Channagiri ಠಾಣೆ ಧ್ವಂಸ, ಆದಿಲ್ ಸಾವಿನ ಪ್ರಕರಣಗಳ ಹೆಚ್ಚಿನ ತನಿಖೆ: ಡಾ| ಜಿ. ಪರಮೇಶ್ವರ್
ಕಲ್ಲು ತೂರಾಟ ನಡೆದ ಸಂದರ್ಭದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿಲ್ಲ
Team Udayavani, May 30, 2024, 9:26 PM IST
ದಾವಣಗೆರೆ: ಚನ್ನಗಿರಿ ಪೊಲೀಸ್ ಠಾಣೆ ಧ್ವಂಸ ಹಾಗೂ ಆದಿಲ್ ಸಾವಿನ ಕುರಿತಾದ ಎರಡು ಪ್ರಕರಣಗಳನ್ನು ಹೆಚ್ಚಿನ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ತಿಳಿಸಿದರು.
ಗುರುವಾರ ಸಂಜೆ ಚನ್ನಗಿರಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿ, ಚನ್ನಗಿರಿಯಲ್ಲಿ ಕಳೆದ ಶುಕ್ರವಾರ ನಡೆದಂತಹ ಘಟನೆಯ ಬಗ್ಗೆ ಮಾಹಿತಿ ಪಡೆಯಲು ಬಂದಿರುವುದಾಗಿ ತಿಳಿಸಿದರು.
ಪೊಲೀಸ್ ಠಾಣೆಗೆ ನುಗ್ಗಿ ಧ್ವಂಸ ಮಾಡಿರುವ ಒಂದು ಪ್ರಕರಣವಾದರೆ, ಮಟ್ಕಾ ಆಡುಸುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ ಪ್ರಕರಣ ಕೂಡ ಒಂದಾಗಿದೆ. ಈ ಎರಡೂ ಪ್ರಕರಣಗಳನ್ನು ಹೆಚ್ಚಿನ ತನಿಖೆಗೆ ವಹಿಸಲಾಗಿದೆ. ತನಿಖೆಯ ವರದಿ ಎಫ್ ಎಸ್‌ಎಲ್ ವರದಿ ಬಂದಾಗ ಸತ್ಯಾಂಶ ಗೊತ್ತಾಗಲಿದೆ. ಆ ನಂತರ ಏನು ಕ್ರಮ ತೆಗೆದುಕೊಳ್ಳಬೇಕು ಎಂಬುದು ಗೊತ್ತಾ ಗಲಿದೆ ಎಂದರು.
ಚನ್ನಗಿರಿ ಪ್ರಕರಣಕ್ಕೆ ಮೇಲ್ನೋಟಕ್ಕೆ ಏನು ಕಾಣಿಸಿದಾಗ ನಾವು ಕ್ರಮ ಕೈಗೊಳ್ಳಲಾಗಿದೆ. ತನಿಖೆಯ ನಂತರ ಅಮಾನತು ಗೊಂಡಿರುವಂತಹ ಅಧಿಕಾರಿಗಳ ತಪ್ಪು ಇಲ್ಲ ಎಂಬುದು ಸಾಬೀತಾದಾಗ ಮತ್ತೆ ಅವರನ್ನ ಸೇವೆಗೆ ಕರೆದುಕೊಳ್ಳುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಚನ್ನಗಿರಿಯ ಪೊಲೀಸ್ ಠಾಣೆಯ ಮೇಲೆಯೇ ಕಲ್ಲು ತೂರಾಟ ಯಾವ ಕಾರಣಕ್ಕೆ ನಡೆದಿದೆ ಎಂಬ ಪ್ರಶ್ನೆಗೆ, ‘ಕಲ್ಲು ತೂರಿದವರನ್ನು ನೀವೇ(ಮಾಧ್ಯಮದವರೇ) ಕೇಳಬೇಕು’ ಎಂದರು.
ಕಲ್ಲು ತೂರಾಟ ಮಾಡಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ವಿಡಿಯೋದಲ್ಲಿ ಸೆರೆಯಾದವರನ್ನು ಕರೆತಂದು ವಿಚಾರಣೆ ನಡೆಸಿ ಶಿಕ್ಷೆ ಕೊಡುಸುತ್ತೇವೆ ಎಂದರು.
ರಾಜ್ಯದಲ್ಲಿ ಪೊಲೀಸರ ನೇಮಕಾತಿ ಆಗಿಲ್ಲ. ಹಾಗಾಗಿ ಎಲ್ಲ ಕಡೆ ಸಿಬ್ಬಂದಿ ಗಳ ಕೊರತೆ ಇದೆ.ಈಗ ನೇಮಕಾತಿ ಪ್ರಾರಭವಾಗಿದೆ. ಮುಂದೆ ಎಲ್ಲವೂ ಸರಿಯಾಗಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆದ ಸಂದರ್ಭದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿಲ್ಲ. ಏನಾ ದರೂ ಕೂಗಿದ್ದರೆ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಕೂಗದೇ ಇದ್ದರೂ ಕೂಗಿದ್ದಾರೆ ಎಂದು ಪ್ರಚಾರ ಮಾಡುವವ ರ ಮೇಲೆಯೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ಚನ್ನಗಿರಿಯಲ್ಲಿ ಮತ್ತೊಂದು ಪೊಲೀಸ್ ಠಾಣೆ ಪ್ರಾರಂಭಿಸುವ ಪ್ರಕ್ರಿಯೆ ನಡೆದಿದೆ. ಹೊಸ ಠಾಣೆಗೆ ಜಿಲ್ಲಾ ಉಸ್ತುವಾರಿ ಸಚಿವರ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.