ಈ ವರ್ಷವೂ ಗ್ರಾಮ ಪಂಚಾಯತ್‌ಗಳಿಗೆ ಗಾಂಧಿ ಪುರಸ್ಕಾರ ಕನಸು?

ಕೊರೊನಾ ಕಾರಣದಿಂದ 2 ವರ್ಷಗಳಿಂದ ಪ್ರಶಸ್ತಿ ಬಾಕಿ

Team Udayavani, Sep 12, 2022, 7:33 AM IST

ಈ ವರ್ಷವೂ ಗ್ರಾಮ ಪಂಚಾಯತ್‌ಗಳಿಗೆ ಗಾಂಧಿ ಪುರಸ್ಕಾರ ಕನಸು?

ಬೆಂಗಳೂರು: ಎರಡು ವರ್ಷಗಳಿಂದ ಗ್ರಾಮ ಪಂಚಾಯತ್‌ಗಳಿಗೆ “ಗಾಂಧಿ ಗ್ರಾಮ ಪುರಸ್ಕಾರ’ ಸಿಕ್ಕಿಲ್ಲ. ಈ ವರ್ಷವೂ ಸಿಗುವುದು ಅನುಮಾನ!

ಗ್ರಾ.ಪಂ.ಗಳ ಆರ್ಥಿಕ ಮತ್ತು ಆಡಳಿತಾತ್ಮಕ ಸಾಧನೆಯನ್ನು ಆಧರಿಸಿ ಅವುಗಳಿಗೆ ಹೆಚ್ಚಿನ ಉತ್ತೇಜನ ನೀಡಲು ಪ್ರತೀ ತಾಲೂಕಿನ ಒಂದು ಗ್ರಾ.ಪಂ.ಗೆ ಮಹಾತ್ಮಾ ಗಾಂಧೀಜಿ ಜಯಂತಿ ಯಾದ ಅ. 2ರಂದು ಗಾಂಧಿ ಗ್ರಾಮ ಪುರಸ್ಕಾರ ನೀಡಲಾಗುತ್ತದೆ. ಆದರೆ 2019-20 ಮತ್ತು 2020-21 ಸಾಲಿನಲ್ಲಿ ಗ್ರಾ.ಪಂ.ಗಳನ್ನು ಆಯ್ಕೆ ಮಾಡಿದ್ದರೂ ಕೊರೊನಾ ಕಾರಣದಿಂದ ಪುರಸ್ಕಾರ ನೀಡಲಾಗಿರಲಿಲ್ಲ. ಈ ವರ್ಷ ಗ್ರಾ.ಪಂ.ಗಳ ಆಯ್ಕೆ ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ. ಗಾಂಧಿ ಜಯಂತಿಗೆ 21 ದಿನಗಳಷ್ಟೇ ಬಾಕಿ ಇದೆ.

ಆರ್ಥಿಕ ಮತ್ತು ಆಡಳಿತ ಮಾನದಂಡಗಳ ಆಧಾರದ ಮೇಲೆ ಗ್ರಾ.ಪಂ.ಗಳ ಶೇ. 90ರಿಂದ 95ರಷ್ಟು ಸಾಧನೆಯನ್ನು ಮೌಲ್ಯಮಾಪನ ಮಾಡಿ ಸೂಕ್ತ ಪ್ರೋತ್ಸಾಹ ನೀಡಲು 2013-14ರಲ್ಲಿ ಸರಕಾರ ಗಾಂಧಿ ಗ್ರಾಮ ಪುರಸ್ಕಾರವನ್ನು ಜಾರಿಗೆ ತಂದಿತ್ತು. ಪುರಸ್ಕಾರಕ್ಕೆ ಆಯ್ಕೆಯಾಗುವ ಗ್ರಾ.ಪಂ.ಗಳಿಗೆ 2 ಲಕ್ಷ ರೂ. ವಿಶೇಷ ಅನುದಾನ ನೀಡಲಾಗುತ್ತದೆ. ಯೋಜನೆ ಜಾರಿಗೆ ಬಂದ ಬಳಿಕ ನಿಯಮಿತವಾಗಿ ಪ್ರತೀ ವರ್ಷ ಪುರಸ್ಕಾರ ನೀಡಲಾಗಿತ್ತು. 2019-20ನೇ ಸಾಲಿನಿಂದ ನೀಡಲಾಗಿಲ್ಲ.

ಪಂಚಾಯತ್‌ಗಳಿಗೆ ಬೇಸರ
ಅಧಿಕಾರ ವಿಕೇಂದ್ರೀಕರಣದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಗ್ರಾ.ಪಂ.ಗಳು 24ಕ್ಕೂ ಹೆಚ್ಚು ಇಲಾಖೆಗಳ 29 ಅಭಿವೃದ್ಧಿ ವಿಷಯಗಳ ಅನುಷ್ಠಾನ ಮತ್ತು ನಿರ್ವಹಣೆ ಮಾಡುತ್ತವೆ. ಜತೆಗೆ ಮೂಲಸೌಕರ್ಯಗಳಾದ ಕುಡಿಯುವ ನೀರು, ನೈರ್ಮಲ್ಯ, ಬೀದಿ ದೀಪಗಳ ನಿರ್ವಹಣೆ, ಪೌರ ಸೇವೆಗಳ ಜವಾಬ್ದಾರಿ ಅವುಗಳ ಮೇಲಿದೆ. ಪಂಚಾಯತ್‌ಗಳಿಗೆ ಹೆಚ್ಚು ಪ್ರೋತ್ಸಾಹ, ನೆರವು ಸಿಕ್ಕಿದರೆ ಇನ್ನಷ್ಟು ಚೆನ್ನಾಗಿ ಕೆಲಸ ಮಾಡಲು ಪ್ರೇರಣೆ ಸಿಗುತ್ತದೆ. ಇದೇ ಉದ್ದೇಶಕ್ಕಾಗಿ ಗಾಂಧಿ ಗ್ರಾಮ ಪುರಸ್ಕಾರ ಯೋಜನೆಯನ್ನು ಜಾರಿಗೆ ತರಲಾಗಿದೆ. ಪುರಸ್ಕಾರಕ್ಕೆ ಆಯ್ಕೆಯಾದ ಪಂಚಾಯತ್‌ಗಳಿಂದ ಬೇರೆ ಪಂಚಾಯತ್‌ಗಳಿಗೆ ಪ್ರೇರಣೆ ಸಿಗಲಿದೆ. ಆದರೆ ಎರಡು ವರ್ಷಗಳ ಪುರಸ್ಕಾರ ಸಿಕ್ಕಿಲ್ಲ. ಈ ವರ್ಷ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪಂಚಾಯತ್‌ಗಳು ಬೇಸರ ವ್ಯಕ್ತಪಡಿಸಿವೆ.

ಮುಖ್ಯಮಂತ್ರಿಗೆ ಮನವಿ
ಸ್ಥಳೀಯ ಸರಕಾರಗಳಾದ ಗ್ರಾ.ಪಂ.ಗಳನ್ನು ಸದೃಢಗೊಳಿಸುವ ಹಾಗೂ ಉತ್ತಮ ಆಡಳಿತ ವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿದ್ದ ಗಾಂಧಿ ಗ್ರಾಮ ಪುರಸ್ಕಾರ ವಿತರಣೆಯನ್ನು ಸರಕಾರ ಮುಂದುವರಿಸ ಬೇಕು. ಈ ಹಿಂದೆ ಆಯ್ಕೆ ಮಾಡಿರುವ ಗ್ರಾ.ಪಂ.ಗಳಿಗೆ ಪುರಸ್ಕಾರಗಳನ್ನು ನೀಡಬೇಕು ಮತ್ತು ಪುರಸ್ಕಾರದ ಮೊತ್ತವನ್ನು 10 ಲಕ್ಷ ರೂ.ಗಳಿಗೆ ಹೆಚ್ಚಿಸಬೇಕು ಎಂದು ಕರ್ನಾಟಕ ರಾಜ್ಯ ಗ್ರಾ.ಪಂ. ಸದಸ್ಯರ ಮಹಾ ಒಕ್ಕೂಟ ಮುಖ್ಯ ಮಂತ್ರಿಯವರಿಗೆ ಮನವಿ ಸಲ್ಲಿಸಿದೆ.

ಎರಡು ವರ್ಷಗಳಿಂದ ಗಾಂಧಿ
ಗ್ರಾಮ ಪುರಸ್ಕಾರ ನೀಡಿಲ್ಲ. ಈ ವರ್ಷ ಇಲ್ಲಿಯ ವರೆಗೆ ಗ್ರಾ.ಪಂ.ಗಳ ಆಯ್ಕೆ ಪ್ರಕ್ರಿಯೆ ಆರಂಭಿಸಿಲ್ಲ. ಇದಕ್ಕೆ ಪಂಚಾಯತ್‌ಗಳಿಂದ ಬೇಸರ ವ್ಯಕ್ತವಾಗುತ್ತಿದೆ. ಆದ್ದರಿಂದ ಮುಖ್ಯ ಮಂತ್ರಿಯವರಿಗೆ ಮನವಿ ಸಲ್ಲಿಸಲಾಗಿದೆ.
-ಕಾಡಶೆಟ್ಟಿಹಳ್ಳಿ ಸತೀಶ್‌,
ಅಧ್ಯಕ್ಷ, ಕರ್ನಾಟಕ ರಾಜ್ಯ ಗ್ರಾ.ಪಂ. ಸದಸ್ಯರ
ಮಹಾ ಒಕ್ಕೂಟ

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.