ರಾಜ್ಯದಲ್ಲಿ ಪ್ರವಾಹ; 4 ಸಾವಿರ ಕೋಟಿ ರೂ. ವಿಶೇಷ ಆರ್ಥಿಕ ನೆರವು ಒದಗಿಸಲು ಕೇಂದ್ರಕ್ಕೆ ಮನವಿ
ಸಿಎಂ ಅನುಪಸ್ಥಿತಿಯಲ್ಲಿ ಸಚಿವರು ಭಾಗಿ; ನೆರವಿನ ಭರವಸೆ ನೀಡಿದ ಪ್ರಧಾನಿ ಮೋದಿ
Team Udayavani, Aug 11, 2020, 6:15 AM IST
ಹೊಸದಿಲ್ಲಿ/ ಬೆಂಗಳೂರು: ಪ್ರವಾಹಪೀಡಿತ ಆರು ರಾಜ್ಯಗಳ ಮುಖ್ಯಮಂತ್ರಿಗಳ ಜತೆಗೆ ಪ್ರಧಾನಿ ಮೋದಿ ವೀಡಿಯೋ ಸಂವಾದ ನಡೆಸಿದರು. ಕರ್ನಾಟಕದ ಸಿಎಂ ಪರವಾಗಿ ಸಚಿವರು ಪಾಲ್ಗೊಂಡಿದ್ದರು.
ಬೆಂಗಳೂರು: ರಾಜ್ಯದಲ್ಲಿ ಭಾರೀ ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾದವರಿಗೆ ಪರಿಹಾರ ಮತ್ತು ತುರ್ತು ಕಾಮಗಾರಿಗಳಿಗೆ ನಾಲ್ಕು ಸಾವಿರ ಕೋಟಿ ರೂಪಾಯಿಗಳ ವಿಶೇಷ ಆರ್ಥಿಕ ನೆರವು ನೀಡುವಂತೆ ಪ್ರಧಾನಿ ಮೋದಿಯವರಿಗೆ ರಾಜ್ಯ ಸರಕಾರ ಮನವಿ ಮಾಡಿದೆ.
ರಾಜ್ಯದ 12 ಜಿಲ್ಲೆಗಳಲ್ಲಿ ಪ್ರವಾಹದಿಂದ 80 ಸಾವಿರ ಹೆಕ್ಟೇರ್ ಬೆಳೆ ನಷ್ಟವಾಗಿದೆ, ರಸ್ತೆ, ಸೇತುವೆ ಸೇರಿ ಮೂಲಸೌಕರ್ಯಗಳಿಗೆ ಸಾಕಷ್ಟು ಹಾನಿಯಾಗಿದೆ. ಪ್ರಾಥಮಿಕ ಅಂದಾಜು ಪ್ರಕಾರ 4 ಸಾವಿರ ಕೋಟಿ ರೂ. ನಷ್ಟವುಂಟಾ ಗಿದೆ. ಪೂರ್ಣ ಮಾಹಿತಿ ಸಂಗ್ರಹ ಅನಂತರ ಅದರ ಪ್ರಮಾಣ ಹೆಚ್ಚಾಗಬಹುದು. ಹೀಗಾಗಿ ತತ್‌ಕ್ಷಣದ ಪರಿಹಾರ ಕಾರ್ಯಗಳಿಗೆ ನೆರವು ಅಗತ್ಯ ಇದೆ ಎಂದು ಪ್ರಧಾನಿ ಜತೆಗೆ ವೀಡಿಯೋ ಕಾನ್ಫರೆನ್ಸ್ ಸಂದರ್ಭ ಪ್ರವಾಹ ಪರಿಸ್ಥಿತಿಯ ಕುರಿತು ಮಾಹಿತಿ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಅಶೋಕ್ ತಿಳಿಸಿದರು.
ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಿ ಎಂದು ಮೋದಿಯವರು ಇದೇ ಸಂದರ್ಭದಲ್ಲಿ ಸೂಚಿಸಿ, ನೆರವಿನ ಭರವಸೆ ನೀಡಿದರು. ಜತೆಗೆ ಪ್ರವಾಹದಲ್ಲಿ ಮೃತಪಟ್ಟವರ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ ಪ್ರಧಾನಿ, ಜನ ಮತ್ತು ಜಾನುವಾರುಗಳ ರಕ್ಷಣೆಗೆ ಆದ್ಯತೆ ನೀಡಿ ಎಂದು ಸಲಹೆಯಿತ್ತರು.
ರಾಜ್ಯದ ಪ್ರವಾಹ ಪರಿಸ್ಥಿತಿಯನ್ನು ಪ್ರಧಾನಿ ಯವರಿಗೆ ವಿವರಿಸಿದ್ದೇವೆ. 4 ಸಾವಿರ ಕೋ.ರೂ. ವಿಶೇಷ ಆರ್ಥಿಕ ನೆರವು ಕೋರಿದ್ದೇವೆ ಎಂದು ಸಚಿವ ಅಶೋಕ್ ವೀಡಿಯೋ ಸಂವಾದದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ತತ್‌ಕ್ಷಣದ ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳಿಗಾಗಿ ಎಸ್‌ಡಿಆರ್‌ಎಫ್‌ನ ನೆರವು ಕಂತು 395 ಕೋಟಿ ರೂ.ಗಳನ್ನು ತುರ್ತಾಗಿ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇವೆ ಎಂದು ಅಶೋಕ್ ತಿಳಿಸಿದರು.
4 ಸಾವಿರ ಕೋಟಿ ರೂ. ನೀಡಿ
ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸಲು ಈಗಾಗಲೇ ತರಬೇತಿ ಪಡೆದ 200 ಎಸ್‌ಡಿಆರ್‌ಎಫ್ ಸಿಬಂದಿ, ನಾಲ್ಕು ಎನ್‌ಡಿಆರ್‌ಎಫ್ ತಂಡಗಳು ಮತ್ತು ನಾಲ್ಕು ರಕ್ಷಣ ಹೆಲಿಕಾಪ್ಟರ್‌ಗಳನ್ನು ಒದಗಿಸಲಾಗಿದ್ದು, ಹೆಚ್ಚುವರಿಯಾಗಿ 4 ಎನ್‌ಡಿಆರ್‌ಎಫ್ ತಂಡಗಳನ್ನು ಕಳುಹಿಸಲು ಕೋರಿದ್ದೇವೆ ಎಂದರು.
ದೀರ್ಘಾವಧಿ ಪರಿಹಾರವಾಗಿ ಕಾವೇರಿ ಮತ್ತು ಕೃಷ್ಣಾ ನದಿ ಪಾತ್ರಗಳಲ್ಲಿ ಹಾಗೂ ಪಶ್ಚಿಮ ಘಟ್ಟಗಳು ವ್ಯಾಪಿಸಿರುವ ನೆರೆ ರಾಜ್ಯಗಳಲ್ಲಿ ಭೂಕುಸಿತಕ್ಕೆ ಸಂಬಂಧಿಸಿ ಮ್ಯಾಪಿಂಗ್ ಮತ್ತು ಮುನ್ಸೂಚನೆ ವ್ಯವಸ್ಥೆಯನ್ನು ಸ್ಥಾಪಿಸುವ ಕುರಿತು ಕೇಂದ್ರ ಭೂ ವಿಜ್ಞಾನ ಸರ್ವೇಕ್ಷಣ ಇಲಾಖೆ ವತಿಯಿಂದ ಅಧ್ಯಯನ ಕೈಗೊಳ್ಳುವಂತೆಯೂ ಮನವಿ ಮಾಡಲಾಗಿದೆ. ಕೇಂದ್ರ ಜಲ ಆಯೋಗದ ವತಿಯಿಂದ ಕೃಷ್ಣಾ ನದಿ ಪಾತ್ರ ದಲ್ಲಿ ಪ್ರವಾಹ ಪರಿಸ್ಥಿತಿ ಮುನ್ಸೂಚನೆ ವ್ಯವಸ್ಥೆ ಸ್ಥಾಪಿಸಬೇಕು. ಕಡಲ್ಕೊರೆತ ನಿಯಂ ತ್ರಣಕ್ಕಾಗಿ ನ್ಯಾಷನಲ್ ಸೈಕ್ಲೋನ್ ಮಿಟಿಗೇಶನ್ ರಿಲೀಫ್ ಪ್ರಾಜೆಕr… ಯೋಜನೆ ಯಡಿ ಕಡಲು ಕೊರೆತ ಸೇರ್ಪಡೆಗೊಳಿಸಲು ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದರು.
ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯ ಚುರುಕುಗೊಳಿಸಲಾಗಿದೆ. ಸಂಕಷ್ಟಕ್ಕೆ ಸಿಲುಕಿದವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕೆಲಸವನ್ನು ರಾಜ್ಯ ಮತ್ತು ಕೇಂದ್ರದ ಪಡೆಗಳ ಜತೆಗೂಡಿ ಮಾಡಲಾಗಿದೆ. ಈ ನಿಟ್ಟಿನಲ್ಲಿ ಮತ್ತಷ್ಟು ನೆರವನ್ನೂ ಕೇಂದ್ರದಿಂದ ಕೋರಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಪಾಲ್ಗೊಂಡಿದ್ದರು.
6 ರಾಜ್ಯಗಳ ಸಿಎಂಗಳ ಜತೆಗೆ ಮೋದಿ ಚರ್ಚೆ
ಹೊಸದಿಲ್ಲಿ: ದೇಶದ ವಿವಿಧ ಭಾಗಗಳಲ್ಲಿ ಮಳೆಯಿಂದ ಉಂಟಾಗಿರುವ ಪ್ರವಾಹ ಸ್ಥಿತಿ ಮತ್ತು ಹಾನಿಯ ಬಗ್ಗೆ ಪ್ರಧಾನಿ ಮೋದಿ ಸೋಮವಾರ ಪರಿಶೀಲನೆ ನಡೆ ಸಿದ್ದು, ಪ್ರವಾಹಪೀಡಿತ 6 ರಾಜ್ಯಗಳ ಮುಖ್ಯ ಮಂತ್ರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದ್ದಾರೆ.
ಕೇರಳ, ಅಸ್ಸಾಂ, ಬಿಹಾರ, ಉತ್ತರಪ್ರದೇಶ ಮತ್ತು ಮಹಾರಾಷ್ಟ್ರದ ಸಿಎಂಗಳು ಈ ಸಭೆಯಲ್ಲಿ ಭಾಗಿಯಾಗಿದ್ದರು. ಕರ್ನಾಟಕ ಸಿಎಂ ಪರವಾಗಿ ಗೃಹ ಮತ್ತು ಕಂದಾಯ ಸಚಿವರು ಭಾಗವಹಿಸಿದ್ದರು. ಪ್ರವಾಹ ಮುನ್ಸೂಚನೆಗೆ ಶಾಶ್ವತ ವ್ಯವಸ್ಥೆಯೊಂದನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯದ ಎಲ್ಲ ಸಂಸ್ಥೆಗಳ ನಡುವೆ ಉತ್ತಮ ಸಮನ್ವಯ ಏರ್ಪಡಬೇಕು ಎಂದು ಪ್ರಧಾನಿ ಮೋದಿ ಅಭಿಪ್ರಾಯ ಪಟ್ಟಿದ್ದಾರೆ. ಇದಕ್ಕಾಗಿ ಹೊಸ ತಂತ್ರಜ್ಞಾನಗಳನ್ನು ವ್ಯಾಪಕವಾಗಿ ಬಳಸುವಂತೆಯೂ ಪ್ರಧಾನಿ ಮೋದಿ ಅವರು ಸಲಹೆ ನೀಡಿದ್ದಾರೆ.
ಸ್ಥಳೀಯ ವ್ಯವಸ್ಥೆಗೆ ಉತ್ತೇಜನ
ಸ್ಥಳೀಯವಾಗಿ ಮುನ್ಸೂಚನೆ ನೀಡುವಂಥ ಎಚ್ಚರಿಕೆ ವ್ಯವಸ್ಥೆಗಳಲ್ಲಿ ಹೂಡಿಕೆಗೆ ಉತ್ತೇಜನ ನೀಡಬೇಕು. ನದಿ ಅಪಾಯದ ಮಟ್ಟ ಮೀರಿ ಹರಿಯುವುದು, ಮುಳುಗಡೆ ಸ್ಥಿತಿ ಅಥವಾ ಸಿಡಿಲು ಮತ್ತಿತರ ಅಪಾಯಗಳು ಎದುರಾದಾಗ ಸ್ಥಳೀಯ ಮಟ್ಟದಲ್ಲೇ ಜನರಿಗೆ ಎಚ್ಚರಿಕೆ ನೀಡಲು ಇದು ಸಹಾಯಕವಾಗುತ್ತದೆ ಎಂದೂ ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಸುಮಾರು ಒಂದೂವರೆ ತಾಸು ಕಾಲ ಸಂವಾದ ನಡೆದಿದ್ದು, ಪ್ರವಾಹ ಪರಿಹಾರ ಸಾಮಗ್ರಿಗಳಲ್ಲಿ ಮಾಸ್ಕ್, ಕೈತೊಳೆಯುವ ವ್ಯವಸ್ಥೆ, ಸ್ಯಾನಿಟೈಸರ್‌ಗಳೂ ಒಳಗೊಂಡಿ ರುವಂತೆ ನೋಡಿಕೊಳ್ಳಿ. ಪ್ರವಾಹ ಸ್ಥಿತಿಯ ನಡುವೆಯೇ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳೂ ಪಾಲನೆಯಾಗುವಂತೆ ನೋಡಿಕೊಳ್ಳಿ ಎಂದೂ ಮೋದಿ ಸೂಚಿಸಿದ್ದಾರೆ.
885 ಗ್ರಾಮಗಳಿಗೆ ಹಾನಿ
ಹಾನಿಗೀಡಾದ ಜಿಲ್ಲೆಗಳು
ಬೆಳಗಾವಿ, ರಾಯಚೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ
56 ಹಾನಿಗೀಡಾದ ತಾಲೂಕುಗಳು
3000 ಹಾನಿಗೊಂಡ ಮನೆಗಳ ಸಂಖ್ಯೆ
80 ಸಾವಿರ ಹೆಕ್ಟೇರ್ ಕೃಷಿ, ತೋಟಗಾರಿಕೆ ಬೆಳೆ ನಾಶ
3,500 ಕಿ.ಮೀ. -ರಸ್ತೆ ಹಾಳು
104 ಸಣ್ಣ ನೀರಾವರಿ ಕೆರೆಗಳಿಗೆ ಹಾನಿ
394 ಕಟ್ಟಡಗಳಿಗೆ ಹಾನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.