ರಾಜ್ಯಸಭೆಗೆ ದೇವೇಗೌಡರ ಸ್ಪರ್ಧೆ ನಿಶ್ಚಿತ: ಮಾಜಿ ಪ್ರಧಾನಿಗೆ ಕಾಂಗ್ರೆಸ್ ಬೆಂಬಲ
Team Udayavani, Jun 8, 2020, 12:29 PM IST
ಬೆಂಗಳೂರು: ರಾಜ್ಯಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇ ಗೌಡರು ಸ್ಪರ್ಧೆ ನಡೆಸುವುದು ಖಚಿತವಾಗಿದೆ. ಈ ಬಗ್ಗೆ ಎಚ್ ಡಿ ಕುಮಾರಸ್ವಾಮಿಯವರು ಟ್ವೀಟ್ ಮಾಡಿದ್ದು, ಕಾಂಗ್ರೆಸ್ ನಾಯಕರ ಒತ್ತಾಯದ ಮೇರೆಗೆ ದೇವೇಗೌಡರು ಸ್ಪರ್ಧಿಸಲು ಒಪ್ಪಿದ್ದಾರೆ ಎಂದಿದ್ದಾರೆ.
ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರ ಒತ್ತಾಯದ ಕಾರಣ ಎಚ್ ಡಿ ದೇವೇ ಗೌಡರು ರಾಜ್ಯಸಭಾ ಸ್ಪರ್ಧೆಗೆ ಒಪ್ಪಿಗೆ ಸೂಚಿಸಿದ್ದಾರೆ. ನಾಳೆ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ರಾಜಕೀಯದಲ್ಲಿ ಜನರಿಂದಲೇ ಗೆಲುವು ಸೋಲುಗಳನ್ನು ಕಂಡಿರುವ ಜನರಿಂದಲೇ ದೇಶದ ಅತ್ಯುನ್ನತ ಸ್ಥಾನಕ್ಕೇರಿದ್ದ ಜನನಾಯಕ ದೇವೇಗೌಡರನ್ನು ರಾಜ್ಯಸಭೆ ಪ್ರವೇಶಿಸುವಂತೆ ಮನವೊಲಿಸುವುದು ಸುಲಭದ ಕೆಲಸವಾಗಿರಲಿಲ್ಲ. ಆದರೆ ಎಲ್ಲರ ಆಶೋತ್ತರಗಳಿಗೆ ಪ್ರೀತಿಪೂರ್ವಕವಾಗಿ ಮಣಿದಿದ್ದಾರೆ. ರಾಜ್ಯಸಭೆಯಲ್ಲಿ ದೇವೇಗೌಡರು ರಾಜ್ಯದ ಅಗ್ರ ಪ್ರತಿನಿಧಿಯಾಗಲಿದ್ದಾರೆ ಎಂದು ಎಚ್ ಡಿಕೆ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಕರ್ನಾಟಕದಿಂದ ರಾಜ್ಯಸಭೆಗೆ ನಾಲ್ಕು ಸ್ಥಾನಗಳು ತೆರವಾಗಿದ್ದು, ಇದಕ್ಕಾಗಿ ಜೂನ್ 19ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಈಗಾಗಲೇ ಮಲ್ಲಿಕಾರ್ಜುನ ಖರ್ಗೆಯವರ ಹೆಸರನ್ನು ಅಂತಿಮಗೊಳಿಸಿದೆ. ಲೆಕ್ಕಾಚಾರಗಳ ಪ್ರಕಾರ ಬಿಜೆಪಿ ಎರಡು ಸ್ಥಾನಗಳನ್ನು ಗೆಲ್ಲುವುದು ನಿಶ್ಚಿತವಾಗಿದ್ದು, ಆದರೆ ಅಭ್ಯರ್ಥಿಗಳು ಇನ್ನೂ ಅಂತಿಮವಾಗಿಲ್ಲ. ಅದರಂತೆ ಖರ್ಗೆಯವರು ರಾಜ್ಯಸಭೆಗೆ ಪ್ರವೇಶ ಮಾಡುವುದು ಕೂಡಾ ಬಹುತೇಕ ನಿಶ್ಚಿತವಾಗಿದೆ. ಉಳಿದ ಒಂದು ಸ್ಥಾನದ ಲೆಕ್ಕಾಚಾರಗಳು ಕಳೆದ ಕೆಲ ದಿನಗಳಿಂದ ನಡೆಯುತ್ತಿದ್ದು, ಕಾಂಗ್ರೆಸ್ ಬೆಂಬಲ ನೀಡುವ ಕಾರಣ ಜೆಡಿಎಸ್ ವರಿಷ್ಠ ದೇವೇಗೌಡರ ರಾಜ್ಯಸಭೆ ಪ್ರವೇಶವೂ ಸುಲಭವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.