ಶಿಕ್ಷಣ ನೀತಿಯಿಂದ ತಾಂತ್ರಿಕ ಶಿಕ್ಷಣದ ದಿಕ್ಕು ಬದಲು: ಡಿಸಿಎಂ ಅಶ್ವತ್ಥನಾರಾಯಣ
Team Udayavani, Aug 19, 2020, 3:31 PM IST
ಬೆಂಗಳೂರು: ಕೇಂದ್ರ ಸರಕಾರ ಜಾರಿಗೆ ತರುತ್ತಿರುವ ಹೊಸ ಶಿಕ್ಷಣ ನೀತಿಯಿಂದ ತಾಂತ್ರಿಕ ಶಿಕ್ಷಣಕ್ಕೆ ಹೆಚ್ಚು ಅನುಕೂಲವಾಗಲಿದೆ ಎಂದು ಹೇಳಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಭವಿಷ್ಯದಲ್ಲಿ ಎಂಜಿನಿಯರಿಂಗ್ ಕಾಲೇಜುಗಳು ಜಾಗತಿಕ ಗುಣಮಟ್ಟ ಸಾಧಿಸಲಿವೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ, ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಹಮ್ಮಿಕೊಂಡಿದ್ದ ʼಆವಿಷ್ಕಾರ್-2020ʼ ಕಾರ್ಯಕ್ರಮವನ್ನು ಆನ್‌ಲೈನ್ ಮೂಲಕವೇ ಉದ್ದೇಶಿಸಿ ಮಾತನಾಡಿದ ಅವರು, ಉನ್ನತ ಶಿಕ್ಷಣದ ದಿಕ್ಕನ್ನು ಶಿಕ್ಷಣ ನೀತಿ ಬದಲಿಸಲಿದೆ. ಆರ್ಥಿಕವಾಗಿ ದುರ್ಬಲವಾಗಿರುವ ಕಾಲೇಜುಗಳ ಪುನಶ್ಚೇತನಕ್ಕೂ ಇದರಿಂದ ಅನುಕೂಲವಾಗಲಿದೆ. ಸಂಶೋಧನೆ ಮತ್ತು ಗುಣಮಟ್ಟದ ಬೋಧನೆಯ ದಿಕ್ಕಿನಲ್ಲಿ ಮುಂದಿನ ದಿನಗಳಲ್ಲಿ ಗಮನಾರ್ಹ ಬದಲಾವಣೆಗಳು ಗೋಚರವಾಗಲಿವೆ ಎಂದು ಹೇಳಿದರು.
ಕೇಂದ್ರ ಸರಕಾರದ ನೆರವಿನೊಂದಿಗೆ ನಡೆಯುತ್ತಿರುವ ತಾಂತ್ರಿಕ ಶಿಕ್ಷಣದ ಗುಣಮಟ್ಟ ಸುಧಾರಣೆ ಕಾರ್ಯಕ್ರಮದ ಅಡಿಯಲ್ಲಿ ಅವಿಷ್ಕಾರ್ ಪ್ರದರ್ಶನ ನಡೆಯುತ್ತಿದೆ. ವಿದ್ಯಾರ್ಥಿಗಳು ರೂಪಿಸುತ್ತಿರುವ ಹೊಸ ರೀತಿಯ, ಸೃಜನಶೀಲವಾದ ಪ್ರಾಜೆಕ್ಟ್ ಗಳು ಪ್ರೋತ್ಸಾಹ ಮತ್ತು ಧನ ಸಹಾಯ ನೀಡುತ್ತಿರುವುದು ಉತ್ತಮ ಕೆಲಸವಾಗಿದೆ ಎಂದು ಉಪ ಮುಖ್ಯಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು.
134 ಪ್ರಾಜೆಕ್ಟ್:
ಒಟ್ಟು 134 ಪ್ರಾಜೆಕ್ಟ್ ಗಳನ್ನು ಪಟ್ಟಿ ಮಾಡಲಾಗಿತ್ತು. ಇದರಲ್ಲಿ ಮಹಿಳಾ ಸುರಕ್ಷತೆ, ಸ್ವಚ್ಛ ಭಾರತ, ಸ್ವಸ್ಥ್ಯ ಭಾರತ್, ಡಿಜಿಟಲ್ ಇಂಡಿಯಾ, ಗ್ರೀನ್ ಎನರ್ಜಿ, ಪರಿಸರ ರಕ್ಷಣೆ, ಕೃಷಿ ಸಲಕರಣೆಗಳು ಸೇರಿದಂತೆ ಹತ್ತು ಹಲವು ಆವಿಷ್ಕಾರಗಳ ಬಗ್ಗೆ ವಿದ್ಯಾರ್ಥಿಗಳು ಪ್ರಾಜೆಕ್ಟ್ ಮಂಡಿಸಿದ್ದು, ಇವುಗಳಲ್ಲಿ ವಿಜೇತರಾಗುವ ಪ್ರಾಜೆಕ್ಟ್ ಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ಕ್ರಮವಾಗಿ 25, 20, 15 ಸಾವಿರ ರೂಪಾಯಿ ನಗದು ನೀಡಲಾಯಿತು.
ಕಾರ್ಯಕ್ರಮದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕರಿಸಿದ್ದಪ್ಪ, ರಿಜಿಸ್ಟ್ರಾರ್ ಪ್ರೊ. ಎಸ್. ಅಣ್ಣಗೇರಿ, ವಿವಿಯ ತಾಂತ್ರಿಕ ಶಿಕ್ಷಣದ ಗುಣಮಟ್ಟ ಸುಧಾರಣೆ ಕಾರ್ಯಕ್ರಮದ ಸಂಚಾಲಕ ಡಾ. ಎಸ್.ಎಲ್. ದೇಶಪಾಂಡೆ, ವಿವಿಯ ತಾಂತ್ರಿಕ ಶಿಕ್ಷಣದ ಗುಣಮಟ್ಟ ಸುಧಾರಣೆ ಕಾರ್ಯಕ್ರಮ ಸೆಲ್‌ನ ಸದಸ್ಯ ಪ್ರೊ. ಎನ್.ಸಿ. ಶಿವಪ್ರಕಾಶ್ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.