ಜಿ.ಪಂ-ತಾ.ಪಂ ಮೀಸಲು: ಮತ್ತೆ ಕಾಲಾವಕಾಶ ಕೇಳಿದ ಸರ್ಕಾರ

ಡಿಸೆಂಬರ್‌ 12ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

Team Udayavani, Nov 27, 2024, 10:38 PM IST

bengaluru

ಬೆಂಗಳೂರು: ರಾಜ್ಯದಲ್ಲಿ ಜಿ.ಪಂ ಹಾಗೂ ತಾ.ಪಂ.ಗಳಿಗೆ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆ ಅಂತಿಮಗೊಳಿಸಲು ರಾಜ್ಯ ಸರ್ಕಾರವು ಹೈಕೋರ್ಟ್‌ ಬಳಿ ಬುಧವಾರ ಮತ್ತೆ 4 ವಾರ ಕಾಲಾವಕಾಶ ಕೇಳಿದೆ. ಕಳೆದೊಂದು ವರ್ಷದಿಂದ ರಾಜ್ಯ ಸರ್ಕಾರ ಮೇಲಿಂದ ಮೇಲೆ ಕಾಲಾವಕಾಶವನ್ನು ಕೇಳುತ್ತಿದೆ.

ಜಿ.ಪಂ. ತಾ.ಪಂ.ಗಳಿಗೆ ಮೀಸಲಾತಿ ಅಂತಿಮಗೊಳಿಸಲು 4 ವಾರ ಕಾಲಾವಕಾಶಬೇಕು. ಕನಿಷ್ಠ ಜನವರಿ ಮೊದಲ ವಾರದವರೆಗೆ ಸಮಯ ಬೇಕು. ಕೊಡಗು ಜಿಲ್ಲೆಯ ಕ್ಷೇತ್ರ ಪುನರ್‌ವಿಂಗಡಣೆ ವಿಳಂಬವಾಗಿದ್ದರಿಂದ ಎಲ್ಲ ಜಿಲ್ಲೆಗಳ ಮೀಸಲಾತಿ ನಿಗದಿಗೆ ತಡವಾಗಿದೆ. ಮೀಸಲಾತಿ ಸಿದ್ಧಪಡಿಸಿ ಸರ್ಕಾರಕ್ಕೆ ರವಾನಿಸಲಾಗಿದೆ. ಶೀಘ್ರದಲ್ಲೇ ಕರಡು ಮೀಸಲಾತಿ ಹೊರಡಿಸಿ, ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನಿಸಲಾಗುವುದು. ಬಳಿಕ ಮೀಸಲಾತಿ ಪಟ್ಟಿಯನ್ನು ಮುಂದಿನ ಕ್ರಮಕ್ಕಾಗಿ ರಾಜ್ಯ ಚುನಾವಣಾ ಆಯೋಗಕ್ಕೆ ಕಳಿಸಿಕೊಡಲಾಗುವುದು ಎಂದು ನ್ಯಾಯಪೀಠದ ಮುಂದೆ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಪ್ರತಿಮಾ ಹೊನ್ನಾಪುರ ಮನವಿ ಮಾಡಿದರು.

ಆಗ ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್‌. ಫ‌ಣೀಂದ್ರ, ಕಳೆದೊಂದು ವರ್ಷದಿಂದ ಮುಂದೂಡುತ್ತಲೇ ಬರುತ್ತಿದ್ದು, ಇದಕ್ಕಾದರೂ ಬದ್ಧವಾಗಿರುವಂತೆ ಸರ್ಕಾರದ ಹೇಳಿಕೆಯನ್ನು ನ್ಯಾಯಾಲಯ ದಾಖಲಿಸಿಕೊಳ್ಳುವಂತೆ ಮನವಿ ಮಾಡಿದರು. ವಾದ ಆಲಿಸಿದ ನ್ಯಾಯಪೀಠವು, ವಿಚಾರಣೆಯನ್ನು ಡಿಸೆಂಬರ್‌ 12ಕ್ಕೆ ಮುಂದೂಡಿ, ಕಾಲಾವಕಾಶ ನೀಡುವ ಬಗ್ಗೆ ಮುಂದಿನ ವಿಚಾರಣೆಯ ದಿನದಂದು ನಿರ್ಧರಿಸಲಾಗುವುದು ಎಂದು ಹೇಳಿತು.

ವರ್ಷದಿಂದ ಸಮಯ ಕೇಳುತ್ತಿರುವ ಸರ್ಕಾರ:
ರಾಜ್ಯದ ಎಲ್ಲ ಜಿ.ಪಂ. ಹಾಗೂ ತಾ.ಪಂ.ಗಳಿಗೆ 12 ವಾರಗಳಲ್ಲಿ ಮೀಸಲಾತಿಯನ್ನು ಅಂತಿಮಗೊಳಿಸಲಾಗುವುದು ಎಂದು 2023 ಡಿಸೆಂಬರ್‌ 19ಕ್ಕೆ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಲಿಖೀತ ಭರವಸೆ ಕೊಟ್ಟಿತ್ತು. ನ್ಯಾಯಾಲಯಕ್ಕೆ ಕೊಟ್ಟ ಭರವಸೆಯಂತೆ ಸರ್ಕಾರ ನಡೆದುಕೊಂಡಿಲ್ಲ ಎಂದು ಆರೋಪಿಸಿ ಸ್ವತಃ ರಾಜ್ಯ ಚುನಾವಣಾ ಆಯೋಗ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ದಾವೆ ಹೂಡಿಯೂ ಬುಧವಾರಕ್ಕೆ (ನ.27) 6 ತಿಂಗಳಾಯಿತು. ಅದಾಗ್ಯೂ ರಾಜ್ಯ ಸರ್ಕಾರ ಮೀಸಲಾತಿಯನ್ನು ಅಂತಿಮಗೊಳಿಸಿಲ್ಲ. ಬದಲಿಗೆ ಮತ್ತೆ ಕಾಲಾವಕಾಶ ಕೇಳಿದೆ.

ನ್ಯಾಯಾಲಯಕ್ಕೆ ನೀಡಿದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿ.ಪಂ. ತಾ.ಪಂ. ಕ್ಷೇತ್ರ ಪುನರ್‌ವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸಲು ವಿಫ‌ಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ಜೊತೆಗೆ, ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟಿಸಲು ಏಕಸದಸ್ಯ ನ್ಯಾಯಪೀಠ ಆದೇಶ ಪಾಲಿಸುವಲ್ಲಿ ಸರ್ಕಾರ ವಿಫ‌ಲವಾಗಿದೆ ಎಂದು 2023ರಲ್ಲಿ ಸಲ್ಲಿಸಲಾದ ಎರಡು ಪ್ರತ್ಯೇಕ ನ್ಯಾಯಾಂಗ ನಿಂದನೆ ಅರ್ಜಿಗಳು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಹಾಗೂ ನ್ಯಾ. ಕೆ.ವಿ. ಅರವಿಂದ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ನಿಗದಿಯಾಗಿದ್ದವು.

ಟಾಪ್ ನ್ಯೂಸ್

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Hubli; Pig farmer assault case; Four arrested including sister’s husband

Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕ್ಮಸಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

Hubli; Pig farmer assault case; Four arrested including sister’s husband

Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ

7-munirathna

Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು

Bengaluru; Cab driver fell asleep: Passenger drove the vehicle!

Bengaluru; ನಿದ್ರೆಗೆ ಜಾರಿದ ಕ್ಯಾಬ್‌ ಡ್ರೈವರ್‌: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video

ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್‌ ಮ್ಯಾನೇಜರ್!

Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್‌ ಮ್ಯಾನೇಜರ್!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6

Karkala: ಲೈಸೆನ್ಸ್‌ ಇಲ್ಲದ ವ್ಯಾಪಾರಕ್ಕೆ ಕಡಿವಾಣ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

5

Kundapura: ಜಿಲ್ಲೆಯ ರೈತರಿಗೆ ಭಾರೀ ಆಸಕ್ತಿ!

18-liver-cancer

Liver cancer: ಯಕೃತ್ತಿನ ಕ್ಯಾನ್ಸರ್‌

4

Mulki: ವಾಹನ ನಿಲುಗಡೆ ನಿಷೇದವಿದ್ದರೂ ಪಾರ್ಕಿಂಗ್‌; ಸುಗಮ ಸಂಚಾರಕ್ಕೆ ಅಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.