ಸರ್ಕಾರಿ ಗೌರವದೊಂದಿಗೆ ಯೋಧನ ಅಂತ್ಯಕ್ರಿಯೆ
Team Udayavani, Jan 18, 2019, 1:25 AM IST
ಚಿಕ್ಕೋಡಿ: ಕಳೆದ ಎರಡು ದಿನದ ಹಿಂದೆ ಸಿಕ್ಕಿಂನ ಘನಟೋರನಲ್ಲಿ ಗುಡ್ಡ ಕುಸಿದು ಮೃತಪಟ್ಟ ವೀರಯೋಧನ ಅಂತ್ಯಕ್ರಿಯೆ ಆಡಿ ಗ್ರಾಮದಲ್ಲಿ ನೆರವೇರಿತು. ನಿಪ್ಪಾಣಿ ತಾಲೂಕಿನ ಆಡಿ ಗ್ರಾಮದ ರೋಹಿತ ಸುನೀಲ ದೇವರಡೆ(25) ಜ.14ರಂದು ಸಿಕ್ಕಿಂನ ಘನಟೋರನಲ್ಲಿ ಕರ್ತವ್ಯದಲ್ಲಿದ್ದಾಗ ಗುಡ್ಡ
ಕುಸಿದು ಮೃತಪಟ್ಟಿದ್ದರು. ಯೋಧನ ಪಾರ್ಥಿವ ಶರೀರ ಪುಣೆ ಮಾರ್ಗವಾಗಿ ಗುರುವಾರ ಬೆಳಗ್ಗೆ
ಸ್ವಗ್ರಾಮಕ್ಕೆ ಆಗಮಿಸಿತು. ನಂತರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆದಿದೆ.
ಪಾರ್ಥಿವ ಶರೀರ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಶಾಲಾ ಮಕ್ಕಳು ಜೈಕಾರ ಹಾಕಿ ಶ್ರದ್ಧಾಂಜಲಿ ಸಲ್ಲಿಸಿದರು. ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಿದ ನಂತರ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಪೊಲೀಸರು ವೀರಯೋಧನಿಗೆ ಅಂತಿಮ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿ ಕಾರಿ ರವೀಂದ್ರ ಕರಲಿಂಗನ್ನವರ, ತಹಶೀಲ್ದಾರ ಎಂ.ಎಸ್.ಬಣಸಿ, ಮಾಜಿ ಸಚಿವ ವೀರಕುಮಾರ ಪಾಟೀಲ, ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ಸೇರಿದಂತೆ ಅಪಾರ ಜನಸ್ತೋಮದ ಮಧ್ಯೆ ಅಂತ್ಯಕ್ರಿಯೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?
Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ
CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ
MUST WATCH
ಹೊಸ ಸೇರ್ಪಡೆ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.