ಗೋಸ್ವರ್ಗದಲ್ಲಿ ಉಚಿತ ಊಟ, ವಸತಿ ವ್ಯವಸ್ಥೆ
Team Udayavani, Aug 11, 2019, 3:00 AM IST
ಬೆಂಗಳೂರು: ಭೀಕರ ಪ್ರವಾಹದಿಂದ ತತ್ತರಿಸಿರುವ ರಾಜ್ಯದ ಜನತೆಗೆ ರಾಮಚಂದ್ರಾಪುರ ಮಠ ಸಹಾಯಹಸ್ತ ಚಾಚಿದ್ದು, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಬಳಿ ಇರುವ ಗೋಸ್ವರ್ಗದಲ್ಲಿ ನಿರಾಶ್ರಿತರ ಪರಿಹಾರ ಕೇಂದ್ರವನ್ನು ಆರಂಭಿಸಲಾಗಿದೆ. ಯಾವುದೇ ಸರ್ಕಾರಿ ನೆರವು ಅಥವಾ ಪ್ರತಿಫಲಾಪೇಕ್ಷೆ ಇಲ್ಲದೇ ತನ್ನ ಕರ್ತವ್ಯ ಎಂದು ಭಾವಿಸಿ ಈ ಕೇಂದ್ರ ಆರಂಭಿಸಲಾಗುತ್ತಿದೆ ಎಂದು ರಾಘವೇಶ್ವರ ಭಾರತಿ ಸ್ವಾಮೀಜಿಗಳು ತಿಳಿಸಿದ್ದಾರೆ.
ಬೆಂಗಳೂರಿನ ಗಿರಿನಗರದ ಶ್ರೀರಾಮಾಶ್ರಮದಲ್ಲಿ ರಾಮಾಯಣ ಚಾತುರ್ಮಾಸ್ಯ ಕೈಗೊಂಡಿರುವ ಅವರು, ಶನಿವಾರ ಆಶೀರ್ವಚನದಲ್ಲಿ ಈ ವಿಷಯ ಪ್ರಕಟಿಸಿದರು. ರಾಜ್ಯದ ಜನ ಭೀಕರ ಪ್ರವಾಹದಿಂದ ತತ್ತರಿಸಿದ್ದು, ಇದು ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಕ್ಕೆ ಧುಮುಕಬೇಕಾದ ಸಮಯ. ನೊಂದವರ ಬದುಕನ್ನು ಕಟ್ಟಿಕೊಡಲು, ನಮ್ಮ ಸಂಪಾದನೆಯ ಒಂದಿಷ್ಟು ಮೊತ್ತವನ್ನು ಸಮರ್ಪಿಸಬೇಕಾದ ಹೊತ್ತು. ಆದ್ದರಿಂದ ಶ್ರೀಮಠ ಈ ಮಾನವೀಯ ಕಾರ್ಯಕ್ಕೆ ಮುಂದಾಗಿದೆ ಎಂದು ವಿವರಿಸಿದರು.
ಗೋಸ್ವರ್ಗದಲ್ಲಿ ಸಾವಿರಾರು ಮಂದಿಗೆ ಆಶ್ರಯ ನೀಡಲು ಮತ್ತು ಊಟೋಪಚಾರಕ್ಕೆ ವ್ಯವಸ್ಥೆಯಿದ್ದು, ಪ್ರವಾಹ ಸಂತ್ರಸ್ತರು ಉಚಿತವಾಗಿ ಇದನ್ನು ಬಳಸಿಕೊಳ್ಳಬಹುದು ಎಂದರು. ಪ್ರವಾಹ ಸಂತ್ರಸ್ತರಿಗೆ ಇನ್ನೂ ಯಾವ ರೀತಿಯಲ್ಲಿ ನೆರವು ನೀಡಬಹುದು ಎಂಬ ಬಗ್ಗೆ ಚಿಂತನೆ ನಡೆದಿದೆ ಎಂದರು.
ಪರಿಹಾರ ಸಾಮಗ್ರಿ ಸಂಗ್ರಹ: ನೆರೆ ಸಂತ್ರಸ್ತರಿಗೆ ಪರಿಹಾರ ಸಾಮಗ್ರಿ ಸಂಗ್ರಹಕ್ಕೆ ಶ್ರೀಮಠ ವ್ಯವಸ್ಥೆ ಮಾಡಿದೆ. ಮಂಗಳೂರಿನ ನಂತೂರು ಶ್ರೀಭಾರತೀ ಸಮೂಹಸಂಸ್ಥೆಯ ಸೇವಾಸಮಿತಿ ಕಚೇರಿ, ಮಾಣಿಮಠ ಕಚೇರಿ, ಉತ್ತರ ಕನ್ನಡ ಜಿಲ್ಲೆಯ ಕೆಕ್ಕಾರು ಮಠ ಕಚೇರಿ, ಅಪ್ಸರಕೊಂಡ ಮಠದ ಕಚೇರಿ, ಬಾನುಳಿ ಗೋಸ್ವರ್ಗ ಆವರಣದಲ್ಲಿ ಪರಿಹಾರ ಸಾಮಗ್ರಿ ಸಂಗ್ರಹ ಕೇಂದ್ರಗಳನ್ನು ತೆರೆಯಲಾಗಿದೆ. ಇಲ್ಲಿ ಸಂಗ್ರಹಿಸಿದ ಪರಿಹಾರ ಸಾಮಗ್ರಿಗಳನ್ನು ಸಂತ್ರಸ್ತರಿಗೆ ವಿತರಿಸಲಾಗುತ್ತದೆ ಎಂದು ಶ್ರೀಮಠ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.