ಮಾಜಿ ಸಚಿವ ಬಿ.ಎಸ್. ಪಾಟೀಲ ಸಾಸನೂರ ನಿಧನ
Team Udayavani, Jun 11, 2018, 11:51 AM IST
ವಿಜಯಪುರ: ಹಿರಿಯ ರಾಜಕೀಯ ನಾಯಕ, ಮಾಜಿ ಸಚಿವ ಬಿ.ಎಸ್. ಪಾಟೀಲ ಸಾಸನೂರ (87) ಭಾನುವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ನಗರದ ಬಿಎಲ್‌ಡಿಇ ಸಂಸ್ಥೆಯ ಬಿ.ಎಂ. ಪಾಟೀಲ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಭಾನುವಾರ ರಾತ್ರಿ 8:15ರ ವೇಳೆ ಮೃತಪಟ್ಟಿದ್ದಾರೆ.
ಹಿರೂರ ಗ್ರಾಮದ ಭೋಗೇಶ್ವರ ಪ್ರೌಢಶಾಲೆ ಆವರಣದಲ್ಲಿ ಸೋಮವರ ಅಂತ್ಯಕ್ರಿಯೆ ನಡೆಯಲಿದೆ. ಇದಕ್ಕೂ ಮುನ್ನ ತವರೂರು ಸಾಸನೂರ ಗ್ರಾಮದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುತ್ತದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.
ದೇವರಹಿಪ್ಪರಗಿ ಹಾಲಿ ಶಾಸಕ ಸೋಮನಗೌಡ ಪಾಟೀಲ ಅವರು ಬಿ.ಎಸ್. ಪಾಟೀಲ ಅವರ ಪುತ್ರ. ಕಳೆದ ಒಂದು ದಶಕದಿಂದ ಬಿ.ಎಸ್.ಪಾಟೀಲ ಸಕ್ರಿಯ ರಾಜಕೀಯದಿಂದ ನಿವೃತ್ತರಾಗಿದ್ದರು. ಹೂವಿನಹಿಪ್ಪರಗಿ ವಿಧಾನಸಭಾ ಕ್ಷೇತ್ರದಿಂದ 1978, 1983, 1989, 1994, 1999ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.
ಐದು ಬಾರಿ ವಿಧಾನಸಭೆ ಪ್ರವೇಶಿಸಿದ್ದ ಅವರು, ಎರಡು ಬಾರಿ ಸಚಿವರಾಗಿದ್ದರು. 1994ರಲ್ಲಿ ವೀರಪ್ಪ ಮೊಯ್ಲಿ ಸರ್ಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದ ಸಾಸನೂರು, 1999ರಲ್ಲಿ ಎಸ್.ಎಂ. ಕೃಷ್ಣ ಅವರ ಸರ್ಕಾರದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ಕೆಪಿಸಿಸಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.