Fraud case; ಕೋರ್ಟ್ ನಲ್ಲಿ ಜಡ್ಜ್ ಎದುರು ಕಣ್ಣೀರು ಹಾಕಿದ ಚೈತ್ರಾ ಕುಂದಾಪುರ!
10 ದಿನಗಳ ಕಾಲ ನ್ಯಾಯಾಂಗ ಬಂಧನ....ವಂಚನೆ ಬಳಿಕ ಐಷಾರಾಮಿ ಜೀವನ!
Team Udayavani, Sep 13, 2023, 4:32 PM IST
ಬೆಂಗಳೂರು: ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಆಕೆಯ ಸಂಗಡಿಗರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬುಧವಾರ ಬೆಂಗಳೂರಿನ 1 ನೇ ಎಪಿಎಂಸಿ ಕೋರ್ಟ್ ಗೆ ಹಾಜರು ಪಡಿಸಿದ್ದು, ಸೆ. 23 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ವಂಚನೆಯಲ್ಲಿ ಭಾಗಿಯಾದ ಆರೋಪಿಗಳಾದ ಶ್ರೀಕಾಂತ್, ಗಗನ್, ರಮೇಶ್, ಪ್ರಜ್ವಲ್, ಧನ್ ರಾಜ್ ಅವರನ್ನೂ 10 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕೋರ್ಟ್ ನಲ್ಲಿ ಚೈತ್ರಾ, ಜಡ್ಜ್ ಎದುರು ಕಣ್ಣೀರು ಹಾಕಿ, ‘ನನಗೆ ಪೊಲೀಸರು ಕಿರಿಕಿರಿ ಮಾಡಿದ್ದಾರೆ’ ಎಂದು ಹೇಳಿರುವುದಾಗಿ ವರದಿಯಾಗಿದೆ.
ಐಷಾರಾಮಿ ಜೀವನ
ವಂಚನೆ ಪ್ರಕರಣ ಬೆಳಕಿಗೆ ಬರುವ ಮುನ್ನ ಚೈತ್ರಾ ದುಬಾರಿ ಬೆಲೆಯ ಕಾರು ಖರೀದಿಸಿ ಐಷಾರಾಮಿ ಜೀವನ ನಡೆಸುತ್ತಿದ್ದುದು ಬಯಲಾಗಿದೆ.
ವಿಧಾನಸಭಾ ಚುನಾವಣೆ ವೇಳೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರು ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.