ಮಾಜಿ ಸಚಿವ ಎಂ.ಆರ್‌.ಸೀತಾರಾಂಗೆ ಬಿಜೆಪಿ “ಗಾಳ’

ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಟಿಕೆಟ್‌ "ಆಫ‌ರ್‌'

Team Udayavani, Jun 28, 2022, 1:29 PM IST

ಮಾಜಿ ಸಚಿವ ಎಂ.ಆರ್‌.ಸೀತಾರಾಂಗೆ ಬಿಜೆಪಿ “ಗಾಳ’

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ನಾಯಕತ್ವದ ವಿರುದ್ಧ ಮುನಿಸಿಕೊಂಡಿರುವ ಮಾಜಿ ಸಚಿವ ಎಂ.ಆರ್‌. ಸೀತಾರಾಂ ಅವರಿಗೆ ಬಿಜೆಪಿ “ಗಾಳ’ ಹಾಕಿದೆ. ಎಂ.ಆರ್‌.ಸೀತಾರಾಂ ಅವ ರನ್ನು ಬಿಜೆಪಿಗೆ ಸೆಳೆದು ಬೆಂಗಳೂರು ಉತ್ತರ ಅಥವಾ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆಸಿದ್ದು ಈಗಾಗಲೇ “ಆಫ‌ರ್‌’ ನೀಡಲಾಗಿದೆ.

ಬಲಿಜ ಸಮುದಾಯದ ಪ್ರಭಾವಿ ಮುಖಂಡರೂ ಆಗಿರುವ ಎಂ.ಆರ್‌.ಸೀತಾರಾಂ ಅವರನ್ನು ಪಕ್ಷಕ್ಕೆ ಸೆಳೆದರೆ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಪಕ್ಷ ಬಲವರ್ಧನೆಗೆ ಸಹಕಾರಿಯಾಗಲಿದೆ ಎಂಬ ಹಿನ್ನೆಲೆಯಲ್ಲಿ ಈ ಕಾರ್ಯ ತಂತ್ರಕ್ಕೆ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಕಾಂಗ್ರೆಸ್‌ನಿಂದ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಸೀತಾರಾಂ ಒಲವು ಹೊಂದಿದ್ದು, ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪಮೊಯಿಲಿ ಅವರು ಸ್ಪರ್ಧೆ ಮಾಡಿದ್ದರಿಂದ ಅವರ ಕನಸು ಭಗ್ನಗೊಂಡಿತ್ತು. ಹೀಗಾಗಿ, ಬಿಜೆಪಿಗೆ ಸೆಳೆದು ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಸುವ ಮಾತುಕತೆಗಳು ನಡೆದಿವೆ ಎಂದು ಹೇಳಲಾಗಿದೆ.

ಸೀತಾರಾಂ ಅವರು ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಯಲು ಬಯಸಿದರೆ ಅಲ್ಲಿ ಟಿಕೆಟ್‌ ನೀಡುವುದು ಇಲ್ಲದಿದ್ದರೆ ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆಗೆ ಒಪ್ಪಿದರೂ ಟಿಕೆಟ್‌ ಕೊಡಲು ಬಿಜೆಪಿ ಸಿದ್ಧವಿದೆ. ಆದರೆ, ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಿಂದ ಕೆ.ಸಿ.ರಾಮಮೂರ್ತಿ ಸ್ಪರ್ಧೆ ಮಾಡುವ ಸಾಧ್ಯತೆ ಇರುವುದರಿಂದ ಬಹುತೇಕ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧೆಗೆ ಅವಕಾಶ ಸಿಗಬಹುದು ಎಂದು ತಿಳಿದು ಬಂದಿದೆ.

ಒಂದೊಮ್ಮೆ ಎಂ.ಆರ್‌.ಸೀತಾರಾಂ ಅವರು ಬಿಜೆಪಿಗೆ ಸೇರ್ಪಡೆಯಾದರೆ ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ ವಂಚಿತರಾಗಿ ರಾಷ್ಟ್ರೀಯ ಯುವ ಕಾಂಗ್ರೆಸ್‌ ಪದಾಧಿಕಾರಿ ಹುದ್ದೆ ಪಡೆದಿರುವ ಸೀತಾರಾಂ ಅವರ ಪುತ್ರ ರಕ್ಷಾ ರಾಮಯ್ಯ ಅವರೂ ಬಿಜೆಪಿಗೆ ಬರಬಹುದು. ಅವರಿಗೆ ಬಾಗೇಪಲ್ಲಿ ಕ್ಷೇತ್ರದ ವಿಧಾನಸಭೆ ಟಿಕೆಟ್‌ ನೀಡುವ ಬಗ್ಗೆಯೂ ಮಾತುಕತೆ ನಡೆದಿದೆ ಎಂದು ಹೇಳಲಾಗಿದೆ.

ಎಂ.ಆರ್‌.ಸೀತಾರಾಂ ಅವರ ಬಹುತೇಕ ಬೆಂಬಲಿಗರು, ಆಪ್ತರು ಸಹ ಬಿಜೆಪಿ ಸೇರ್ಪಡೆಯಾಗುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಎಸ್ಎಂಕೆ ಸೂತ್ರದಾರ: ಮಾಜಿ ಸಚಿವ ಎಂ.ಆರ್‌. ಸೀತಾರಾಂ ಅವರಷ್ಟೇ ಅಲ್ಲದೆ ಮತ್ತಷ್ಟು ಪ್ರಭಾವಿ ಕಾಂಗ್ರೆಸ್‌ ಮುಖಂಡರಿಗೆ ಬಿಜೆಪಿ ಗಾಳ ಹಾಕಿದ್ದು, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ಮೂಲಕ ಮಾತುಕತೆ ನಡೆಸಿ ಪಕ್ಷಕ್ಕೆ ಸೆಳೆಯಲು ಕಾರ್ಯತಂತ್ರ ರೂಪಿಸಿದೆ. ವಿಧಾನಸಭೆ ಚುನಾವಣೆ ಹಾಗೂ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಭಾಗದ ಪ್ರಭಾವಿ ಮುಖಂಡರಿಗೆ ಬಿಜೆಪಿ ಆಹ್ವಾನ ನೀಡಿದೆ ಎಂದು ಹೇಳಲಾಗಿದೆ.

ಜೆಡಿಎಸ್‌ ನಿಂದ ಕಾಂಗ್ರೆಸ್‌ಗೆ ಬರಲು ಮಾನಸಿಕವಾಗಿ ಸಿದ್ಧರಿದ್ದವರನ್ನು ಬಿಜೆಪಿಗೆ ಸೆಳೆಯಲು ಪ್ರಾಥಮಿಕ ಹಂತದ ಮಾತುಕತೆ ನಡೆಸಲಾಗಿದೆ. ಬಿಬಿಎಂಪಿ ಚುನಾವಣೆ ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ ಚುನಾವಣೆ ಘೋಷಣೆಯಾ ದರೆ ಕೆಲವು ನಾಯಕರ ಸೇರ್ಪಡೆಗೆ ಮಹೂರ್ತ ನಿಗದಿಯಾಗಲಿದೆ ಎಂದು ತಿಳಿದು ಬಂದಿದೆ.

ನಾಯಕರ ಮನವೊಲಿಸುವುದು ಸೂಕ್ತ : ಈ ಮಧ್ಯೆ, ಕಾಂಗ್ರೆಸ್‌ನಲ್ಲಿ ರಾಜ್ಯ ನಾಯಕರ ವಿರುದ್ಧ ಬೇಸರಗೊಂಡು ಪ್ರಮುಖ ನಾಯಕರು ನಿರ್ಗಮನದ ಹಾದಿ ಹಿಡಿದಿರುವುದು ಆತಂಕಕ್ಕೆ ಕಾರಣವಾಗಿದೆ. ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಈ ವಿದ್ಯಮಾನಗಳು ಪಕ್ಷದ ಮೇಲೆ ಪರಿಣಾಮ ಬೀರಬಹುದು. ವೈಯಕ್ತಿಕ ಪ್ರತಿಷ್ಠೆ ಬಿಟ್ಟು ಪಕ್ಷ ಬಿಡಲು ಮುಂದಾಗಿರುವ ಹಾಗೂ ಬೇಸರಗೊಂಡಿರುವ ನಾಯಕರ ಮನವೊಲಿಸಿ ಉಳಿಸಿಕೊಳ್ಳುವುದು ಸೂಕ್ತ ಎಂದು ಹಿರಿಯ ನಾಯಕರೊಬ್ಬರು ಹೇಳುತ್ತಾರೆ.

ಎಸ್‌.ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.