ಸರಕಾರಿ ಗೌರವದೊಂದಿಗೆ ಮಾಜಿ ಸಚಿವ ವಿ. ಧನಂಜಯ ಕುಮಾರ್ ಅಂತ್ಯ ಸಂಸ್ಕಾರ
Team Udayavani, Mar 5, 2019, 10:13 AM IST
ವೇಣೂರು: ಹಿರಿಯ ರಾಜಕಾರಣಿ, ಕೇಂದ್ರದ ಮಾಜಿ ಸಚಿವ ವಿ. ಧನಂಜಯ ಕುಮಾರ್ ಅವರು ಮಾ.4 ರಂದು ನಿಧನ ಹೊಂದಿದ್ದು, ಮಂಗಳವಾರ ಹುಟ್ಟೂರಾದ ಬೆಳ್ತಂಗಡಿ ತಾಲೂಕಿನ ವೇಣೂರು ಮನೆಯಲ್ಲಿ ಸಕಲ ಸರಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ ನೆರವೇರಿತು.
ಪೂರ್ವಾಹ್ನ 11.50ಕ್ಕೆ ಅವರ ಪಾರ್ಥಿವ ಶರೀರ ವೇಣೂರು ತಲುಪಿತು. ನಗರದಲ್ಲಿ ಮೆರವಣಿಗೆ ಮೂಲಕ ಶ್ರೀ ಪಾರ್ಶ್ವನಾಥ ಬಸದಿಯಲ್ಲಿ ಪೂಜೆ ಸಲ್ಲಿಸಿ, ಬಳಿಕ 12.25ಕ್ಕೆ ಪಂಜಾಲುಬೈಲು ಮನೆಗೆ ತರಲಾಯಿತು. ಅಂಬ್ಯುಲೆನ್ಸ್‌ನಿಂದ ಪಾರ್ಥಿವ ಶರೀರವನ್ನು ತೆಗೆಯುತ್ತಿದ್ದಂತೆ ಮನೆಮಂದಿ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಜೈನ ಸಮುದಾಯದ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನಡೆಯಿತು.
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ದ.ಕ. ಜಿಲ್ಲಾಧಿಕಾರಿ ಡಾ| ಶಶಿಕಾಂತ್ ಶೆಂಥಿಲ್, ಮಾಜಿ ಸಚಿವ ಬಿ. ರಮಾನಾಥ ರೈ, ಕೆ. ಅಭಯಚಂದ್ರ ಜೈನ್, ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ, ದ.ಕ. ಪೊಲೀಸ್ ಅಧೀಕ್ಷಕ ಬಿ.ಎಂ. ಲಕ್ಷ್ಮೀ ಪ್ರಸಾದ್, ಸಹಾಯಕ ಅಧೀಕ್ಷಕ ಸೈದುಲ್ಲಾ ಅಧಾವತ್, ಪುತ್ತೂರು ಸಹಾಯಕ ಕಮಿಷನರ್ ಡಾ| ಎಚ್.ಸಿ. ಕೃಷ್ಣಮೂರ್ತಿ, ಆಳ್ವಾಸ್ ಶಿಕ್ಷಣ ಸಂಸ್ಥೆಯ ಡಾ.ಮೋಹನ್ ಆಳ್ವ, ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹಷೇಂದ್ರ ಕುಮಾರ್, ಡಾ| ಯಶೋವರ್ಮ, ಕ್ಯಾ| ಗಣೇಶ್ ಕಾರ್ಣಿಕ್, ಬೆಳ್ತಂಗಡಿ ತಹಶೀಲ್ದಾರ್ ಗಣಪತಿ ಶಾಸ್ತ್ರಿ, ಬೆಳ್ತಂಗಡಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ, ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ವೇಣೂರು ಪೊಲೀಸ್ ಉಪನಿರೀಕ್ಷಕ ನಾಗರಾಜ್ ಎಸ್.ಇ, ವೇಣೂರು ಕಂದಾಯ ನಿರೀಕ್ಷಕ ಪಾವಡಪ್ಪ ದೊಡ್ಡಮಣಿ, ಪ್ರತಾಪ್‌ಸಿಂಹ ನಾಯಕ್, ಜಿ.ಪಂ. ಸದಸ್ಯ ಪಿ. ಧರಣೇಂದ್ರ ಕುಮಾರ್, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಊರ ನಾಗರಿಕರು ಮನೆಗೆ ಆಗಮಿಸಿ ಅಂತಿಮ ದರ್ಶನ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.