ಹದಿನಾಲ್ಕು ಮಾಸಗಳ ಮಾಸದ ಹೆಜ್ಜೆ…
Team Udayavani, Jul 24, 2019, 3:02 AM IST
* 2018ರ ಮೇ 15ರಂದು ವಿಧಾನಸಭೆ ಫಲಿತಾಂಶ.
* ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. (ಬಿಜೆಪಿ-104, ಕಾಂಗ್ರೆಸ್-78, ಜೆಡಿಎಸ್-38 ಹಾಗೂ ಪಕ್ಷೇತರ-2).
* ನಂತರ ಜಯನಗರ ಹಾಗೂ ರಾಜರಾಜೇಶ್ವರಿ ನಗರದ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜಯ.
* 2018ರ ಮೇ 15ರ ಸಂಜೆಯೇ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರಿಂದ ರಾಜ್ಯಪಾಲರ ಭೇಟಿ.
* ಅಂದೇ ರಾತ್ರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್-ಜೆಡಿಎಸ್, ಬಿಎಸ್‌ವೈ ಪ್ರಮಾಣವಚನಕ್ಕೆ ತಡೆ ನೀಡಲು ಮನವಿ- ತಡೆ ನೀಡಿದ ಸುಪ್ರೀಂ ಕೋರ್ಟ್.
* ಮೇ 15ರ ರಾತ್ರಿ 9.45ಕ್ಕೆ ಬಿಜೆಪಿ ಸರ್ಕಾರ ರಚನೆಗೆ ಅವಕಾಶ ನೀಡಿದ ರಾಜ್ಯಪಾಲ ವಿ.ಆರ್.ವಾಲಾ.
* ಮೇ 17ರ ಬೆಳಗ್ಗೆ 9ಕ್ಕೆ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಅವರಿಂದ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ.
* ಮೇ 19ರ ಸಂಜೆ 4 ಗಂಟೆಯೊಳಗೆ ವಿಶ್ವಾಸ ಮತ ಸಾಬೀತು ಮಾಡುವಂತೆ ಬಿ.ಎಸ್.ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ಸೂಚನೆ, ಬಹುಮತ ಸಾಬೀತು ಮಾಡದೇ ರಾಜೀನಾಮೆ ನೀಡಿ ಹೊರ ನಡೆದ ಬಿ.ಎಸ್.ಯಡಿಯೂರಪ್ಪ ಮತ್ತು ತಂಡ.
* ಕಾಂಗ್ರೆಸ್- ಜೆಡಿಎಸ್ ಮೈತ್ರಿಗಾಗಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ ಕಾಂಗ್ರೆಸ್ ನಾಯಕರು.
* ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಎಚ್.ಡಿ.ಕುಮಾರಸ್ವಾಮಿಯವರಿಂದ ಮೇ 23ರ ಸಂಜೆ ವಿಧಾನಸೌಧದ ಮುಂಭಾಗದಲ್ಲಿ ಪ್ರಮಾಣ ವಚನ ಸ್ವೀಕಾರ. ದೇಶದ ವಿವಿಧ ಪಕ್ಷಗಳ ನಾಯಕರು ಭಾಗಿ.
* ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿಯಿಂದ ಕರಾಳದಿನಾಚರಣೆ.
* ಮೇ 25ರಂದು ವಿಶ್ವಾಸಮತ ಸಾಬೀತು ಮಾಡಿದ ಎಚ್.ಡಿ.ಕುಮಾರಸ್ವಾಮಿ.
* ಜೂನ್ 25ರಂದು ಬಿ.ಎಸ್.ಯಡಿಯೂರಪ್ಪ ದಿಢೀರ್ ಗುಜರಾತ್‌ಗೆ ಭೇಟಿ ನೀಡಿ, ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಿದರು.
* ಮೇ 29ರಂದು ಬಿಜೆಪಿಯಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಿಗೆ ಆಹ್ವಾನ.
* ಜುಲೈ 5ರಂದು ಮೈತ್ರಿ ಸರ್ಕಾರದ ಮೊದಲ ಬಜೆಟ್ ಮಂಡನೆ.
* ನವೆಂಬರ್‌ನಲ್ಲಿ ನಡೆದ ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ.
* ಬಿಜೆಪಿ ಸರ್ಕಾರ ರಚನೆಗೆ ಸತತ ಪ್ರಯತ್ನ. ಡಿಸೆಂಬರ್‌ನಲ್ಲಿ ರಾಜೀನಾಮೆ ನೀಡಲು ಮುಂದಾದ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಮತ್ತು ತಂಡ, ಮುಂಬೈ ಸೇರಿದ ನಾಲ್ವರು ಅತೃಪ್ತ ಶಾಸಕರು.
* ಜನವರಿಯಲ್ಲಿ ಕಾಂಗ್ರೆಸ್ ಶಾಸಕರು ರಾಮನಗರದ ಈಗಲ್‌ಟನ್ ರೆಸಾರ್ಟ್‌ಗೆ ಶಿಫ್ಟ್ ಮತ್ತು ಮೈತ್ರಿ ಸರ್ಕಾರ ಉಳಿಸಲು ರಾಜ್ಯಕ್ಕೆ ಬಂದ ಅಹ್ಮದ್ ಪಟೇಲ್ ಹಾಗೂ ಗುಲಾಂ ನಬಿ ಆಜಾದ್.
* ಈಗಲ್‌ಟನ್ ರೆಸಾರ್ಟ್‌ನಲ್ಲಿ ಕಾಂಗ್ರೆಸ್ ಶಾಸಕರ ಹೊಡೆದಾಟ.
* ಮತ್ತೇ ಸರ್ಕಾರದ ವಿರುದ್ಧ ಪ್ರತಿಭಟನೆ ಮುಂದುವರಿಸಿದ ಬಿಜೆಪಿ.
* ಫೆಬ್ರವರಿಯಲ್ಲಿ ಬಿಜೆಪಿ ಸರ್ಕಾರ ರಚನೆಯ ವಿಫಲ ಯತ್ನ.
* ಮಾರ್ಚ್‌ನಿಂದ ಲೋಕಸಭಾ ಚುನಾವಣೆ ತಯಾರಿ.
* ಮೇ 23ರಂದು ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ.
* ರಾಜ್ಯ ಬಿಜೆಪಿಯಲ್ಲಿ ಹೆಚ್ಚಿದ ಸರ್ಕಾರ ರಚನೆಯ ಆಸಕ್ತಿ.
* ಮೈತ್ರಿ ಸರ್ಕಾರದ ಪಕ್ಷಕ್ಕೆ ಹೀನಾಯ ಸೋಲು. ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಅಸಮಾಧಾನ.
* ಮೈತ್ರಿ ಬಿಡುವಂತೆ ಕಾಂಗ್ರೆಸ್‌ನ ಪ್ರಮುಖ ನಾಯಕರ ಬಹಿರಂಗ ಹೇಳಿಕೆ.
* ಬಿಕ್ಕಟಾದ ಮೈತ್ರಿ ಸರ್ಕಾರದ ಸಂಪುಟ ಪುನರ್ ರಚನೆ ಹಾಗೂ ವಿಸ್ತರಣೆ.
* ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ.
* ಸ್ವತಂತ್ರ ಅಭ್ಯರ್ಥಿಗಳಿಂದ ಮತ್ತೆ ಮೈತ್ರಿ ಸರ್ಕಾರಕ್ಕೆ ಬೆಂಬಲ.
* ಸಂಪುಟ ವಿಸ್ತರಣೆ, ಸ್ವತಂತ್ರ ಅಭ್ಯರ್ಥಿಗಳಿಗೆ ಮತ್ತೆ ಮಂತ್ರಿಗಿರಿ.
* ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಲ್ಲಿ ಹೆಚ್ಚಿದ ಅಸಮಾಧಾನ.
* ಜುಲೈ 1ರಂದು ಶಾಸಕರಾದ ಆನಂದ್ ಸಿಂಗ್ ಹಾಗೂ ರಮೇಶ್ ಜಾರಕಿಹೋಳಿ ರಾಜೀನಾಮೆ.
* ಜುಲೈ 2ರಂದು “ರಿವರ್ಸ್ ಆಪರೇಷನ್’ಗೆ ಬಿಎಸ್‌ವೈ ಸವಾಲು.
* ಜುಲೈ 6ರಂದು 9 ಮಂದಿ ಅತೃಪ್ತ ಶಾಸಕರ ರಾಜೀನಾಮೆ.
* ಜುಲೈ 6ರಂದೇ ಮುಂಬೈಗೆ ಹಾರಿದ ಅತೃಪ್ತ ಶಾಸಕರು.
* ರಾಜೀನಾಮೆ ಅಂಗೀಕಾರಕ್ಕೆ ಕೋರಿ ಸುಪ್ರೀಂಗೆ ಅರ್ಜಿ.
* ಕ್ರಮಬದ್ಧವಾಗಿ ರಾಜೀನಾಮೆ ನೀಡಲು ಜುಲೈ 11ರಂದು ಓಡೋಡಿ ಬಂದ ಅತೃಪ್ತರು.
* ಜುಲೈ 12ರಿಂದ ಅಧಿವೇಶನ ಆರಂಭ.
* ವಿಶ್ವಾಸ ಮತ ನಿರ್ಣಯದ ಪ್ರಸ್ತಾಪ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ.
* ಜುಲೈ 12ರಿಂದ 23ರವರೆಗೂ ಮೈತ್ರಿ ಸರ್ಕಾರದ ಸಚಿವರು, ಶಾಸಕರಿಂದ ಸರ್ಕಾರದ ಸಾಧನೆ, ಬಿಜೆಪಿ ವಿರುದ್ಧ ಹಾಗೂ ಅತೃಪ್ತರ ವಿರುದ್ಧ ವಾಗ್ಧಾಳಿ.
* ಸದನದಲ್ಲಿ ತಾಳ್ಮೆ ಕಳೆದುಕೊಳ್ಳದ ಬಿಜೆಪಿ ಸದಸ್ಯರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.