲ ವರ್ಗದವರನ್ನು ರಕ್ಷಿಸುವುದಾಗಿ ಹೇಳಿದ್ದರು. ಅದರಂತೆ ಪ್ರಚೋದನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಎಲ್ಲ ವರ್ಗದವರನ್ನು ರಕ್ಷಿಸುವ ಆದೇಶ ಹೊರಡಿಸಬೇಕು.

2 ಎಲ್ಲ ಪಕ್ಷದ ಕಾರ್ಯಕರ್ತರು ಸಹಾಯ ಮಾಡುವಾಗ ಅವರಿಗೆ ರಕ್ಷಣೆ ನೀಡಲಿ, ಅಗತ್ಯ ಕೆಲಸದ ಮೇಲೆ ಬರುವ ಸಾರ್ವಜನಿಕರಿಗೆ ತೊಂದರೆ ಕೊಡಬಾರದು.

3 ಸರ್ಕಾರ ಬಡವರಿಗೆ ನೀಡುತ್ತಿರುವ ಆಹಾರ ಮತ್ತು ಇತರೆ ಪದಾರ್ಥಗಳನ್ನು ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರು ತಮ್ಮದ ಪಕ್ಷದ ಸೇವೆ ಎನ್ನುವಂತೆ ದುರುಪ ಯೋಗಪಡಿಸಿಕೊಳ್ಳುತ್ತಿದ್ದಾರೆ. ಅದನ್ನು ತಡೆದು ಅಧಿಕಾರಿಗಳ ಮೂಲಕ ಹಂಚಿಕೆ ಮಾಡುವ ವ್ಯವಸ್ಥೆ ಮಾಡಲಿ.

4 ಬೆಳೆದ ಬೆಳೆಗಳನ್ನು ಮಾರಾಟ ಮಾಡಲಾಗದೆ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರ ನೇರವಾಗಿ ರೈತರು ಬೆಳೆದ ತರಕಾರಿ ಹಾಗೂ ಹಣ್ಣು ಹೂಗಳನ್ನು ಖರೀದಿಸಿ ಗ್ರಾಹಕರಿಗೆ ಕಡಿಮೆ ಬೆಲೆಗೆ ಮಾರಾಟ ಮಾಡುವ ವ್ಯವಸ್ಥೆ ಜಾರಿಗೊಳಿಸಲಿ.

5 ರೈತರು ಹಾಗೂ ಜನರು ಪಡೆದ ಸಾಲದ ಮೇಲಿನ ಕಂತು ಕಟ್ಟಲು ಅವಧಿ ಮುಂದೂಡಿರುವ ಬಗ್ಗೆ ಅಧಿಕೃತ ಆದೇಶ ಹೊರಡಿಸಿ, ರೈತರಿಗೆ ನೋಟಿಸ್‌ ನೀಡುವುದನ್ನು ನಿಲ್ಲಿಸಲಿ.

ಪೊಲೀಸರ ಬಗ್ಗೆಯೂ ಸರ್ಕಾರ ಕಾಳಜಿ ವಹಿಸಲಿ
? ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಸಿಎಂ

1 ಜನರ ಆರೋಗ್ಯ ದೃಷ್ಟಿ ಹಾಗೂ ಕೊರೊನಾ ನಿರ್ಮೂಲನೆಗೆ ಲಾಕ್‌ ಡೌನ್‌ ಪಾಲನೆ ಅನಿವಾರ್ಯ. ಅದಕ್ಕೆ ನಮ್ಮ ಬೆಂಬಲವಿದೆ. ಲಾಕ್‌ ಡೌನ್‌ ಕಟ್ಟುನಿಟ್ಟು ಜಾರಿ, ತಪಾಸಣೆ, ಸೋಂಕು ಪ್ರಕರಣಗಳ ಸರಿಯಾದ ನಿರ್ವಹಣೆಗೆ ಒತ್ತು ಕೊಡಬೇಕು. ವೈದ್ಯಕೀಯ ಸಿಬ್ಬಂದಿಗೆ ಅಗತ್ಯ ಸಲಕರಣೆ, ಸವಲತ್ತು ಒದಗಿಸಬೇಕು. ಭದ್ರತಾ ಕಾರ್ಯ ದಲ್ಲಿ ತೊಡಗಿರುವ ಪೊಲೀಸ್‌ ಸಿಬ್ಬಂದಿ ಬಗ್ಗೆಯೂ ಕಾಳಜಿ ವಹಿಸಬೇಕು.

2 ಆರೋಗ್ಯ, ವೈದ್ಯಕೀಯ ಶಿಕ್ಷಣ, ಗೃಹ, ಕೃಷಿ, ತೋಟಗಾರಿಕೆ, ಸಹಕಾರ, ಕಂದಾಯ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳಬೇಕು. ಲಾಕ್‌ಡೌನ್‌ನಿಂದ ದೈನಂದಿನ ಬದುಕು ಸಾಗಿಸಲು ಕಷ್ಟ ಪಡುತ್ತಿರುವವರ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು.

3 ಕೂಲಿ ಕಾರ್ಮಿಕರು, ರೈತರು, ಆಟೋ ಚಾಲಕರು, ಹೋಟೆಲ್‌ ಕಾರ್ಮಿಕರು, ಮನೆ ಕೆಲಸದವರು, ಗಾರ್ಮೆಂಟ್ಸ್‌ ನೌಕರರ ಜೀವನದ ಮೇಲಿನ ಪರಿಣಾಮ ಅಧ್ಯಯನ ಮಾಡಿ ಪರಿಹಾರ ಕಲ್ಪಿಸಬೇಕು.

4 ಪಡಿತರ ವಿತರಣೆ ಐದಾರು ದಿನದಲ್ಲಿ ಪೂರ್ಣಗೊಳ್ಳಲಿದೆ ಎಂದು ಹೇಳಲಾಗಿತ್ತು. ಕಾರ್ಡ್‌ ಇರುವವರಿಗೆ ಇನ್ನೂ ಪಡಿತರ ತಲುಪಿಲ್ಲ. ಕಾರ್ಡ್‌ ಇಲ್ಲದವರಿಗೆ ಪಡಿತರ ವಿತರಣೆ ಬರೀ ಘೋಷಣೆಗೆ ಸೀಮಿತವಾಗಿದೆ. ಆ ಬಗ್ಗೆ ಗಮನ ಹರಿಸಬೇಕು. ಅಗತ್ಯ ಇದ್ದವರಿಗೆ ಊಟ ನೀಡಬೇಕು. ಇದಕ್ಕೆ ಕೇರಳ ಮಾದರಿ ಅನುಸರಿಸಬೇಕು.

5 ರೈತರು ಬೆಳೆದ ತರಕಾರಿ, ಹಣ್ಣು, ಹೂವುಗಳನ್ನು ಸರ್ಕಾರವೇ ಖರೀದಿಸಿ ಸಾರ್ವಜನಿಕರಿಗೆ ಮಾರಾಟ ಮಾಡುವ ವ್ಯವಸ್ಥೆ ಮಾಡಬೇಕು. ಹಾಪ್‌ ಕಾಮ್ಸ…, ನಂದಿನಿ ಮಳಿಗೆಯನ್ನು ಅದಕ್ಕೆ ಬಳಸಿಕೊಳ್ಳಲಾಗುವುದು ಎಂಬುದು ಆಚರಣೆಗೆ ಬಂದಿಲ್ಲ. ತರಕಾರಿ, ಹಣ್ಣು, ಹೂ ಬೆಳೆಗಾರರ ನೆರವಿಗೂ ಸರ್ಕಾರ ಧಾವಿಸಬೇಕು. ಉಚಿತ ಹಾಲು ವಿತರಣೆ ಪರಿಹಾರಕ್ಕಿಂತ ಹೊಸ ಸಮಸ್ಯೆ ಸೃಷ್ಟಿಸಿದ್ದು, ಸರ್ಕಾರ ವ್ಯವಸ್ಥಿತ ಕ್ರಮ ರೂಪಿಸಬೇಕು.

ಪೂರ್ಣ ವೇತನ ಪಾವತಿಸಿ
? ವರಲಕ್ಷ್ಮೀ, ಸಿಐಟಿಯು ಅಧ್ಯಕ್ಷೆ

1 ಯಾವುದೇ ಕಾರ್ಖಾನೆ, ಉದ್ಯಮಗಳಲ್ಲಿ ಕಾರ್ಮಿಕರ ಸಂಖ್ಯೆ ಕಡಿತ ಆಗದಂತೆ ದಿನದ ಪಾಳಿ 4 ರಿಂದ 6 ಗಂಟೆ ಇರುವಂತೆ ಸರ್ಕಾರ ಆದೇಶ ಮಾಡಬೇಕು. ಕೆಲಸದ ಜಾಗದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕ್ರಮ ಕೈಗೊಳ್ಳಬೇಕು.

2 ಕಾರ್ಮಿಕರ ವೇತನದಲ್ಲಿ ಕಡಿತ ಮಾಡಬಾರದು. ಪೂರ್ಣ ವೇತನ ಪಾವತಿಸಲು ಸರ್ಕಾರ ಕಟ್ಟುನಿಟ್ಟಾಗಿ ಸೂಚಿಸಬೇಕು.

3 ಕಾರ್ಮಿಕರಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. 50ರಿಂದ 60 ವರ್ಷದವರಿಗೆ ಕೆಲಸದಿಂದ ವಿನಾಯಿತಿ ನೀಡಿ ವೇತನ ನೀಡುವಂತೆ ಸೂಚಿಸಬೇಕು.

4 ಕೋವಿಡ್-19 ಹಿನ್ನೆಲೆಯಲ್ಲಿ ಇಎಸ್‌ಐ ಆಸ್ಪತ್ರೆಗಳಲ್ಲಿ ಹಾಸಿಗೆ ವೆಂಟಿಲೇಟರ್‌ ಸೇರಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು.

5 ಅಸಂಘಟಿತ ಕಾರ್ಮಿಕರಿಗೆ ಸರ್ಕಾರದ ವತಿಯಿಂದಲೇ 3 ತಿಂಗಳ ಆಹಾರಧಾನ್ಯ ವಿತರಿಸಬೇಕು. ಕಟ್ಟಡ ಕಾರ್ಮಿಕರಿಗೆ ಸರ್ಕಾರ ಮಾಸಿಕ 5 ಸಾವಿರ ರೂ. ಪರಿಹಾರ ಕೊಡಬೇಕು.

ಎಪಿಎಂಸಿಗಳಲ್ಲಿ ದಲ್ಲಾಳಿಗಳ ಹಾವಳಿ ತಪ್ಪಿಸಿ
ಕೋಡಿಹಳ್ಳಿ ಚಂದ್ರಶೇಖರ್‌, ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ

1 ಲಾಕ್‌ ಡೌನ್‌ ರೈತರ ನಾಶಕ್ಕೆ ಆಗಿದೆಯೇನೊ ಎಂಬಂತಾಗಿದೆ. ದಯವಿಟ್ಟು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು.

2 ಎಪಿಎಂಸಿಗಳಲ್ಲಿ ಆನ್‌ ಲೈನ್‌ ಟ್ರೇಡಿಂಗ್‌ ಪ್ರಾರಂಭಿಸಿ ಮಧ್ಯವರ್ತಿಗಳು, ದಲ್ಲಾಳಿಗಳ ಹಾವಳಿ ತಪ್ಪಿಸಿ ರೈತ, ಸಗಟು ವ್ಯಾಪಾರಸ್ಥ ನಡುವೆ ಮಾತ್ರ ವ್ಯವಹಾರ ನಡೆಯುವಂತೆ ನೋಡಿಕೊಳ್ಳಬೇಕು.

3 ರೈತ ಬೆಳೆದ ತರಕಾರಿ ಹಣ್ಣುಗಳನ್ನು ಸರ್ಕಾರವೇ ಖರೀದಿಸಿ ಜನರಿಗೆ ತಲುಪಿಸಬೇಕು. ಇಲ್ಲವೇ ಬೀದಿ ಬದಿ ವ್ಯಾಪಾರಸ್ಥರು ಹಾಗೂ ಜನರ ಮನೆ ಬಾಗಿಲಿಗೆ ತಲುಪಿಸಲು ಸಿದ್ಧ ಇರುವ ಸಂಸ್ಥೆಗಳಿಗೆ ಅನುವು ಮಾಡಿಕೊಡಬೇಕು.

4 ರೈತರ ಉತ್ಪನ್ನ ಸಾಗಣೆಗೆ ಉಚಿತ ವ್ಯವಸ್ಥೆ ಕಲ್ಪಿಸಬೇಕು. ರಾಜ್ಯ ಸರ್ಕಾರವೇ ಆಹಾರ ಧಾನ್ಯ ಖರೀದಿಸಿ ಪಡಿತರ ವ್ಯವಸ್ಥೆಗೆ ಬಳಕೆ ಮಾಡಿಕೊಳ್ಳಬೇಕು.

5 ರೈತರ ಆರ್ಥಿಕ ಸ್ಥಿತಿ ಕಷ್ಟಕರವಾಗಿದ್ದು, ಕೃಷಿ ಚಟುವಟಿಕೆಗಳಿಗೆ ಬಿತ್ತನೆ ಬೀಜ, ರಸಗೊಬ್ಬರ ಖರೀದಿಗೆ ಸಾಲ ನೀಡಬೇಕು.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.