Kerala ಮಾಜಿ ಸಿ.ಎಂ. ಉಮ್ಮನ್ ಚಾಂಡಿ ನಿಧನ; ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ
Team Udayavani, Jul 18, 2023, 8:47 AM IST
ಬೆಂಗಳೂರು: ಹಿರಿಯ ರಾಜಕೀಯ ಮುತ್ಸದ್ದಿ ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ನನಗೆ ಅತ್ಯಂತ ಆತ್ಮೀಯರಾಗಿದ್ದ ಉಮ್ಮನ್ ಚಾಂಡಿಯವರ ನಿಧನದ ಸುದ್ದಿ ಆಘಾತಕಾರಿ. ಕೇರಳ ರಾಜ್ಯವನ್ನು ಮಾನವ ಅಭಿವೃದ್ಧಿಯ ಸೂಚ್ಯಂಕಗಳಲ್ಲಿ ಉನ್ನತ ಸ್ಥಾನದಲ್ಲಿ ಇರಿಸಲು ಕಾರಣರಾದ ಮುಖ್ಯಮಂತ್ರಿಗಳಲ್ಲಿ ಓಮನ್ ಚಾಂಡಿ ಕೂಡ ಒಬ್ಬರಾಗಿದ್ದರು. ಎರಡು ಬಾರಿ ಕೇರಳ ರಾಜ್ಯದ ಮುಖ್ಯಮಂತ್ರಿಗಳಾಗಿ ಅಪಾರ ಸಾಧನೆ ಮಾಡಿದವರಾಗಿದ್ದರು.
ಓಮನ್ ಚಾಂಡಿ ಅವರು 2004 ರಿಂದ 2006 ಮತ್ತು 2011 ರಿಂದ 2016 ರವರೆಗೆ ಕೇರಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯಪಾಲರಾಗಿ, ಕೇರಳ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ನಿರಂತರವಾಗಿ ಸಂವಿಧಾನದ ಆಶಯಗಳ, ಮೌಲ್ಯಗಳ ರಕ್ಷಣೆಗೆ ಶ್ರಮಿಸಿ ಹೋರಾಟ ರಾಜಕಾರಣದ ಪರಂಪರೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸುತ್ತಿದ್ದರು.
1970 ರಿಂದ ಕೇರಳ ರಾಜ್ಯ ವಿಧಾನಸಭೆಗೆ ನಿರಂತರವಾಗಿ ಆಯ್ಕೆಯಾಗುತ್ತಾ ಅತ್ಯಂತ ದೀರ್ಘಾವಧಿ ಶಾಸಕರಾಗಿ ಪುತ್ತುಪ್ಪಲ್ಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಾ ಬಂದಿದ್ದರು. ವಿಶ್ವಸಂಸ್ಥೆಯಿಂದ ಸಾರ್ವಜನಿಕ ಸೇವೆಗಾಗಿ ಪ್ರಶಸ್ತಿಯನ್ನು ಗಳಿಸಿದ ಏಕೈಕ ಭಾರತೀಯ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನೂ ಗಳಿಸಿದ್ದರು.
ಅವರು ಮುಖ್ಯಮಂತ್ರಿ ಆಗಿದ್ದ ಮತ್ತು ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ಬಾರಿ ಭೇಟಿಯಾಗಿದ್ದೆವು. ಅಭಿವೃದ್ಧಿ ವಿಚಾರದಲ್ಲಿ ಅವರದೇ ಆದ ಸ್ಪಷ್ಟ ತಿಳಿವಳಿಕೆ ಮತ್ತು ಮಾದರಿಗಳನ್ನು ಹೊಂದಿದ್ದರು. ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಜಾರಿ ಮಾಡಿದ್ದ ಅನ್ನಭಾಗ್ಯ ಸೇರಿದಂತೆ ಹಲವು ಯೋಜನೆಗಳನ್ನು ಅಪಾರವಾಗಿ ಶ್ಲಾಘಿಸಿದ್ದರು. ಬಡವರ ಮತ್ತು ಮಧ್ಯಮ ವರ್ಗದವರ ಬದುಕನ್ನು ಉನ್ನತೀಕರಿಸುವ ಸ್ಪಷ್ಟ ಗುರಿ ಮತ್ತು ಮಾರ್ಗ ನಾವು ಜಾರಿ ಮಾಡಿರುವ ಕಾರ್ಯಕ್ರಮಗಳಲ್ಲಿ, ನಾನು ಮಂಡಿಸಿದ ಆಯವ್ಯಯಗಳಲ್ಲಿ ಇದೆ ಎಂದು ಪತ್ರ ಬರೆದು ಮೆಚ್ವುಗೆ ಸೂಚಿಸಿದ್ದರು.
ಇವರ ನಿಧನ ಅಭಿವೃದ್ಧಿ ಮತ್ತು ಜನಪರ ರಾಜಕಾರಣಕ್ಕೆ, ಕೇರಳ ರಾಜ್ಯಕ್ಕೆ, ಭಾರತೀಯ ರಾಜಕಾರಣಕ್ಕೆ ಹಾಗೂ ನನಗೆ ವೈಯುಕ್ತಿಕವಾಗಿ ತುಂಬಲಾರದ ನಷ್ಟ.
ಮೌಲ್ಯಯುತ ರಾಜಕಾರಣದ ಹೆಜ್ಜೆಗುರುತನ್ನು ಉಳಿಸಿ ಹೋಗಿರುವ ಓಮನ್ ಚಾಂಡಿಯವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬಕ್ಕೆ ಮತ್ತು ಅಪಾರ ಬಂಧು ಮಿತ್ರರಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
Saddened by the demise of former Chief Minister of Kerala Shri Oommen Chandy.
Shri Oommen Chandy was very dear to me and the news of his demise is disturbing.
Oommen Chandy was one of the reasons for positioning the state of Kerala at a high level in human development… pic.twitter.com/CPCUbYzaJn
— Siddaramaiah (@siddaramaiah) July 18, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.