ಮಾಸ್ತಿ ಭವನ ಶಿಲಾನ್ಯಾಸ ನೆರವೇರಿಸಿದ ಸಿಎಂ ಬೊಮ್ಮಾಯಿ, ಎಸ್.ಟಿ.ಸೋಮಶೇಖರ್

Team Udayavani, Apr 18, 2022, 4:00 PM IST

ಮಾಸ್ತಿ ಭವನ ಶಿಲಾನ್ಯಾಸ ನೆರವೇರಿಸಿದ ಸಿಎಂ ಬೊಮ್ಮಾಯಿ, ಎಸ್.ಟಿ.ಸೋಮಶೇಖರ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ನಗರದ ನಾಗದೇವನಹಳ್ಳಿಯಲ್ಲಿನ ಜ್ಞಾನಭಾರತಿ ಬಡಾವಣೆಯಲ್ಲಿ ಮಾಸ್ತಿ ಭವನ ಶಿಲಾನ್ಯಾಸ ನೆರವೇರಿಸಿದರು.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಾತನಾಡಿ, ಸೋಮಶೇಖರ್ ಅವರಿಗೆ ಅಸಾಧ್ಯವಾದದನ್ನು ಸಾಧ್ಯವಾಗಿಸುವ ಶಕ್ತಿಯಿದೆ. ಸಹಕಾರ ಕ್ಷೇತ್ರದಲ್ಲಿ ಕ್ರಾಂತಿ ಮಾಡುತ್ತಿದ್ದಾರೆ ಎಂದರು.

ನಾನು ಮುಖ್ಯಮಂತ್ರಿ ಆಗುತ್ತಿದ್ದಂತೆ ಯಶಸ್ವಿನಿ ಯೋಜನೆ ಮರುಜಾರಿ ಮಾಡಿ ಯಶಸ್ವಿ ಮಾಡುವಂತೆ ಮನವಿ ಮಾಡಿದರು. 22 ರಿಂದ 32 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸಿಗುವಂತೆ ಮಾಡಿ ರೈತರ ಸಹಾಯಕ್ಕೆ ಮುಂದಾಗಿದ್ದಾರೆ ಎಂದು ಹೇಳಿದರು.

ನಾನು ಕ್ಷೀರ ಬ್ಯಾಂಕ್ ಆಗಬೇಕೆಂದು ಸೋಮಶೇಖರ್ ಅವರಿಗೆ ಸೂಚಿಸಿದೆ. ಕೂಡಲೇ ಅದಕ್ಕೆ ಬೇಕಾದ ಎಲ್ಲಾ ರೀತಿಯ ತಯಾರಿ ಮಾಡಿಕೊಂಡು ಅಮಿತ್ ಶಾ ಅವರನ್ನು ಬೆಂಗಳೂರಿಗೆ ಆಹ್ವಾನಿಸಿ ಅದರ ಲೋಗೋ ಕೂಡ ಬಿಡುಗಡೆ ಮಾಡಿಸಿದರು. 15 ದಿನದಲ್ಲಿ ಕಾನೂನು ಸ್ವರೂಪ ಪಡೆದುಕೊಳ್ಳಲಿದೆ. ಇದು ಸೋಮಶೇಖರ್ ಅವರ ಬದ್ಧತೆ ಪ್ರದರ್ಶಿಸುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್, ಯಾವುದೇ ಸಮಸ್ಯೆ ಮುಖ್ಯಮಂತ್ರಿಗಳ ಗಮನಕ್ಕೆ ತಂದರೆ ತಕ್ಷಣ ಪರಿಹಾರ ಮಾಡ್ತಾರೆ ಎಂಬುದಕ್ಕೆ ಮಾಸ್ತಿ ಭವನ ಶಿಲಾನ್ಯಾಸ ಕಾರ್ಯಕ್ರಮವೇ ಸಾಕ್ಷಿ ಎಂದರು.

ಮಾಸ್ತಿ ಭವನ ನಿರ್ಮಾಣಕ್ಕೆ ತೊಂದರೆ ಆಗುತ್ತಿದೆ ಎಂದು ಗಮನಕ್ಕೆ ಬರುತ್ತಿದ್ದಂತೆ ವಾರದಲ್ಲಿ ಸಮಸ್ಯೆ ಇತ್ಯರ್ಥಪಡಿಸಿದ್ದಾರೆ. ಇದೊಂದೇ ಅಲ್ಲ ಸಮಸ್ಯೆ ತಿಳಿಯುತ್ತಿದ್ದಂತೆ ಅದನ್ನು ಶೀಘ್ರದಲ್ಲೇ ಪರಿಹರಿಸುತ್ತಾರೆ ಎಂದು ಹೇಳಿದರು.

ಬೆಂಗಳೂರು ಇಂದು ಬೃಹದಾಕಾರವಾಗಿ ಬೆಳೆದಿದೆ. ನಗರದ ಜನತೆಗೆ ಯಾವುದೇ ತೊಂದರೆಯಾಗದಂತೆ ನಗರದ ಅಭಿವೃದ್ದಿಗಾಗಿ ಒಂದೇ ದಿನ 8 ಸಾವಿರ ಕೋಟಿ ರೂ.‌ಅನುದಾನ ಬಿಡುಗಡೆ ಮಾಡಿದ್ದಾರೆ ಎಂದರು.

ಮಳೆ ಅನಾಹುತ ಗಮನಿಸಿ, ರಾಜಕಾಲುವೆ ದುರಸ್ತಿಗೆ 1500 ಕೋಟಿ ರೂ. ಅನುದಾನ  ಬಿಡುಗಡೆ ಮಾಡಿದ ಮುಖ್ಯಮಂತ್ರಿಗಳು ಜನರಿಗೆ ತೊಂದರೆ ಆಗದಂತೆ ಕ್ರಮವಹಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನ ಮುಖ್ಯರಸ್ತೆಗಳನ್ನು ಗುಂಡಿ ಮುಕ್ತ ಮಾಡಿ ಡಾಂಬರೀಕರಣಕ್ಕಾಗಿ 800 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದಾರೆ. ವೈಯಕ್ತಿಕವಾಗಿ ಸ್ಥಳ ಪರಿಶೀಲನೆ ಮಾಡುವುದಲ್ಲದೆ ಕೆಲಸ ಮಾಡದ ಅಧಿಕಾರಿಗಳನ್ನು ಅಮಾನತು ಕೂಡ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳ ಕಾರ್ಯವೈಖರಿಯನ್ನು ಸಚಿವರು ಶ್ಲಾಘಿಸಿದರು.

30-40 ವರ್ಷದಿಂದ ಗೃಹ ನಿರ್ಮಾಣ ಸಹಕಾರ ಸಂಘಗಳಿಂದ ನಿರ್ಮಾಣವಾದ ಬಡವಾಣೆಗಳಿಗೆ ಬಿಡಿಎ ನೋಟಿಸ್ ನೀಡಿರುವ ಬಗ್ಗೆ ಕೆಲವರು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತಿದ್ದಂತೆ ವೇದಿಕೆಯಲ್ಲಿ ಬಿಡಿಎ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕುಡಿಯುವ ನೀರು ಪೂರೈಕೆ, ಮೂಲ ಸೌಕರ್ಯಗಳಿಗೆ ಯಾವುದೇ ತೊಂದರೆ ಮಾಡದಂತೆ ಸೂಚಿಸಿದರು ಎಂದರು.

ಕೆಂಪೇಗೌಡ ಬಡವಾಣೆ ವಿಚಾರದಲ್ಲಿ ರೈತರಿಗೆ ತೊಂದರೆ ಆಗದಂತೆ ಕ್ರಮವಹಿಸಲಾಗುತ್ತದೆ. ಕಾಮಗಾರಿ ಪುರ್ಣ ಮಾಡುವ ಕುರಿತು ಶೀಘ್ರದಲ್ಲೇ ಪ್ರತ್ಯೇಕ ಸಭೆ ನಡೆಸಲಾಗುವುದು. ಬೆಂಗಳೂರಿಗೆ ಹೊಂದಿಕೊಂಡಿರುವ 110 ಹಳ್ಳಿಗಳ ಅಭಿವೃದ್ಧಿಗೆ 402 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.