ಮಾಜಿ ಸಚಿವ ಮಂಜುನಾಥ್ ನಿಧನ
Team Udayavani, Feb 4, 2020, 3:04 AM IST
ಬೆಂಗಳೂರು: ಮಾಜಿ ಸಚಿವ ಹಾಗೂ ಹಿರಿಯ ರಾಜಕಾರಣಿ ಡಿ.ಮಂಜುನಾಥ್ (92) ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಒಮ್ಮೆ ವಿಧಾನಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಅವರು 2006 ರಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಅರಣ್ಯ, ಉನ್ನತ ಶಿಕ್ಷಣ ಖಾತೆ ನಿರ್ವಹಿಸಿದ್ದರು.
ಡಿ.ಮಂಜುನಾಥ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. ಸರಳತೆ, ಸಜ್ಜನಿಕೆಯ ರಾಜಕಾರಣಿಯಾಗಿದ್ದ ಡಿ.ಮಂಜುನಾಥ್ ಅವರು ಹಲವು ಖಾತೆ ಯಶಸ್ವಿಯಾಗಿ ನಿರ್ವಹಿಸಿದ್ದರು. ವಿಧಾನಪರಿಷತ್ ಸಭಾಪತಿಯಾಗಿ ನಿಷ್ಠೆಯಿಂದ ಕಾರ್ಯನಿರ್ವಹಿಸಿದ್ದರು.
ಇವರ ನಿಧನದಿಂದ ಮೌಲ್ಯಾಧಾರಿತ ರಾಜಕಾರಣದ ಪೀಳಿಗೆಯ ಕೊಂಡಿ ಯೊಂದು ಕಳಚಿದಂತಾಗಿದೆ ಎಂದು ಯಡಿಯೂರಪ್ಪ ಸಂತಾಪ ಸೂಚಿಸಿದರು. ಡಿ.ಮಂಜುನಾಥ್ ಅವರು ಸಚಿವರಾಗಿ, ವಿಧಾನಪರಿಷತ್ ಸಭಾಪತಿಯಾಗಿ ನಿಷ್ಠೆಯಿಂದ ಕಾರ್ಯನಿರ್ವಹಿಸದ್ದರು. ಸರಳ ವ್ಯಕ್ತಿತ್ವದ ಪ್ರತಿರೂಪದಂತಿದ್ದರು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.