ಮಾಜಿ ಸಚಿವ ಖಮರುಲ್ ಇಸ್ಲಾಂ ವಿಧಿವಶ
Team Udayavani, Sep 18, 2017, 12:30 PM IST
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಖಮರುಲ್ ಇಸ್ಲಾಂ(69) ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಕೊನೆಯುಸಿರೆಳೆದರು.
1948 ಜನವರಿ 27 ರಂದು ಜನಿಸಿದ ಅವರು 1974ರಲ್ಲಿ ರಾಜಕೀಯಕ್ಕೆ ಪ್ರವೇಶ ಮಾಡಿದ್ದರು. ಕಲುಬುರಗಿ ಉತ್ತರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದ ಅವರು 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ 3 ಬಾರಿ ಮುಸ್ಲಿಂ ಲೀಗ್‌ನಿಂದ ಹಾಗೂ 3 ಬಾರಿ ಕಾಂಗ್ರೆಸ್‌ನಿಂದ ಶಾಸಕರಾಗಿದ್ದರು. ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.
ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮೂರು ವರ್ಷ ಸಚಿವರಾಗಿ ಸೇವೆ ಸಲ್ಲಿಸಿದ ಅವರನ್ನು ಸಂಪುಟ ಪುನಾರಚನೆ ವೇಳೆ ಸಂಪುಟದಿಂದ ಕೈಬಿಡಲಾಗಿತ್ತು. ಕೃಷ್ಣ ಸಂಪುಟದಲ್ಲಿ ಕಾರ್ಮಿಕ, ವಸತಿ ಖಾತೆ ನಿರ್ವಹಿಸಿದ್ದ ಅವರು ಸಿದ್ದು ಸಂಪುಟದಲ್ಲಿ ಅಲ್ಪಸಂಖ್ಯಾತ ಅಭಿವೃದ್ಧಿ, ವಕ್ಫ್ ಖಾತೆ ಸಚಿವರಾಗಿದ್ದರು.
ಇಂದು ಸಂಜೆ ತವರೂರಾದ ಕಲುಬುರಗಿಗೆ ಖಮರುಲ್ ಇಸ್ಲಾಂ ಅವರ ಪಾರ್ಥಿವ ಶರೀರವನ್ನು ರವಾನಿಸಲಾಗುತ್ತದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್ಐಟಿ: ಸಚಿವ ಸಂಪುಟ ನಿರ್ಧಾರ
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್ಎಫ್ಡಿಪಿ ಪೋರ್ಟಲ್ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.