ನೆರೆ: ಸಾವಿನ ಸಂಖ್ಯೆ 76ಕ್ಕೆ ಏರಿಕೆ
Team Udayavani, Aug 19, 2019, 3:00 AM IST
ಬೆಂಗಳೂರು: ರಾಜ್ಯದ ಪ್ರವಾಹ ಪರಿಸ್ಥಿತಿಗೆ ಸಿಲುಕಿ ಸಾವಿಗೀಡಾದವರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ. 10 ಜನ ಕಾಣೆಯಾಗಿದ್ದಾರೆಂದು ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಿದೆ. ರಾಜ್ಯದ 22 ಜಿಲ್ಲೆಗಳ 103 ತಾಲೂಕುಗಳು ಪ್ರವಾಹಕ್ಕೆ ತುತ್ತಾಗಿದ್ದು, ಸಂತ್ರಸ್ತರ ನೆರವಿಗೆ 526 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 2.20 ಲಕ್ಷ ಜನರು ಪರಿಹಾರ ಕೇಂದ್ರಗಳಲ್ಲಿ ರಕ್ಷಣೆ ಪಡೆದುಕೊಂಡಿದ್ದಾರೆ. 992 ಜಾನುವಾರುಗಳು ಪ್ರಾಣ ಕಳೆದುಕೊಂಡಿವೆ. ಪ್ರವಾಹದಿಂದಾಗಿ 6.9 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, 75,317 ಮನೆಗಳು ಜಖಂಗೊಂಡಿವೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ಕಟ್ಟಡ ಕುಸಿದು ವೃದ್ಧೆ ಸಾವು: ಮಗನ ಮೇಲೆ ಮುನಿಸಿಕೊಂಡು ಮನೆ ತೊರೆದು ಶಿಥಿಲ ಕಟ್ಟಡದಲ್ಲಿ ಆಶ್ರಯ ಪಡೆದಿದ್ದ ವೃದ್ಧೆಯೋ ರ್ವರು ಕಟ್ಟಡ ಕುಸಿದು ಬಿದ್ದು, ಮೃತಪಟ್ಟಿದ್ದಾರೆ.ಮೂಡುಬಿದಿರೆ ಸಮೀಪದ ಕಡಂದಲೆ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆಗೆ ಸಂಬಂಧಿಸಿದ ಹಳೆಯ ಕಟ್ಟಡದಲ್ಲಿ ಅನಧಿಕೃತವಾಗಿ ವಾಸವಿದ್ದ ಮೀನಾಕ್ಷಿ (65) ಮೃತಪಟ್ಟವರು. ಮಗನ ಮನೆಯಿಂದ ಕಾರಣಾಂತರದಿಂದ ಬೇರ್ಪಟ್ಟು ಇಲ್ಲಿ ವಾಸವಾಗಿದ್ದರು. ಈ ಕಟ್ಟಡ ಶಿಥಿಲವಾಗಿದೆ, ಇಲ್ಲಿರುವುದು ಕ್ಷೇಮವಲ್ಲ ಎಂದು ಶಾಲಾ ಸಂಚಾಲಕರು ಮೊದಲೇ ಸೂಚಿಸಿದ್ದರೂ ಆಕೆ ಅಲ್ಲಿಂದ ಹೋಗಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?
BJP Rift; ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ ಶಾಸಕ ಬಿ.ಪಿ. ಹರೀಶ್
ಜ.21 ರಂದು ಬೆಳಗಾವಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
MUST WATCH
ಹೊಸ ಸೇರ್ಪಡೆ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್‌ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.