17 ಜಿಲ್ಲೆಗಳಲ್ಲಿ ಪ್ರವಾಹ; 80 ತಾಲೂಕುಗಳು ಪ್ರವಾಹ ಪೀಡಿತ ಎಂದು ಘೋಷಣೆ


Team Udayavani, Aug 11, 2019, 6:00 AM IST

1008ks12b-ph

ಬಂಟ್ವಾಳ: ಬಡ್ಡಕಟ್ಟೆ ಪರಿಸರದಲ್ಲಿ ನೆರೆ ನೀರು ವಸತಿ ಪ್ರದೇಶಗಳಿಗೆ ನುಗ್ಗಿತು.

ಬೆಂಗಳೂರು: ಅತಿವೃಷ್ಟಿಯಿಂದಾಗಿ ತೊಂದರೆಗೀಡಾಗಿರುವ ರಾಜ್ಯದ 17 ಜಿಲ್ಲೆಗಳ 80 ತಾಲೂಕುಗಳನ್ನು ಪ್ರವಾಹಪೀಡಿತ ಎಂದು ರಾಜ್ಯ ಸರಕಾರ ಘೋಷಿಸಿದೆ.

ಗೃಹ ಕಚೇರಿ “ಕೃಷ್ಣಾ’ದಲ್ಲಿ ಶನಿವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ರಾಜ್ಯ ಹಾಗೂ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಭಾಗದಲ್ಲಿ ಪ್ರವಾಹ, ಭೂಕುಸಿತದಿಂದಾಗಿ ಜನ ತೀವ್ರ ಸಂಕಷ್ಟದಲ್ಲಿದ್ದಾರೆ. ದೊಡ್ಡ ಪ್ರಮಾಣದಲ್ಲಿ ಆಸ್ತಿಪಾಸ್ತಿ ನಷ್ಟವಾಗಿದೆ. ರಾಜ್ಯದ ಅರ್ಧ ಭಾಗ ಮಳೆಯ ರುದ್ರ ನರ್ತನ, ಪ್ರವಾಹ ವಿಕೋಪಕ್ಕೆ ಸಿಲುಕಿದೆ. ಕಳೆದ 45 ವರ್ಷ ಗಳಲ್ಲಿ ಇಷ್ಟು ಭೀಕರ ಪ್ರವಾಹ ಪರಿಸ್ಥಿತಿಯನ್ನು ರಾಜ್ಯ ಕಂಡಿರಲಿಲ್ಲ. ನೆರೆಯಿಂದಾಗಿ 17 ಜಿಲ್ಲೆಗಳ 80 ತಾಲೂಕುಗಳನ್ನು ಪ್ರವಾಹಪೀಡಿತವೆಂದು ಘೋಷಿಸಲಾಗಿದೆ ಎಂದು ತಿಳಿಸಿದರು.

24 ಮಂದಿ ಸಾವು
ಸದ್ಯದ ಮಾಹಿತಿ ಪ್ರಕಾರ ಈ ವರೆಗೆ 24 ಮಂದಿ ಮೃತಪಟ್ಟಿದ್ದಾರೆ. ಕೊಡಗಿನಲ್ಲಿ ಗುಡ್ಡ ಕುಸಿದು ಇಬ್ಬರು ಸಾವನ್ನಪ್ಪಿದ್ದು, ಇಬ್ಬರನ್ನು ರಕ್ಷಣೆ ಮಾಡಲಾಗಿದೆ ಎಂಬ ಮಾಹಿತಿ ಇದೆ. ಮೃತರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ಮೃತಪಟ್ಟ ಜಾನುವಾರುಗಳಿಗೆ 30,000 ರೂ., ಕರು ಸಹಿತ ಇತರ ಜಾನುವಾರು ಗಳಿಗೆ 15,000 ರೂ. ಪರಿಹಾರ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ಮಹಾರಾಷ್ಟ್ರ ಮುಖ್ಯಮಂತ್ರಿಗಳನ್ನು ನಿತ್ಯ 5-6 ಬಾರಿ ಸಂಪರ್ಕಿಸುತ್ತಿದ್ದು, ಮಹಾರಾಷ್ಟ್ರ, ಕರ್ನಾಟಕದ ಪರಿಸ್ಥಿತಿ ಭಿನ್ನವಾಗಿಲ್ಲ. ಒಂದೆರಡು ದಿನಗಳಲ್ಲಿ ನಿಯಂತ್ರಣಕ್ಕೆ ಬರುವ ನಿರೀಕ್ಷೆ ಇದೆ. ಮಹಾರಾಷ್ಟ್ರದ ಜಲಾಶಯಗಳಿಂದ ಬಿಡುಗಡೆ ಯಾಗುತ್ತಿರುವ ನೀರಿನ ಪ್ರಮಾಣದ ಬಗ್ಗೆ ಅಧಿಕಾರಿಗಳು ನಿಗಾ ವಹಿಸಿದ್ದು, ನದಿ ತೀರದ ಗ್ರಾಮಗಳಿಗೆ ಎಚ್ಚರಿಕೆ ಸಂದೇಶ ನೀಡಲಾಗಿದೆ. ಮಲೆನಾಡು ಭಾಗದ ಜಲಾಶಯಗಳ ಒಳ, ಹೊರ ಹರಿವನ್ನು ವ್ಯವಸ್ಥಿತವಾಗಿ ನಿಯಂತ್ರಿಸಲಾಗುತ್ತಿದೆ. ಹೇಮಾವತಿ, ತುಂಗಭದ್ರಾ ನದಿಯಿಂದ ಕಾಲುವೆ ಗಳಿಗೆ ನೀರು ಹರಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕಳೆದ ಸೋಮವಾರ ರಾಯಚೂರು, ಯಾದ ಗಿರಿ, ಗದಗ, ವಿಜಯಪುರ, ಬಾಗಲಕೋಟೆ, ಬೆಳಗಾವಿಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಅನಂತರ ದಿಲ್ಲಿಗೆ ತೆರಳಿ ಪ್ರಧಾನಿ, ಕೇಂದ್ರ ಗೃಹ ಸಚಿವರ ಸಹಿತ ಹಲವು ಸಚಿವರನ್ನು ಭೇಟಿಯಾಗಿ ರಾಜ್ಯದ ಪ್ರವಾಹ ಸ್ಥಿತಿ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದ್ದೇನೆ ಎಂದು ಹೇಳಿದರು.

ಮೂರ್‍ನಾಲ್ಕು ದಿನಗಳಿಂದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿದ್ದು ಪರಿಸ್ಥಿತಿ ಗಂಭೀರವಾಗುತ್ತಿದೆ.

ಮಂಗಳೂರಿಗೆ ರೈಲು, ರಸ್ತೆ ಸಂಪರ್ಕ ಕಡಿತವಾಗಿದೆ. ಕೆಲವೆಡೆ ಭೂಕುಸಿತದಿಂದ ಸಾವು ನೋವು ಸಂಭವಿಸಿದೆ. ದಿಲ್ಲಿ ಪ್ರವಾಸ ಮೊಟಕುಗೊಳಿಸಿದ ನಾನು ಬೆಳಗಾವಿ, ಬಾಗಲಕೋಟೆ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಎಲ್ಲೆಡೆ ರಕ್ಷಣಾ ಕಾರ್ಯಾಚರಣೆ ಸಿಬಂದಿ ನೈತಿಕ ಸ್ಥೈರ್ಯ ತುಂಬುವ ಕೆಲಸ ಮಾಡಿದ್ದೇನೆ ಎಂದು ಹೇಳಿದರು.

100 ಕೋಟಿ ರೂ. ಬಿಡುಗಡೆ
ಎಲ್ಲ ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ ಹಣವಿದ್ದರೂ ರಾಜ್ಯ ಸರಕಾರದಿಂದ 100 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ದೇವರ ದಯೆಯಿಂದ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮಳೆ ಕಡಿಮೆಯಾಗುತ್ತಿದ್ದು, 3-4 ದಿನಗಳಲ್ಲಿ ನಿಯಂತ್ರಣಕ್ಕೆ ಸಿಗುವ ನಿರೀಕ್ಷೆ ಇದೆ. ಸುರಕ್ಷತೆ ಮತ್ತು ಪುನರ್ವಸತಿಗೆ ಎಷ್ಟೇ ಹಣ ಖರ್ಚಾಗಲಿ, ಬೇರೆ ಕಾರ್ಯಕ್ರಮ ನಿಲ್ಲಿಸಿಯಾದರೂ ತತ್‌ಕ್ಷಣ ಪುನರ್ವಸತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಾಕಷ್ಟು ಸವಾಲು
ನಿರಾಶ್ರಿತರ ರಕ್ಷಣಾ ಕೇಂದ್ರಗಳಲ್ಲಿರುವವರು ತತ್‌ಕ್ಷಣ ವಾಪಸ್‌ ತಮ್ಮ ಮನೆಗೆ ಹೋಗಲು ಸಾಧ್ಯವಿಲ್ಲ. ಪರ್ಯಾಯ ವ್ಯವಸ್ಥೆ ಕಲ್ಪಿಸುವವರೆಗೆ ಅವರಿಗೆ ರಕ್ಷಣಾ ಕೇಂದ್ರಗಳಲ್ಲಿ ಊಟ, ವಸತಿ ವ್ಯವಸ್ಥೆ ಕಲ್ಪಿಸಬೇಕಿದ್ದು, ಅದಕ್ಕೆ ಅಗತ್ಯ ವ್ಯವಸ್ಥೆಯನ್ನು ಜಿಲ್ಲಾಡಳಿತಗಳು ಮಾಡಲಿವೆ. ಕೆಲವು ಗ್ರಾಮಗಳನ್ನು ಶೇ. 100ರಷ್ಟು ಸ್ಥಳಾಂತರಿಸಬೇಕಿದೆ. ಭೂಮಿ ಖರೀದಿಸಿ ವಸತಿ ಸೌಲಭ್ಯ ಕಲ್ಪಿಸಬೇಕಿದೆ. ಈ ರೀತಿ ಅನೇಕ ಸಮಸ್ಯೆಗಳಿವೆ ಎಂದು ಯಡಿಯೂರಪ್ಪ ಹೇಳಿದರು.

ಒಂದು ತಿಂಗಳು ಬೇಕು
ನಷ್ಟದ ನಿಖರ ಮಾಹಿತಿ ತಿಳಿಯಲು ಒಂದು ತಿಂಗಳ ಕಾಲಾವಕಾಶ ಬೇಕು. ಆ ಬಳಿಕವಷ್ಟೇ ಶಾಶ್ವತ ಪರಿಹಾರ ಕಾರ್ಯದ ವೆಚ್ಚ ಲೆಕ್ಕ ಹಾಕಲು ಸಾಧ್ಯ. ಹಾನಿಗೊಳಗಾದ ಗ್ರಾಮಗಳನ್ನು ಸ್ಥಳಾಂತರಿಸಿ ಹೊಸ ಗ್ರಾಮ ನಿರ್ಮಿಸಬೇಕಾಗುತ್ತದೆ. ಇದಕ್ಕೆಲ್ಲ ತಗಲುವ ಮೊತ್ತವನ್ನು ಕಲ್ಪನೆ ಮಾಡಿಕೊಳ್ಳಲು ಸಾಧ್ಯವಿಲ್ಲ. ನಷ್ಟದ ವಿವರ ಗೊತ್ತಾದ ಬಳಿಕ ರಾಜ್ಯ ಹಾಗೂ ಕೇಂದ್ರ ಸರಕಾರ ಏನೆಲ್ಲ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ನಿರ್ಧರಿಸಲಾಗುವುದು. ಸದ್ಯ ಪರಿಹಾರ ಕಾರ್ಯಕ್ಕೆ 1,000 ಕೋಟಿ ರೂ. ಅಗತ್ಯವಿದೆ. ಉದ್ಯಮಿಗಳು, ಕಾರ್ಪೊರೇಟ್‌ ಕಂಪೆನಿಗಳು ಉದಾರವಾಗಿ ನೆರವು ನೀಡಬೇಕು. ಒಂದು ರೂಪಾಯಿ ಕೂಡ ದುರುಪಯೋಗವಾಗದಂತೆ ಸದ್ಬಳಕೆ ಮಾಡಿಕೊಂಡು ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಹೇಳಿದರು.

ರಕ್ಷಣಾ ಕಾರ್ಯದ ವಿವರ
-ಭೂಸೇನೆ, ನೌಕಾಪಡೆ, ವಾಯುಪಡೆ ಸೇವೆ ಬಳಕೆ
-ಎನ್‌ಡಿಆರ್‌ಎಫ್ 20 ತಂಡ
-ಭೂಸೇನೆಯ 11 ತಂಡ
-ನೌಕಾಪಡೆಯ 5 ತಂಡ, ದೋಣಿಗಳು
-ವಾಯುಪಡೆಯ 4 ಹೆಲಿಕಾಪ್ಟರ್‌
-ಎಸ್‌ಡಿಆರ್‌ಎಫ್ 2 ತಂಡ
-ಅಗ್ನಿಶಾಮಕ, ಪೊಲೀಸ್‌ ಸಿಬಂದಿ

ನಲುಗಿದ ದ.ಕ.
ಮಂಗಳೂರು/ಬಂಟ್ವಾಳ: ಆಶ್ಲೇಷಾ ಮಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಹಾನಿ ಮಾಡಿದೆ. ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ, ಪುತ್ತೂರು, ಮಂಗಳೂರು ತಾಲೂಕಿನ ವ್ಯಾಪಕ ನಾಶ ನಷ್ಟ ಸಂಭವಿಸಿದೆ.

ಶುಕ್ರವಾರ ಆರಂಭಗೊಂಡ ಬಿರುಸಿನ ಗಾಳಿ ಮಳೆ ಶನಿವಾರ ಸಂಜೆಯ ವೇಳೆಗೆ ಸ್ವಲ್ಪ ಕಡಿಮೆಯಾಯಿತು. ನೇತ್ರಾವತಿ ನದಿ 1974ರ ಬಳಿಕ ಮೊದಲ ಬಾರಿಗೆ ತೀರಾ ಅಪಾಯಕಾರಿ ಮಟ್ಟ ತಲುಪಿ ಹರಿಯಿತು. ಶನಿವಾರ ಬೆಳಗ್ಗೆ ನೆರೆ ನೀರಿನ ಮಟ್ಟ 11.6 ಮೀಟರ್‌ವರೆಗೆ ತಲುಪಿ ಬಂಟ್ವಾಳ ತಾಲೂಕಿನ ಹೆಚ್ಚಿನ ಭಾಗ ಜಲಾವೃತಗೊಂಡಿತು. 45 ವರ್ಷಗಳ ಬಳಿಕ ಮೊದಲ ಬಾರಿಗೆ ಪೇಟೆಯ ಹಲವಾರು ಅಂಗಡಿ, ಮುಂಗಟ್ಟುಗಳು ಮುಳುಗಡೆಯಾಯಿತು. ಕೆಲವು ಕಡೆಯ ರಸ್ತೆ ಸಂಪರ್ಕಗಳು ಕಡಿದವು.

ಬೆಳ್ತಂಗಡಿಯಲ್ಲಿಯೂ ಅಪಾರ ನಷ್ಟ ಸಂಭ ವಿಸಿವೆ. ಶುಕ್ರವಾರ ನೆರೆ ಎಲ್ಲೆಂದರಲ್ಲಿ ನುಗ್ಗಿದ್ದು, ಹಲವಾರು ಎಕರೆ ಕೃಷಿ ನಾಮಾವಶೇಷವಾಗಿವೆ. ಕೆಲವು ರಸ್ತೆಗಳು ಕಡಿದು ಹೋಗಿದೆ. ನಡು ಗಡ್ಡೆಯಲ್ಲಿ ಸಿಲುಕಿದ್ದವರನ್ನು ರಕ್ಷಿಸಲಾಗಿದೆ.ಮಂಗಳೂರು ನಗರದ ಜಪ್ಪಿನಮೊಗರು, ಉಳ್ಳಾಲ, ಕಿನ್ನಿಗೋಳಿ, ಗುರುಪುರ ಪರಿಸರ ದಲ್ಲಿಯೂ ಹಾನಿ ಸಂಭವಿಸಿದೆ. ನೂರಾರು ಮನೆಗಳು ಜಲಾವೃತಗೊಂಡಿವೆ.

ಚಿತ್ರ: ಕಿಶೋರ್‌ ಪೆರಾಜೆ

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.