ಪರಿಷತ್ ಚುನಾವಣೆಯಲ್ಲಿ ಹಣ-ಬಲದೊಂದಿಗೆ ಎಲ್ಲವೂ ವರ್ಕ್ ಆಗುತ್ತದೆ: ಹೆಚ್ ಸಿ ಮಹದೇವಪ್ಪ
Team Udayavani, Nov 23, 2021, 6:06 PM IST
ಮೈಸೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಹಣ ಸೇರಿದಂತೆ ಎಲ್ಲಾ ಬಲಗಳು ವರ್ಕ್ ಆಗುತ್ತವೆ. ಪ್ರಜಾಪ್ರಭುತ್ವದಲ್ಲಿ ಇದು ನಮಗೆ ಇಷ್ಟವಿಲ್ಲದಿದ್ದರೂ ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ಮಾಜಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಹೇಳಿದರು.
ನಗರದಲ್ಲಿ ಮಾತಾನಾಡಿದ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಮೈಸೂರು-ಚಾಮರಾಜನಗರ ಜಿಲ್ಲೆಯಲ್ಲಿ ಮೂರುವರೆ ಸಾವಿರಕ್ಕೂ ಅಧಿಕವಾಗಿ ನಮ್ಮ ಸದಸ್ಯರಿದ್ದಾರೆ. ನಾವು ಮೊದಲ ಪ್ರಾಶಸ್ತ್ಯದಲ್ಲೇ ಗೆಲ್ಲುತ್ತೇವೆ. ಎರಡನೇ ಸ್ಥಾನಕ್ಕೆ ಯಾರು ಯಾರು ಯಾವ ಬಲಗಳನ್ನು ಪ್ರಯೋಗಿಸುತ್ತಾರೋ ಗೊತ್ತಿಲ್ಲ. ಅದರ ಮೇಲೆ ಎರಡನೇ ಸ್ಥಾನದ ಫಲಿತಾಂಶ ನಿಂತಿದೆ ಎಂದರು.
ಇದನ್ನೂ ಓದಿ:ಸಂದೇಶ್ ನಾಗರಾಜ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರಿಂದ ಹೀಗೆ ಆಗಿದೆ: ಸಾ.ರಾ. ಮಹೇಶ್
ಹಾಲಿ ಪರಿಷತ್ ಸದಸ್ಯರಿಗೆ ಟಿಕೆಟ್ ನೀಡದಿರುವುದಕ್ಕೆ ದೊಡ್ಡ ಕಾರಣಗಳೇನು ಇಲ್ಲ. ಕಾರ್ಯಕರ್ತರು ಬದಲಾವಣೆ ಬಯಸಿದ್ದರು. ಹಾಗಾಗಿ ಬೇರೆ ಅಭ್ಯರ್ಥಿಗೆ ಟಿಕೆಟ್ ಕೊಟ್ಟಿದ್ದೇವೆ ಎಂದರು.
ನಾನು ಟಿಕೆಟ್ ಆಕಾಂಕ್ಷಿಯಲ್ಲ:
ನಾನು ಎಂದಿಗೂ ಕನಸು ಮನಸಿನಲ್ಲೂ ಪರಿಷತ್ ಚುನಾವಣೆ ಬಗ್ಗೆ ಯೋಚನೆಯೇ ಮಾಡಿಲ್ಲ. ಆ ಸುದ್ದಿಯನ್ನು ಯಾರು ಸೃಷ್ಟಿಸಿದರೋ ನನಗೆ ಗೊತ್ತಿಲ್ಲ. ನಾನಂತೂ ಎಂದಿಗೂ ಪರಿಷತ್ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿರಲಿಲ್ಲ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: ಈಶ್ವರಪ್ಪನವರೇ ನಮ್ಮಲ್ಲಿ ಜನ ಇಲ್ಲ,ಎಲ್ಲ ಕಡೆ ಶಂಖ ಊದಲಿಕ್ಕೆ ನಾನೇ ಹೋಗಬೇಕು: ಎಚ್ .ಡಿ.ಕೆ
ರಾಜ್ಯದ ನೆರೆ ಪರಿಸ್ಥಿತಿಯನ್ನು ಸರ್ಕಾರ ಸಂಪೂರ್ಣ ನಿರ್ಲಕ್ಷ್ಯಸಿದೆ. ಕೇವಲ ಪರ್ಸೆಂಟೇಜ್‌ಗಾಗಿ ಸಚಿವರು ಕೆಲಸ ಮಾಡುತ್ತಿದ್ದಾರೆ. ಖುದ್ದು ಪ್ರಧಾನಿಗೆ ಈ ವಿಚಾರದಲ್ಲಿ ಪತ್ರ ಹೋಗಿದೆ. ಕೆಲಸ ಮಾಡಲು ಸಚಿವರುಗಳಿಗೆ ಬದ್ಧತೆಯೂ ಇಲ್ಲ, ಆಸಕ್ತಿಯೂ ಇಲ್ಲ. ಸರ್ಕಾರ ಇರುವುದರ ಬಗ್ಗೆ ನನಗೆ ಅನುಮಾನ ಇದೆ. ಬೆಂಗಳೂರಿನಲ್ಲಿ ಕೆರೆ ಮತ್ತು ರಾಜಕಾಲುವೆ ಒತ್ತವರಿ ತೆರವು ಆಗಬೇಕು. ಇಲ್ಲದಿದ್ದರೆ ಬೆಂಗಳೂರು ಮತ್ತೊಂದು ಚೆನ್ನೈ ಆಗಲಿದೆ. ಸರ್ಕಾರ ಈ ನಿಟ್ಟಿನಲ್ಲಿ ಗಮನ ಹರಿಸಬೇಕಿದೆ ಎಂದು ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.