ಪ್ರವೀಣ್ ಮನೆಗೆ ಮಾಜಿ ಸಿಎಂ ಡಿವಿಎಸ್ ಭೇಟಿ:’ದಿಟ್ಟ ಹೆಜ್ಜೆ ಇಡುವಲ್ಲಿ ಹಿಂದೆ ಬಿದ್ದಿದ್ದೇವೆ’
Team Udayavani, Jul 30, 2022, 4:28 PM IST
ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ, ಸಂಸದ ಡಿ.ವಿ.ಸದಾನಂದ ಗೌಡ ಅವರು ಶನಿವಾರ ಭೇಟಿ ನೀಡಿ, ಮನೆಯವರಿಗೆ ಸಾಂತ್ವನ ತಿಳಿಸಿದರು. ಈ ವೇಳೆ ಆರ್ಥಿಕ ನೆರವಿನ ಚೆಕ್ ಹಸ್ತಾಂತರಿಸಿದರು.
ಇತ್ತೀಚೆಗೆ ನಡೆದ ಘಟನೆಗಳನ್ನು ಗಮನಿಸಿ ನಮ್ಮದೇ ಸರಕಾರ ಸ್ವಲ್ಪ ದಿಟ್ಟ ಹೆಜ್ಜೆಯನ್ನಿಡಬೇಕಿತ್ತು. ಅದಕ್ಕೆ ಬೇಕಾದ ವ್ಯವಸ್ಥೆ ಮಾಡುವಲ್ಲಿ ನಾವು ಹಿಂದೆ ಬಿದ್ದಿದನ್ನು ನಾವು ಒಪ್ಪಿಕೊಳ್ಳುತ್ತೇವೆ. ಇಂತಹ ಕೃತ್ಯ ತಡೆಗೆ ವಿಶೇಷ ಕಟ್ಟೆಚ್ಚರ ವಹಿಸಬೇಕಿದೆ. ಇತ್ತೀಚಿನ ದಿನದಲ್ಲಿ ಪೊಲೀಸರೆಂದರೆ ಭಯವೇ ಇಲ್ಲದಂತಾಗಿರುವುದು ಬೇಸರ ತರಿಸಿದೆ. ಪ್ರವೀಣ್‌ಗೆ ಬೆದರಿಕೆ ಬರುತ್ತಿತ್ತು. ಪೊಲೀಸರಿಗೆ ಹೇಳಿದ್ದರು, ಆದರೂ ಪೊಲೀಸರು ಕಾರ್ಯಚರಣೆ ನಡೆಸಿಲ್ಲ ಎಂಬ ವಿಚಾರ ತಿಳಿದುಬಂದಿದೆ. ಇದು ಗಂಭೀರ ಪ್ರಶ್ನೆಯಾಗಿದೆ.
ನಮ್ಮ ಸರಕಾರ ಬಂದ್ರೆ ನಮಗೆಲ್ಲ ರಕ್ಷಣೆ ಸಿಗುತ್ತದೆ ಎಂಬ ಕಾರ್ಯಕರ್ತರ ಭಾವನೆಯಿತ್ತು, ಆದರೆ ಅದರಲ್ಲಿ ಸ್ವಲ್ಪ ಕೊರತೆಯಾಗಿದೆ ಎಂಬ ಭಾವನೆಯಿದೆ ಎಂದ ಅವರು ನಾನು ಲೋಕಸಭಾ ಅಧೀವೇಶದಲ್ಲಿದ್ದುದರಿಂದ ಇಲ್ಲಿಗೆ ಇಂದು ಬರಬೇಕಾಯಿತು ಎಂದು ಪ್ರತಿಕ್ರಿಯೆ ನೀಡಿದರು.
ಇದನ್ನೂ ಓದಿ: ಬಾಲಿವುಡ್ ಮುಗಿಯುತು ಎನ್ನುವುದು ಅಸಂಬದ್ಧ: ಕರಣ್ ಜೋಹರ್
ತನಿಖೆ ಎನ್‌ಐಎಗೆ:
ಪ್ರವೀಣ್ ಹತ್ಯೆ ತನಿಖೆ ಎನ್‌ಐಎಗೆ ವಹಿಸುವ ಬಗ್ಗೆ ಮುಖ್ಯಮಂತ್ರಿಗಳು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಗೃಹ ಇಲಾಖೆ ಪರಿಶೀಲನೆ ನಡೆಸಿ ತನಿಖೆ ಕೈಗೆತ್ತಿಕೊಳ್ಳಲಿದ್ದಾರೆ. ನಾವು ಮಂಗಳವಾರ ಕರ್ನಾಟಕದ ಸಂಸದರು ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚಿಸಲಿದ್ದೇವೆ.
ಮಂಗಳೂರಿನಲ್ಲಿ ಎನ್‌ಐಎ ಕೇಂದ್ರ;
ಕರ್ನಾಟಕಕ್ಕೆ ಬರುವ ಎನ್‌ಐಎ(ರಾಷ್ಟ್ರೀಯ ತನಿಖಾ ಸಳ) ಶಾಖೆಯನ್ನು ಮಂಗಳೂರಿನಲ್ಲಿ ಮಾಡಬೇಕೆಂಬ ಬೇಡಿಕೆ ಇದೆ. ಈಗಾಗಲೇ ಅದಕ್ಕೆ ಸಂಬಂಧಿಸಿದಂತೆ ಸ್ಥಳ ವೀಕ್ಷಣೆ ಕೂಡ ನಡೆಯುತ್ತಿದೆ. ಶೀಘ್ರ ಎನ್‌ಐಎ ಕೇಂದ್ರ ಆರಂಭಗೊಳ್ಳುವ ನಿರೀಕ್ಷೆ ಇದೆ.
ವೈಯಕ್ತಿಕವಾಗಿ ಎಲ್ಲರಿಗೂ ರಕ್ಷಣೆ ನೀಡಲು ಸಾಧ್ಯವಿಲ್ಲ. ಆದರೆ ಇಂತಹ ಕೃತ್ಯ ನಡೆಯದಂತ ವಾತವರಣ ನಿರ್ಮಿಸಬಹುದಾಗಿದೆ. ಅಂತಹ ಅವಶ್ಯಕತೆಯಿದ್ದು, ಅದಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.