“ನಮ್ಮ ಕ್ಲಿನಿಕ್‌ಗೆ ವೈದ್ಯರೆಲ್ಲಿಂದ?’
Team Udayavani, Sep 20, 2022, 6:25 AM IST
ಬೆಂಗಳೂರು: ಇರುವ ಪ್ರಾಥಮಿಕ ಆರೋಗ್ಯ ಕೇಂದ್ರ (ಪಿಎಚ್‌ಸಿ)ಗಳಲ್ಲೇ ವೈದ್ಯಕೀಯ ಸಿಬಂದಿ ಕೊರತೆ ಇದೆ. ಹೀಗಿರುವಾಗ “ನಮ್ಮ ಕ್ಲಿನಿಕ್’ಗಳಿಗೆ ವೈದ್ಯರನ್ನು ಎಲ್ಲಿಂದ ತರುತ್ತೀರಿ ಎಂದು ಜೆಡಿಎಸ್‌ನ ಸಿ.ಎನ್.ಮಂಜೇಗೌಡ ಆರೋಗ್ಯ ಸಚಿವ ಡಾ| ಕೆ.ಸುಧಾಕರ್ ಅವರನ್ನು ಪ್ರಶ್ನಿಸಿದರು.
ಪ್ರಶ್ನೋತ್ತರ ವೇಳೆ ವಿಷಯ ಪ್ರಸ್ತಾಪಿಸಿದ ಅವರು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅದರಲ್ಲೂ ವಿಶೇಷ ವಾಗಿ ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರ ಕೊರತೆ ಕಾಡುತ್ತಿದೆ. ಹೀಗಿರುವಾಗ “ನಮ್ಮ ಕ್ಲಿನಿಕ್’ಗೆ ವೈದ್ಯರನ್ನು ಎಲ್ಲಿಂದ ತರುತ್ತೀರಿ ಹಾಗೂ ಯಾವಾಗ ಯಾವ್ಯಾವ ಜಿಲ್ಲೆಗಳಲ್ಲಿ ಕ್ಲಿನಿಕ್ ಆರಂಭಿಸುತ್ತೀರಿ ಎಂದು ಕೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಸುಧಾಕರ್, ಒಂದೂವರೆ ವರ್ಷದಲ್ಲಿ 2 ಸಾವಿರ ವೈದ್ಯರನ್ನು ನೇಮಿಸಿಕೊಳ್ಳ ಲಾಗಿದೆ. ನಮ್ಮ ಕ್ಲಿನಿಕ್‌ಗಳಿಗೆ 4 ಸಾವಿರ ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲಾಗುತ್ತಿದೆ ಎಂದರು.
ಜನಸಂಖ್ಯೆಗೆ ಅನುಗುಣವಾಗಿ ಪಿಎಚ್‌ಸಿಗಳನ್ನು ಸ್ಥಾಪಿಸಲಾಗುತ್ತದೆ. ಅದರಂತೆ ಪ್ರಸ್ತುತ 107 ಪಿಎಚ್‌ಸಿಗಳು ಕಡಿಮೆ ಇವೆ. ಒಟ್ಟಾರೆ 438 ನಮ್ಮ ಕ್ಲಿನಿಕ್‌ಗಳ ಸ್ಥಾಪನೆ ಗುರಿ ಇದ್ದು, ಇಲ್ಲಿ 12 ವಿವಿಧ ರೀತಿಯ ಆರೋಗ್ಯ ಸೇವೆ ಕಲ್ಪಿಸಲಾಗುತ್ತದೆ. ಅಕ್ಟೋಬರ್ ವೇಳೆಗೆ ಎಲ್ಲ 438 ಕ್ಲಿನಿಕ್‌ಗಳು ಕಾರ್ಯಾರಂಭಗೊಳ್ಳಲಿವೆ ಎಂದರು.
ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಕ್ರಮ
2006ರಿಂದ 2020ರಲ್ಲಿ ರಾಜ್ಯದ ವಿವಿಧ ಸ್ವಾಯತ್ತ ವೈದ್ಯಕೀಯ ಸಂಸ್ಥೆಗಳಲ್ಲಿ ನೇಮಕಗೊಂಡ ಹಾಗೂ ನಿವೃತ್ತರಾದ ಬೋಧಕ- ಬೋಧ ಕೇತರ ಸಿಬಂದಿಗೆ ಜೀವನ ನಿರ್ವಹಣೆಗೆ ಅನುಕೂಲ ಆಗುವ ನಿಟ್ಟಿನಲ್ಲಿ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ| ಸುಧಾಕರ್ ಭರವಸೆ ನೀಡಿದರು.
ವಿಷಯ ಪ್ರಸ್ತಾಪಿಸಿದ ಬಿಜೆಪಿಯ ಆಯನೂರು ಮಂಜುನಾಥ್, ಉದ್ದೇಶಿತ ಅವಧಿಯಲ್ಲಿ ನೇಮಕಗೊಂಡ ಮತ್ತು ನಿವೃತ್ತರಾಗುವ ಸಿಬಂದಿ ಹತ್ತಾರು ವರ್ಷ ಸೇವೆ ಸಲ್ಲಿಸಿ ಬರಿಗೈಯಲ್ಲಿ ಮನೆಗೆ ಹೋಗುವಂತಾಗಿದೆ. ಕೊನೆಪಕ್ಷ ಜೀವನ ನಿರ್ವಹಣೆಗಾದರೂ ಸೌಲಭ್ಯ ಕಲ್ಪಿಸಬೇಕು ಎಂದರು. ಈ ಬಗ್ಗೆ ಆರ್ಥಿಕ ಇಲಾಖೆ ಜತೆ ಚರ್ಚಿಸಲಾಗುವುದು ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.