![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 18, 2021, 6:04 AM IST
ಬೆಂಗಳೂರು: ಅರಣ್ಯ ಇಲಾಖೆಯಲ್ಲಿ ಜೇಷ್ಠತೆ ಅವಗಣಿಸಿ ವಲಯ ಅರಣ್ಯಾಧಿಕಾರಿಗಳಿಗೆ ಭಡ್ತಿ ನೀಡಲು ಹಿರಿಯ ಅಧಿಕಾರಿಗಳು ಸಿದ್ಧತೆ ನಡೆಸಿದ್ದು, ಸಚಿವರ ಸೂಚನೆಯನ್ನೂ ನಿರ್ಲಕ್ಷಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಇಲಾಖೆಯ 13 ವೃತ್ತಗಳ ಅಧಿಕಾರಿಗಳ ಜೇಷ್ಠತಾ ಪಟ್ಟಿ ತಯಾರಿಯಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸದೆ ಉಪ ವಲಯ ಅರಣ್ಯಾಧಿಕಾರಿಗಳಿಗೆ ಭಡ್ತಿ ನೀಡಲು ಹಿರಿಯ ಅಧಿಕಾರಿಗಳು ಮುಂದಾಗಿರುವುದನ್ನು ತಡೆದು, ಕಾನೂನು ಇಲಾಖೆ ಹಾಗೂ ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಭಿಪ್ರಾಯ ಪಡೆದು ಜೇಷ್ಠತಾ ಪಟ್ಟಿ ಸಿದ್ಧಪಡಿಸುವಂತೆ ಸಚಿವರು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಜೇಷ್ಠತಾ ಪಟ್ಟಿಯನ್ನು ಕ್ರೋಡೀಕರಿಸಿ ನ್ಯಾಯಾಲಯದ ಆದೇಶದಂತೆ ಈ ಹಿಂದಿನ ಅವಧಿಯಲ್ಲಿ ರಾಜ್ಯ ಮಟ್ಟದ ಪಟ್ಟಿ ಪ್ರಕಟಿಸಿದಂತೆ ಈ ಬಾರಿಯೂ ತಯಾರಿಸಲು ಸೂಚಿಸಲಾಗಿತ್ತು. ಆದರೆ, ಸಚಿವರ ಸೂಚನೆಯನ್ನು ನಿರ್ಲಕ್ಷಿಸಲಾಗಿದೆ ಎನ್ನಲಾಗಿದೆ.
ಈ ವಿವಾದವು ಇಲಾಖೆಯ ನೌಕರರನ್ನು ಎರಡು ಬಣಗಳಾಗು ವಂತೆ ಮಾಡಿದೆ. ಭಡ್ತಿ ಗೊಂದಲದ ಕುರಿತು ಕಳೆದ ವಿಧಾನಮಂಡಲ ಅಧಿವೇಶನದಲ್ಲಿ ಶಾಸಕ ಅಪ್ಪಾಜಿ ಗೌಡ ಅವರು ಪ್ರಸ್ತಾವಿಸಿ ದ್ದರು. ಲೋಪಗಳನ್ನು ಸರಿಪಡಿಸಿದ ಬಳಿಕವೇ ಭಡ್ತಿ ಪ್ರಕ್ರಿಯೆ ಮುಂದು ವರಿಸುವುದಾಗಿ ಸಚಿವ ಆನಂದ ಸಿಂಗ್ ಅವರು ಉತ್ತರಿಸಿದ್ದರು.
ಬಳಿಕ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಸಚಿವರು ಪತ್ರ ಬರೆದು, ಇಲಾಖೆಯ ವಿವಿಧ ವೃಂದಗಳ ಜೇಷ್ಠತಾ ಪಟ್ಟಿ
ಪರಿಷ್ಕರಿಸುವ ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅಜಯ್ ಮಿಶ್ರಾ ನೇತೃತ್ವದಲ್ಲಿ ರಚಿಸಿದ್ದ ಸಮಿತಿ ನೀಡಿದ್ದ ವರದಿ ಆಧರಿಸಿ ಪಟ್ಟಿ ಪ್ರಕಟಿಸಲು ಸೂಚಿಸಿದ್ದರು. ಈ ಸಂಬಂಧ ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹಾಗೂ ಕಾನೂನು ಇಲಾಖೆಯ ಅಭಿಪ್ರಾಯ ಪಡೆಯಲು ಸೂಚಿಸಿದ್ದರೂ, ಅಧಿಕಾರಿಗಳು ಪಾಲಿಸಿಲ್ಲ ಎನ್ನಲಾಗಿದೆ.
ಅನರ್ಹರಿಗೆ ಅವಕಾಶದ ಆರೋಪ :
ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಂಜಯ್ ಮೋಹನ್ ಮತ್ತು ಅಪರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಂಗರಾವ್ ಜಿ.ವಿ. ಅವರು ಗೊಂದಲ ಇರುವ ಐದು ವೃತ್ತಗಳಿಗೆ ಸಂಬಂಧಿಸಿ ಅನರ್ಹ ಉಪ ವಲಯ ಅರಣ್ಯ ಅಧಿಕಾರಿಗಳಿಗೆ ಭಡ್ತಿ ನೀಡುವ ಪ್ರಸ್ತಾವನೆಯನ್ನು ಅಂತಿಮಗೊಳಿಸಿದ್ದಾರೆ ಎನ್ನಲಾಗುತ್ತಿದೆ. ನಿವೃತ್ತಿ ಅಂಚಿನಲ್ಲಿರುವ ಕೆಲವು ಅಧಿಕಾರಿಗಳು ಸೇವಾವಧಿಯ ಲಾಭ ಪಡೆಯಲು ಈ ಪ್ರಯತ್ನಕೆ ಮುಂದಾಗಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಈಗಾಗಲೇ ಬೆಂಗಳೂರು ಮತ್ತು ಚಿಕ್ಕಮಗಳೂರು ವೃತ್ತಕ್ಕೆ ಸಂಬಂಧಿಸಿ ಮುಂಭಡ್ತಿ ಪ್ರಕ್ರಿಯೆ ನಡೆಸದಂತೆ ಕೆಎಟಿ ತಡೆಯಾಜ್ಞೆ ನೀಡಿದೆ.
ಮುಂಭಡ್ತಿ ಪ್ರಕ್ರಿಯೆ ಆಂತರಿಕ ವಿಚಾರ. ಕಾನೂನಿನ ಪ್ರಕಾರ ಇದನ್ನು ಮಾಡಲಾಗುವುದು. ಈ ಬಗ್ಗೆ ಕಾನೂನು ಇಲಾಖೆಯ ಅಭಿಪ್ರಾಯ ಪಡೆಯಲಾಗಿದೆ. – ಆನಂದ್ ಸಿಂಗ್, ಅರಣ್ಯ ಸಚಿವ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.