ಹುಬ್ಬಳ್ಳಿ ಈದ್ಗಾದಲ್ಲಿ ಚೌತಿಗೆ ಅಸ್ತು; ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ
Team Udayavani, Aug 31, 2022, 7:10 AM IST
ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳು ವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ಹುಬ್ಬಳ್ಳಿ ಈದ್ಗಾ ಮೈದಾನದಲ್ಲೂ ಗಣೇ ಶೋತ್ಸವಕ್ಕೆ ಅವಕಾಶ ನೀಡದಂತೆ ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಹೀಗಾಗಿ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಮೊದಲ ಬಾರಿ ಗಣೇಶೋತ್ಸವ ಸಂಭ್ರಮ ಕಳೆಗಟ್ಟಲಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಈದ್ಗಾ ಮೈದಾನದಲ್ಲಿ 3 ದಿನಗಳ ಕಾಲ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಅಂಜುಮನ್ ಇಸ್ಲಾಂ ಹೈಕೋರ್ಟ್ ಮೊರೆ ಹೋಗಿತ್ತು. ತ್ವರಿತ ವಿಚಾರಣೆ ಹಿನ್ನೆಲೆಯಲ್ಲಿ ಮಂಗಳವಾರ ತಡ ರಾತ್ರಿಯ ವರೆಗೂ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರ ಏಕಸದಸ್ಯ ನ್ಯಾಯಪೀಠ ಮಹತ್ವದ ತೀರ್ಪು ನೀಡಿ ಆದೇಶಿಸಿದೆ. ಅಲ್ಲದೆ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದೆ.
ಅಂಜುಮನ್ ಇಸ್ಲಾಂ ಸಂಸ್ಥೆ ಪರ ವಾದ ಮಂಡಿಸಿದ ವಕೀಲರು, ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಇದೇ ಆದೇಶವನ್ನು ಹುಬ್ಬಳ್ಳಿ ಈದ್ಗಾ ಪ್ರಕರಣಕ್ಕೂ ಅನ್ವಯಿಸಬೇಕು. ಹುಬ್ಬಳ್ಳಿ ಈದ್ಗಾ ಮೈದಾನ ನಮ್ಮದೆಂದು ನಾವು ಹೇಳುತ್ತಿಲ್ಲ. ಈಗಿನ ಪರಿಸ್ಥಿತಿಯಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡಬಾರದು. ಪಾಲಿಕೆಯೇ ಮಾಲಕರಾದರೂ ಗಣೇಶೋತ್ಸವಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.
ಸರಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ಈ ಹಿಂದೆಯೇ ನ್ಯಾಯಾಲಯವು ಅಂಜುಮನ್ ಇಸ್ಲಾಂ ಸಂಸ್ಥೆ ವಿರುದ್ಧ ಆದೇಶ ನೀಡಿದೆ. ಯಾವುದೇ ಕಟ್ಟಡ ಕಟ್ಟದಂತೆ ನಿರ್ಬಂಧ ವಿಧಿಸಿದೆ. ಜಾತ್ರೆ ಮತ್ತು ಇನ್ನಿತರ ಉದ್ದೇಶಗಳಿಗೆ ಬಳಸಬಹುದೆಂದು ಸೂಚಿಸಿದೆ.
ಚಾಮರಾಜಪೇಟೆ ಮೈದಾನಕ್ಕೆ ಸಂಬಂಧಿಸಿದಂತೆ ಮಾಲಕತ್ವ ವಿವಾದವಿದೆ. ಆದರೆ ಹುಬ್ಬಳ್ಳಿ ಈದ್ಗಾ ಮೈದಾನದ ಮಾಲಕತ್ವ ವಿವಾದವಿಲ್ಲ. ಹೀಗಾಗಿ ಭೂಮಿಯನ್ನು ನಮಗೆ (ಪಾಲಿಕೆ) ಬೇಕಾದಂತೆ ಬಳಕೆ ಮಾಡಬಹುದು. ಇದಕ್ಕೆ ಹುಬ್ಬಳ್ಳಿ ಪಾಲಿಕೆಗೆ ಎಲ್ಲ ಅಧಿಕಾರವಿದೆ ಎಂದು ವಾದಿಸಿದರು.
ಚಾಮರಾಜಪೇಟೆ: ಯಥಾಸ್ಥಿತಿಗೆ ಸೂಚನೆ
ಹೊಸದಿಲ್ಲಿ: ಬೆಂಗಳೂರಿನ ಚಾಮರಾಜ ಪೇಟೆಯ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಮಂಗಳವಾರ ನ್ಯಾ| ಇಂದಿರಾ ಬ್ಯಾನರ್ಜಿ, ನ್ಯಾ| ಅಭಯ ಎಸ್. ಓಖಾ, ನ್ಯಾ| ಎಂ.ಎಂ. ಸುಂದರೇಶ್ ಅವರಿದ್ದ ನ್ಯಾಯಪೀಠ ಆದೇಶಿಸಿತು.
“200 ವರ್ಷಗಳಿಂದ ಮೈದಾನದಲ್ಲಿ ಇಂಥ ಯಾವುದೇ ಉತ್ಸವ ನಡೆದಿಲ್ಲ. ಹೀಗಾಗಿ ಯಾಕೆ ಯಥಾಸ್ಥಿತಿ ಕಾಯ್ದುಕೊಳ್ಳಬಾರದು?’ ಎಂದು ನ್ಯಾಯಪೀಠ ಪ್ರಶ್ನಿಸಿತು. ಗಣೇಶೋತ್ಸವವನ್ನು ಬೇರೆಡೆ ಆಯೋಜಿಸಬಹುದು ಎಂದು ನ್ಯಾಯಪೀಠ ಹೇಳಿತು.
ಈ ನಡುವೆ, ಸಮಿತಿ ಮುಖಂಡರು ಮೈದಾನದ ಪಕ್ಕದಲ್ಲೇ ಉತ್ಸವ ನಡೆಸು ವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.