ನಾಲ್ವರು ಯುವಕರು ನೀರುಪಾಲು
Team Udayavani, Mar 5, 2020, 3:04 AM IST
ಜೇವರ್ಗಿ/ಮಡಿಕೇರಿ: ರಾಜ್ಯದ ವಿವಿಧೆಡೆ ನೀರಿನಲ್ಲಿ ಮುಳುಗಿ ನಾಲ್ವರು ಯುವಕರು ಬುಧವಾರ ಮೃತಪಟ್ಟಿ ದ್ದಾರೆ. ಕಲಬು ರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಹಾಲಗಡ್ಲಾ ಬಳಿ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಯುವಕರಿ ಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ತಾಲೂಕಿನ ಹರನೂರ ಗ್ರಾಮದ ಬಸಣ್ಣ ಸಕ್ರೆಪ್ಪ (25) ಮತ್ತು ನಾಗಣ್ಣ ಸಕ್ರೆಪ್ಪ (18) ಮೃತ ಯುವಕರು.
ಹಾಲಗಡ್ಲಾ ಕೆರೆ ಬಳಿ ಯುವಕರ ಜಮೀನಿದ್ದು, ಕಳೆದ ಕೆಲ ದಿನಗಳಿಂದ ಕೆರೆಯಲ್ಲಿ ನಿತ್ಯ ಮೀನು ಹಿಡಿಯುತ್ತಿ ದ್ದರು. ಬುಧವಾರ ಮಧ್ಯಾಹ್ನ ಎಂದಿ ನಂತೆ ಮೀನು ಹಿಡಿ ಯಲು ಹೋದ ವೇಳೆ ಕಾಲು ಜಾರಿಬಿದ್ದು, ನೀರು ಪಾಲಾಗಿ ದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಯುವಕರ ಮೃತದೇಹವನ್ನು ಹೊರ ತೆಗೆದರು.
ವಿದ್ಯಾರ್ಥಿಗಳು ಮೃತ: ಕಾವೇರಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿಗಳಿಬ್ಬರು ಮೃತಪಟ್ಟ ಘಟನೆ ಮಡಿಕೇರಿ ಸಮೀ ಪದ ದುಬಾರೆಯಲ್ಲಿ ನಡೆದಿದೆ. ಗೋಣಿಕೊಪ್ಪದ ಕಳತ್ಮಾಡು ಲಯನ್ಸ್ ಶಾಲೆಯ ವಿದ್ಯಾರ್ಥಿಗಳಾದ ಶ್ರೇಯಸ್ ಮತ್ತು ಲೆನಿನ್ ಮೃತ ವಿದ್ಯಾರ್ಥಿಗಳು. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ತಂಡದ 39 ವಿದ್ಯಾರ್ಥಿಗಳು ಶಿಕ್ಷಕರೊಂದಿಗೆ ಪ್ರವಾಸ ಕ್ಕೆಂದು ದುಬಾರೆಗೆ ಆಗಮಿಸಿದ್ದರು. ಈ ಸಂದರ್ಭ ಶ್ರೇಯಸ್ ಮತ್ತು ಲೆನಿನ್ ಆಳ ವಾದ ಪ್ರದೇಶದಲ್ಲಿ ನೀರಿಗೆ ಇಳಿದಿದ್ದು, ಸೆಳೆತಕ್ಕೆ ಸಿಲುಕಿ ಇಬ್ಬರೂ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಣ್ಣಾಮಲೈರಿಂದ ಬೇರೇನು ನಿರೀಕ್ಷಿಸಬಹುದು: ಸಿಎಂ ಪ್ರಶ್ನೆ
ರಾಜ್ಯದಲ್ಲಿ ಹೊಂದಾಣಿಕೆ ರಾಜಕೀಯ ಮಾಡಿಕೊಳ್ಳದ 4-5 ಜನರೇ ಟಾರ್ಗೆಟ್: ಯತ್ನಾಳ್
JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್
ತುಮಕೂರು ಅಥವಾ ನೆಲಮಂಗಲ ಸಮೀಪವೇ ಮತ್ತೊಂದು ಏರ್‌ಪೋರ್ಟ್ ಆಗಲಿ: ವಿ.ಸೋಮಣ್ಣ
BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್
MUST WATCH
ಹೊಸ ಸೇರ್ಪಡೆ
ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ
ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್’ ದ್ವಿತೀಯ
Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ
ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ
ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.