ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಿಪಿಎಲ್ ಗ್ರಾಹಕರಿಗೆ ಉಚಿತ “ಬೆಳಕು”
ರಾಜ್ಯ ಸರಕಾರದ ಮಹತ್ವದ ನಿರ್ಧಾರ, ಬೊಕ್ಕಸಕ್ಕೆ 979 ಕೋಟಿ ವಾರ್ಷಿಕ ಹೊರೆ
Team Udayavani, May 13, 2022, 6:07 PM IST
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಎಲ್ಲ ಬಿಪಿಎಲ್ ಕುಟುಂಬಗಳಿಗೆ ನೀಡುತ್ತಿದ್ದ ಉಚಿತ ವಿದ್ಯುತ್ ಪ್ರಮಾಣವನ್ನು 40 ಯುನಿಟ್ ನಿಂದ 75 ಯುನಿಟ್ ಗೆ ಹೆಚ್ಚಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರಕಾರ ತೆಗೆದುಕೊಂಡಿದೆ. ಇದರಿಂದ ಇಂಧನ ಇಲಾಖೆಗೆ ವಾರ್ಷಿಕ 979 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದ್ದು, ಇದೇ ತಿಂಗಳಿಂದ ಯೋಜನೆಯ ಲಾಭ ಫಲಾನುಭವಿಗಳಿಗೆ ಲಭ್ಯವಾಗಲಿದೆ.
ಇದಕ್ಕೆ ಸಂಬಂಧಪಟ್ಟ ಕಡತ ಈಗಾಗಲೇ ಹಣಕಾಸು ಇಲಾಖೆಗೆ ರವಾನೆಯಾಗಿದ್ದು, ಇನ್ನೆರಡು ದಿನದಲ್ಲಿ ಅಧಿಕೃತ ಆದೇಶ ಪ್ರಕಟವಾಗಲಿದೆ. ಆದರೆ ಇದಕ್ಕೆ ಸಂಬಂಧಪಟ್ಟ ಎಲ್ಲ ಪ್ರಕ್ರಿಯೆಗಳನ್ನು ಇಂಧನ ಇಲಾಖೆ ಪೂರ್ಣಗೊಳಿಸಿದ್ದು, ಭಾಗ್ಯಜ್ಯೋತಿ ಹಾಗೂ ಕುಟಿರ ಜ್ಯೋತಿ ಯೋಜನೆ ವ್ಯಾಪ್ತಿಯಲ್ಲಿ ಬರುವವರೂ ಸೇರಿದಂತೆ ಪರಿಶಿಷ್ಟ ಜಾತಿ ಹಾಗೂ ಪಂಗಡದ ಫಲಾನುಭವಿಗಳ ಮನೆಯಲ್ಲಿ ಇನ್ನು ಮುಂದೆ ವಿದ್ಯುತ್ “ನಿರಂತರ”ವಾಗಲಿದೆ.
ಮಾಜಿ ಉಪ ಪ್ರಧಾನಿ ದಿ. ಬಾಬು ಜಗಜೀವನ್ ರಾಮ್ ಅವರ ೧೧೫ ಜಯಂತಿ ಸಮಾರಂಭದಲ್ಲಿ ಗ್ರಾಮೀಣ ಪ್ರದೇಶದ ಭಾಗ್ಯ ಜ್ಯೋತಿ ಹಾಗೂ ಕುಟಿರ ಜ್ಯೋತಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಹಾಗೂ ಪಂಗಡದ ಕುಟುಂಬಗಳಿಗೆ ಹಾಲಿ ಉಚಿತವಾಗಿ ನೀಡುತ್ತಿದ್ದ 40 ಯುನಿಟ್ ವಿದ್ಯುತ್ ಅನ್ನು 75 ಯುನಿಟ್ ಹೆಚ್ಚಿಸಲಾಗುವುದು ಎಂದು ಏಪ್ರೀಲ್ 5 ರಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಇಂಧನ ಇಲಾಖೆಗೆ ಕಡತ ರವಾನೆಯಾಗಿತ್ತು.
ಇದನ್ನೂ ಓದಿ : ಆ್ಯಸಿಡ್ ದಾಳಿಕೋರ ನಾಗೇಶ್ ಕೊನೆಗೂ ಅರೆಸ್ಟ್: ಸ್ವಾಮೀಜಿಯಂತೆ ವೇಷ ಧರಿಸಿದ್ದ!
ಇದಕ್ಕೆ ತಕ್ಷಣ ಸ್ಪಂದಿಸಿರುವ ಇಂಧನ ಸಚಿವ ವಿ.ಸುನೀಲ್ ಕುಮಾರ್ ಉಚಿತ ವಿದ್ಯುತ್ ಪ್ರಮಾಣ ಹೆಚ್ಚಳಕ್ಕೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ತುರ್ತು ಕ್ರಮ ಕೈಗೊಂಡಿರುವ ಇಂಧನ ಇಲಾಖೆ ಕೇವಲ ಒಂದು ತಿಂಗಳ ಅವಧಿಯಲ್ಲೇ ಕ್ರಮ ತೆಗೆದುಕೊಂಡಿದೆ.
ರಾಜ್ಯದಲ್ಲಿ 75 ಯುನಿಟ್ ಒಳಗೆ ವಿದ್ಯುತ್ ಬಳಸುವ ಗೃಹ ಬಳಕೆದಾರರ ಸಂಖ್ಯೆ 1,46,65,910 ರಷ್ಟು ಇದೆ. ಈ ಪೈಕಿ ಭಾಗ್ಯ ಜ್ಯೋತಿ ಹಾಗೂ ಕುಟಿರ ಜ್ಯೋತಿ ವ್ಯಾಪ್ತಿಗೆ ಬರುವ ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಳಕೆದಾರರ ಸಂಖ್ಯೆ 39,26,065 ರಷ್ಟು ಇದೆ. ಈ ಗ್ರಾಹಕರು ವಾರ್ಷಿಕ 1,356,92 ಮಿಲಿಯನ್ ಯುನಿಟ್ ಬಳಕೆ ಮಾಡುತ್ತಾರೆ. ಒಟ್ಟಾರೆಯಾಗಿ ಈ ಯೋಜನೆಯ ಫಲಾನುಭವಿಗಳನ್ನೂ ಒಳಗೊಂಡಂತೆ ಪರಿಶಿಷ್ಟ ಜಾತಿಯ ಗ್ರಾಹಕರಿಗೆ 694.15 ಕೋಟಿ ರೂ, ಪರಿಶಿಷ್ಟ ಪಂಗಡದ ಗ್ರಾಹಕರಿಗೆ 285.42 ಕೋಟಿ ರೂ. ಸೇರಿದಂತೆ 979 ಕೋಟಿ ರೂ.ನ್ನು ಸಬ್ಸಿಡಿ ರೂಪದಲ್ಲಿ ಇಂಧನ ಇಲಾಖೆ ನೀಡಲಿದೆ.
ಈ ಹಿನ್ನೆಲೆಯಲ್ಲಿ ಇಂಧನ ಇಲಾಖೆ ನಿಯಮಾವಳಿ ರೂಪಿಸಿ ಆರ್ಥಿಕ ಇಲಾಖೆಗೆ ಕಳುಹಿಸಿಕೊಟ್ಟಿದೆ. ಒಟ್ಟಾರೆಯಾಗಿ ಈ ಸಬ್ಸಿಡಿ ಯೋಜನೆಗೆ 979 ಕೋಟಿ ರೂ. ಹೆಚ್ಚುವರಿ ಸಹಾಯಧನ ಅಗತ್ಯವಾಗಿದ್ದು, 75 ಯುನಿಟ್ ವರೆಗೆ ಮಾತ್ರ ಉಚಿತ ವಿದ್ಯುತ್ ನೀಡಲಾಗುತ್ತದೆ. ಈ ವ್ಯವಸ್ಥೆ ಮೇ 1 ರಿಂದಲೇ ಜಾರಿಗೆ ಬರಲಿದೆ. ಈ ಪ್ರವರ್ಗದ ಗ್ರಾಹಕರಿಗೆ ಮಾಪಕ ವ್ಯವಸ್ಥೆ ಕಡ್ಡಾಯವಾಗಿರಲಿದೆ. ಯೋಜನೆ ವ್ಯಾಪ್ತಿಗೆ ಬರಲು ಇಲಾಖೆ ನಿಯಮಗಳನ್ನು ರೂಪಿಸಿದ್ದು, ಏಪ್ರೀಲ್ ಅಂತ್ಯದೊಳಗಾಗಿ ಬಾಕಿ ವಿದ್ಯುತ್ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸಿರಬೇಕಾಗುತ್ತದೆ. ನೇರ ನಗದು ವರ್ಗಾವಣೆ ಮೂಲಕ ಸಹಾಯಧನ ನೀಡುವುದರಿಂದ ಗ್ರಾಹಕರು ತಮ್ಮ ಬ್ಯಾಂಕ್ ಪಾಸ್ ಬುಕ್ ಅನ್ನು ದಾಖಲೆಯ ಜತೆಗೆ ಅಡಕಗೊಳಿಸಬೇಕಾಗುತ್ತದೆ.
ಬಾಬು ಜಗಜೀವನ್ ರಾಮ್ ಜನ್ಮ ದಿನಾಚರಣೆ ಸಂರ‍್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಈ ಬಗ್ಗೆ ಪ್ರಸ್ತಾಪಿಸಿದ್ದರು. ಕಲ್ಯಾಣ ಯೋಜನೆಗಳ ಜಾರಿ ವಿಚಾರದಲ್ಲಿ ಯಾವುದೇ ಕಾರಣಕ್ಕೂ ವಿಳಂಬವಾಗಬಾರದೆಂಬ ಕಾರಣಕ್ಕೆ ಕೇವಲ ಒಂದೇ ತಿಂಗಳಲ್ಲಿ ಸೂಕ್ತ ಪ್ರಕ್ರಿಯೆ ಪರ‍್ಣಗೊಳಿಸಲಾಗಿದ್ದು, ಇದೇ ತಿಂಗಳಿಂದ ಅನ್ವಯವಾಗುವಂತೆ ಯೋಜನೆ ಜಾರಿಗೊಳಿಸುತ್ತೇವೆ.
ವಿ.ಸುನೀಲ್ ಕುಮಾರ್, ಇಂಧನ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.