ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ: ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿ ಪಕ್ಷದಿಂದ ಉಚ್ಚಾಟನೆ
Team Udayavani, May 25, 2024, 7:42 PM IST
ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಪಕ್ಷದ ಶಿಸ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜು ಪಾಟೀಲ್ ಆದೇಶಿಸಿದ್ದಾರೆ.
ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನಪರಿಷತ್ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ.
ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು (6) ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.