ಮಾಜಿ ಸಚಿವ,ನಿವೃತ್ತ ಐಎಎಸ್ ಅಧಿಕಾರಿ ಅಲೆಕ್ಸಾಂಡರ್ ನಿಧನ
Team Udayavani, Jan 14, 2022, 9:11 PM IST
ಬೆಂಗಳೂರು:ಮಾಜಿ ಸಚಿವ, ನಿವೃತ್ತ ಐಎಎಸ್ ಅಧಿಕಾರಿ ಡಾ.ಜೆ. ಅಲೆಗ್ಸಾಂಡರ್ (83) ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾದರು.
ಅಲೆಕ್ಸಾಂಡರ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಅವರು ಎರಡು ಮಕ್ಕಳು ಹಾಗೂ 4 ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಶನಿವಾರ ಬೆಂಗಳೂರಿನಲ್ಲಿ ನೆರವೇರಲಿದೆ.
ಮೂಲತಃ ಕೇರಳ ದವರಾದ ಅಲೆಗ್ಸಾಂಡರ್ ಅವರು ಐಎಎಸ್ ಅಧಿಕಾರಿಯಾಗಿ ರಾಜ್ಯ ಪ್ರವೇಶ ಮಾಡಿದ್ದರು. ನಂತರ ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಆನಂತರ ರಾಜ್ಯ ರಾಜಕಾರಣ ಪ್ರವೇಶ ಮಾಡಿ ಕಾಂಗ್ರೆಸ್‌ನಲ್ಲಿ ಅಂದಿನ ಬೆಂಗಳೂರು ಭಾರತಿನಗರ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.
ಎಸ್. ಎಂ. ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ಪ್ರವಾಸೋದ್ಯಮ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಹಿಂದುಳಿದ, ದಲಿತ ಹಾಗೂ ಅಲ್ಪಸಂಖ್ಯಾತರ ಸಮಸ್ಯೆಗಳಿಗೆ ಸ್ಪಂದಿಸುವ ಅಂದಿನ ಪ್ರಮುಖ ರಾಜಕಾರಣಿಯಾಗಿದ್ದರು. ಅಲೆಗ್ಸಾಂಡರ್ ಬೆಂಗಳೂರು ಭಾಗದಲ್ಲಿ ದೀನದಲಿತರ ನಾಯಕ ಎಂದು ಹೆಸರು ಪಡೆದಿದ್ದರು. ಇವರು ಮುಖ್ಯಕಾರ್ಯದರ್ಶಿ ಆಗುವ ಮೊದಲೇ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಯಲ್ಲಿ ಕೆಲಸ ಮಾಡಿದ ಏಕೈಕ ಅಧಿಕಾರಿ ಎನ್ನುವ ಖ್ಯಾತಿ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUDA case; ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕರೆದ ಲೋಕಾಯುಕ್ತ ಪೊಲೀಸರು
Waqf Notice: ʼವಕ್ಫ್ ಬೋರ್ಡ್‌ಗೆ ಆಸ್ತಿ ನೋಂದಣಿ ತಕ್ಷಣ ಸ್ಥಗಿತಗೊಳಿಸಲು ಸಿಎಸ್‌ಗೆ ಸೂಚಿಸಿʼ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.