ಕುಣಿಯೋಕೆ ಬಾರದವರು ನೆಲ ಡೊಂಕು ಅಂದಂತಾಗಿದೆ
Team Udayavani, Jul 5, 2020, 7:03 AM IST
ದಾವಣಗೆರೆ: ರಾಜ್ಯ ಸರ್ಕಾರ ಕೋವಿಡ್ 19 ನಿಯಂತ್ರಣ ಪರಿಕರಗಳ ಖರೀದಿಯಲ್ಲಿ ಲೂಟಿ ಹೊಡೆದಿದೆ ಎನ್ನುವ ಆರೋಪವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಬೀತುಪಡಿಸಲಿ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದ ರಾಮಯ್ಯ ಮುಖ್ಯಮಂತ್ರಿಗಳಾಗಿ ಕೆಲಸ ಮಾಡಿದ ಅನುಭವ ಇದ್ದಂಥವರು. ಆರೋಪ ಮಾಡುವು ದಕ್ಕೆ ಮುನ್ನ ಆಧಾರ ಇಟ್ಟುಕೊಂಡು ಮಾತನಾಡಬೇಕು.
ರಾಜ್ಯ ಸರ್ಕಾರ ಕೋವಿಡ್ 19 ನಿಯಂತ್ರಣ ಪರಿಕರ ಖರೀದಿಯಲ್ಲಿ ಲೂಟಿ ಹೊಡೆದಿದೆ ಎನ್ನುವುದಕ್ಕೆ ಆಧಾರಗಳಿದ್ದಲ್ಲಿ ಅದನ್ನು ಸಾಬೀತುಪಡಿಸಲಿ. ಮಾಹಿತಿ ಹಕ್ಕು ಕಾಯ್ದೆ ಯಡಿ ಯಾರೇ ಮಾಹಿತಿ ಕೇಳಿದರೂ ಕೊಡಲಾಗುತ್ತದೆ. ದಾಖಲೆ ಗಳ ಆಧಾರದಲ್ಲೇ ಆರೋಪ ಸಾಬೀತುಪಡಿಸಲಿ. ಅವರ ಆರೋಪ ಬರೀ ಪ್ರಚಾರಕ್ಕೆ. ಕುಣಿಯೋಕೆ ಬಾರದವರು ನೆಲ ಡೊಂಕು ಅಂದರು ಎನ್ನುವಂತೆ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ಅವರಂಥವರು ಸುಳ್ಳು ಆರೋಪ ಮಾಡು ವುದು ಅವರಿಗೆ ಶೋಭೆ ತರುವಂತದ್ದಲ್ಲ ಎಂದರು.
ಅಡ್ಮಿಟ್ ಮಾಡಿಕೊಳ್ಳದಿದ್ದರೆ ಕ್ರಮ: ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್-19 ರೋಗಿಗಳ ಚಿಕಿತ್ಸೆಗಾಗಿ ಶೇ.50ರಷ್ಟು ಹಾಸಿಗೆ ಮೀಸಲಿಡಬೇಕು. ಯಾವುದೇ ರೋಗಿಯೇ ಆಗಲಿ ಸರ್ಕಾರಿ ಆಸ್ಪತ್ರೆಯಿಂದ ರೆಫರ್ ಮಾಡಿದರೆ ಮಾತ್ರವೇ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಳ್ಳಲಾಗುತ್ತದೆ. ರೆಫರ್ ಮಾಡದೇ ಇದ್ದಾಗ ತಿರಸ್ಕಾರ ಮಾಡಬಹುದು. ಸರ್ಕಾರಿ ಆಸ್ಪತ್ರೆಗಳಿಂದ ರೆಫರ್ ಆಗಿದ್ದರೂ ದಾಖಲು ಮಾಡಿಕೊಳ್ಳದೇ ಇದ್ದಲ್ಲಿ ಖಂಡಿತವಾಗಿಯೂ ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಮುಲು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.