ನಿವೃತ್ತ ಪೊಲೀಸ್ ಅಧಿಕಾರಿ “ಅಣಾಮಲೈ ಬಿಜೆಪಿ ಎಂಟ್ರಿ; ರಾಜಕೀಯ ಲಾಭ ಲೆಕ್ಕಾಚಾರ

ಕರ್ನಾಟಕದಲ್ಲೂ ರಾಜಕೀಯ ಲಾಭದ ಉದ್ದೇಶ ಇಟ್ಟುಕೊಂಡೇ ಕಾರ್ಯತಂತ್ರ ರೂಪಿಸಲಾಗಿದೆ.

Team Udayavani, Aug 26, 2020, 4:32 PM IST

ನಿವೃತ್ತ ಪೊಲೀಸ್ ಅಧಿಕಾರಿ “ಅಣಾಮಲೈ ಬಿಜೆಪಿ ಎಂಟ್ರಿ; ರಾಜಕೀಯ ಲಾಭ ಲೆಕ್ಕಾಚಾರ

ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಸೇವೆ ಸಲ್ಲಿಸಿ ರಾಜಕೀಯ ಪ್ರವೇಶಿಸಿ ಯಶಸ್ಸು ಹಾಗೂ ವೈಫ‌ಲ್ಯ ಎರಡನ್ನೂ ಕಂಡ ಉದಾಹರಣೆಗಳ ನಡುವೆಯೇ ಅಣ್ಣಾಮಲೈ ಬಿಜೆಪಿ ಸೇರ್ಪಡೆಯ ಹಿಂದೆ ಭವಿಷ್ಯದ ರಾಜಕೀಯ ಲೆಕ್ಕಾಚಾರ ಅಡಗಿದೆ.

ರಾಜ್ಯದಲ್ಲಿ ಪೊಲೀಸ್‌ ಅಧಿಕಾರಿಯಾಗಿ ಕೆಲಸ ಮಾಡಿದವರು ಸಂಸತ್‌ ಹಾಗೂ ವಿಧಾನಸಭೆ ಮೆಟ್ಟಿಲೇರಿದ್ದಾರೆ. ವೈಯಕ್ತಿಕ ವರ್ಚಸ್ಸು ಹಾಗೂ ಸಮುದಾಯದ “ಶಕ್ತಿ’ ಹೊಂದಿರುವರು ರಾಜಕಾರಣದಲ್ಲಿ ಯಶಸ್ಸು ಪಡೆದಿದ್ದಾರೆ. ಜನಪ್ರಿಯತೆ ಆಧಾರದಲ್ಲಿ “ಎಂಟ್ರಿ’ ಕೊಟ್ಟಿರುವ ಅಣ್ಣಾಮಲೈ ನಡೆ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಈ ಹಿಂದೆ ಕೋದಂಡರಾಮಯ್ಯ, ಎಚ್‌.ಟಿ.ಸಾಂಗ್ಲಿಯಾನ ಅವರು ಸಂಸತ್‌ ಸದಸ್ಯರಾಗಿದ್ದು, ಪ್ರಸ್ತುತ ಬಿ.ಸಿ.ಪಾಟೀಲ್‌ ಮೂರು ಬಾರಿ ಶಾಸಕರಾಗಿ ಸಚಿವರಾಗಿರುವ ಯಶಸ್ಸಿನ “ಫಾರ್ಮುಲಾ’ ಆಧಾರದಲ್ಲಿಯೇ ಅಣ್ಣಾಮಲೈ ಸೇರ್ಪಡೆಯೂ ಆಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಅಣ್ಣಾಮಲೈ ಪಕ್ಷ ಸೇರ್ಪಡೆ ತಮಿಳುನಾಡಿನಲ್ಲಿ ಮುಂದಿನ ವಿಧಾನಸಭೆ ಚುನಾವಣೆ ಹಾಗೂ ಬಿಜೆಪಿ ಸಂಘಟನೆ ಬಲಪಡಿಸಲು ಎಂದು ಮೇಲ್ನೋಟಕ್ಕೆ ಕಂಡುಬಂದರೂ ಕರ್ನಾಟಕದಲ್ಲೂ ರಾಜಕೀಯ ಲಾಭದ ಉದ್ದೇಶ ಇಟ್ಟುಕೊಂಡೇ ಕಾರ್ಯತಂತ್ರ ರೂಪಿಸಲಾಗಿದೆ.

ಬೆಂಗಳೂರು, ಚಾಮರಾಜನಗರ, ಕೋಲಾರದ ಕೆಜಿಎಫ್ ಸೇರಿ ರಾಜ್ಯದ ಹಲವು ಕ್ಷೇತ್ರಗಳಲ್ಲಿ ತಮಿಳು ಮತದಾರರೇ ನಿಣಾರ್ಯಕ. ತಮಿಳು ಭಾಷಿಕರಲ್ಲಿ ಅಣ್ಣಾಮಲೈ ತಮ್ಮದೇ ಆದ ಪ್ರಭಾವ ಬೀರಿದ್ದಾರೆ. ಹೀಗಾಗಿ, ರಾಜ್ಯದಲ್ಲೂ ಅವರ ಮೂಲಕ ಮತ ಸೆಳೆಯ ಬಹುದು ಎಂಬುದು ಬಿಜೆಪಿಯ ಗುರಿ ಎಂದು ಹೇಳಲಾಗುತ್ತಿದೆ.

ತಮಿಳುನಾಡು ಕರೂರು ಮೂಲದ ಕುಪ್ಪುಸ್ವಾಮಿ  ಅಣ್ಣಾಮಲೈ ಕರ್ನಾಟಕದಲ್ಲಿ ಪೊಲೀಸ್‌ ಸೇವೆ ಆರಂಭಿಸಿ ಉಡುಪಿ, ಚಿಕ್ಕಮಗಳೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಾಗಿ ಬೆಂಗಳೂರು ದಕ್ಷಿಣ ಡಿಸಿಪಿಯಾಗಿ ಜನ ಪ್ರಿಯತೆಗಳಿಸಿದ್ದರು. ರಾಜ್ಯದ ಹಲವೆಡೆ ಕೆಲಸ ಮಾಡಿದ್ದ ಅವರು ಇದ್ದಕ್ಕಿದ್ದಂತೆ ದಿಢೀರ್‌ ಸ್ವಯಂ ನಿವೃತ್ತಿ ಘೋಷಿಸಿ ಒಂದು ವರ್ಷ ಮೌನ ವಹಿಸಿದ್ದ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಒಂದು ವರ್ಷಗಳ ಕಾಲ ನಿರಂತರವಾಗಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದು ವೇದಿಕೆ ಸಿದ್ಧಪಡಿಸಿಕೊಂಡೇ ರಾಜಕೀಯ ಪ್ರವೇಶ ಮಾಡಿದ್ದಾರೆ. ಅವರು ನಿರ್ವಹಿಸಬೇಕಾದ “ಹೊಣೆಗಾರಿಕೆ”ಯ ನೀಲನಕ್ಷೆಯೂ ಸಿದ್ಧವಾಗಿದೆ . ಪಕ್ಷ ಸೇರ್ಪಡೆ ನಂತರ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರನ್ನು ಭೇಟಿ ಮಾಡಿ ಚರ್ಚಿಸಿರುವುದು ಇದಕ್ಕೆ ಸಾಕ್ಷಿ ಎಂದು ಹೇಳಲಾಗುತ್ತಿದೆ.

ನಿರಾಸೆಯೂ ಇದೆ: ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾಗಿದ್ದ ಕೋದಂಡರಾಮಯ್ಯ ರಾಜಕೀಯ ಪ್ರವೇಶಿಸಿ ಜನತಾದಳದಿಂದ ಚಿತ್ರದುರ್ಗದ ಸಂಸದರಾಗಿದ್ದರು. ನಗರ ಪೊಲೀಸ್‌ ಆಯುಕ್ತರಾಗಿದ್ದ ಎಚ್‌.ಟಿ.ಸಾಂಗ್ಲಿಯಾನ ಬಿಜೆಪಿಯಿಂದ ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾಗಿದ್ದರು. ಪ್ರಸ್ತುತ ಬಿ.ಸಿ.ಪಾಟೀಲ್‌ ಅವರು ಹಿರೇಕೆರೂರು ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಸಚಿವರಾಗಿದ್ದಾರೆ.

ಅಬ್ದುಲ್‌ ಅಜೀಂ ಅವರು ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಸೋಲು ಅನುಭವಿಸಿದರೂ ಒಮ್ಮೆ ವಿಧಾನಪರಿಷತ್‌ ಸದಸ್ಯರಾಗಿದ್ದರು. ಅದಕ್ಕೂ ಮುಂಚೆ ಸಿ.ಚನ್ನಿಗಪ್ಪ ಅವರು ಜನತಾದಳದಿಂದ ಕೊರಟಗೆರೆ ಕ್ಷೇತ್ರದಿಂದ ಗೆದ್ದು ಸಚಿವರಾಗಿದ್ದರು. ಇವೆಲ್ಲವೂ ಯಶಸ್ವಿ ಉದಾಹರಣೆಗಳು. ಮತ್ತೂಂದೆಡೆ ಜೆಡಿಎಸ್‌ನಿಂದ ಸುಭಾಷ್‌ ಭರಣಿ, ನಾರಾಯಣಗೌಡ ಅವರು ಕ್ರಮವಾಗಿ ಗಾಂಧಿನಗರ, ಚಿಕ್ಕಪೇಟೆ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡರು. ಮಲ್ಲೇಶ್ವರಂನಿಂದ ಕಾಂಗ್ರೆಸ್‌ನಿಂದ ಬಿ.ಕೆ.ಶಿವರಾಂ, ಚಾಮರಾಜಪೇಟೆಯಿಂದ ಜಿ.ಎ.ಬಾವಾ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಸೋಲು ಅನುಭವಿಸಿದ ನಿರಾಸೆಯ ಕಥೆಯೂ ಇದೆ. ಈ ಪೈಕಿ ಜಿ.ಎ.ಬಾವಾ ಬಿಟ್ಟರೆ ಉಳಿದವರು ಒಂದೇ ಚುನಾವಣೆಗೆ ಸುಸ್ತಾಗಿ ಸಕ್ರಿಯ ರಾಜಕಾರಣದಿಂದಲೇ ದೂರವುಳಿದಿದ್ದಾರೆ.

ರಾಜ್ಯ ಪೊಲೀಸ್‌ ಮಹಾನಿರ್ದೇಶಕರಾಗಿದ್ದ ಶಂಕರ ಬಿದರಿ ಅವರೂ ಸಹ ರಾಜಕೀಯ ಪ್ರವೇಶಿಸಿ ನಂತರ ದೂರವುಳಿದವರೇ. ಮತ್ತೂಂದೆಡೆ ಅನುಪಮಾ ಶೆಣೈ ತಮ್ಮದೇ ಪಕ್ಷ ಕಟ್ಟಿ ಪ್ರಯೋಗ ಮಾಡಿ ವಿಫ‌ಲರಾದ ಉದಾಹರಣೆಯೂ ಇದೆ.

ಕರ್ನಾಟಕದಲ್ಲಿ ನನಗೆ ಹೆಚ್ಚು ಪ್ರೀತಿ ಸಿಕ್ಕಿದೆ. ಪಕ್ಷ ಯಾವ ಕೆಲಸ ಹೇಳುತ್ತದೆಯೋ ಅದನ್ನು ಸಾಮಾನ್ಯ ಕಾರ್ಯಕರ್ತನಾಗಿ ಮಾಡುತ್ತೇನೆ. ಉಡುಪಿ, ಚಿಕ್ಕಮಗಳೂರು, ಬೆಂಗಳೂರಿನಲ್ಲೂ ನಾನು ಪೊಲೀಸ್‌ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದೇನೆ. ಹೀಗಾಗಿ, ಕರ್ನಾಟಕ ನನಗೆ ಅಚ್ಚುಮೆಚ್ಚು.

  • ಕೆ. ಅಣ್ಣಾಮಲೈ

  • ಎಸ್‌. ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

5-dinesh

Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.