ಶೀಘ್ರವೇ ಉಚಿತ ಮರಳು ನೀತಿ: ಮುರುಗೇಶ್‌ನಿರಾಣಿ
Team Udayavani, Mar 20, 2021, 6:40 AM IST
ಬೆಂಗಳೂರು: ರಾಜ್ಯದಲ್ಲಿ ಬಡವರು ಹಾಗೂ ಜನಸಾಮಾನ್ಯರು 10 ಲ. ರೂ. ವೆಚ್ಚದಲ್ಲಿ ಮನೆ ಕಟ್ಟಲು ಅನುಕೂಲವಾಗುವಂತೆ ಶೀಘ್ರದÇÉೇ ನೂತನ ಉಚಿತ ಮರಳು ನೀತಿಯನ್ನು ಜಾರಿಗೆ ತರಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಶಾಸಕ ಸಿ. ಎನ್.ಬಾಲಕೃಷ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮರಳು ಸಮಸೆಯನ್ನು ನೀಗಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಆಶ್ರಯ ಮನೆ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾ ಣವಾಗುವ 10 ಲಕ್ಷ ರೂ. ವೆಚ್ಚದ ಮನೆಗೆ 100ರಿಂದ 200 ರೂ. ಗೆ ಟನ್ ಮರಳು ಪೂರೈಕೆ ಮಾಡುವ ಉಚಿತ ಮರಳು ನೀತಿಯನ್ನು ಜಾರಿಗೆ ಮಾಡುತ್ತೇವೆ ಎಂದು ಪ್ರಕಟಿಸಿದರು.
ಇದನ್ನೂ ಓದಿ:ಅಪರಾಧ ನಿಯಂತ್ರಣಕ್ಕೆ ತಂತ್ರಜ್ಞಾನ ವಿನಿಮಯ: ಬಸವರಾಜ ಬೊಮ್ಮಾಯಿ
ಬಡವರು ಹೆಚ್ಚಿನ ಹಣ ಭರಿಸಿ ಮನೆ ಕಟ್ಟಲು ಮರಳು ಖರೀದಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಸರಕಾರದಿಂದಲೇ ಉಚಿತವಾಗಿ ಮರಳು ಪೂರೈಸುವ ಯೋಜನೆ ಇದೆ ಪ್ರಸ್ತುತ ರಾಜ್ಯದ 193 ಮರಳು ನಿಕ್ಷೇಪ ಪ್ರದೇಶಗಳನ್ನು ಗುರುತಿಸಿ 87 ಬ್ಲಾಕ್‌ಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದರು.
ಕಠಿನ ಕ್ರಮ
ರಾಜ್ಯದ ಬಹುತೇಕ ಕಡೆ ಒಂದೇ ಪರ್ಮಿಟ್‌ನಲ್ಲಿ ಅನೇಕರು ಕಾನೂನು ಬಾಹಿರವಾಗಿ ಮರಳು ಸಾಗಿಸುತ್ತಿರುವುದು ಗಮನಕ್ಕೆ ಬಂದಿದೆ. ಈಗಾಗಲೇ ಅನೇಕ ಕಡೆ ಸಭೆಗಳನ್ನು ನಡೆಸಿ ಇದಕ್ಕೆ ಕಡಿವಾಣ ಹಾಕಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಕೊಡಲಾಗಿದೆ ಎಂದರು. ರಾಜ್ಯದ ಎಲ್ಲ ಕಡೆ ಮರಳಿನ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಕಂದಾಯ, ಅರಣ್ಯ, ಗೃಹ, ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಇಂತಹ ದೂರುಗಳು ಬರುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಏಕಗವಾಕ್ಷಿ ಪದ್ಧತಿಯನ್ನು ಜಾರಿ ಮಾಡುತ್ತಿರುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.