ಸಾರಿಗೆ ನಿಗಮದ ನಿದ್ದೆಗೆಡಿಸಿದ ಗಾಂಜಾ ಸಾಗಣೆ! ಸದ್ಯದ ವ್ಯವಸ್ಥೆಯಲ್ಲಿ ಜಾಡು ಪತ್ತೆ ಅಸಾಧ್ಯ!
Team Udayavani, Aug 14, 2021, 12:31 PM IST
ಬೆಂಗಳೂರು: ಗಾಂಜಾ ಸಾಗಣೆಗೆ ಸರ್ಕಾರಿಬಸ್‌ಗಳನ್ನು ಸ್ವತಃ ಸಿಬ್ಬಂದಿ ಇಬ್ಬರು ಬಳಸಿಕೊಳ್ಳುತ್ತಿದ್ದ ಅಂಶ ಈಗ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಅಧಿಕಾರಿಗಳ ನಿದ್ದೆಗೆಡಿಸಿದ್ದು, ಬರುವ ದಿನಗಳಲ್ಲಿ ಇದರ ಜಾಡು ಪತ್ತೆ ಹಾಗೂ ಕಡಿವಾಣವೇ ದೊಡ್ಡ ಸವಾಲಾಗಿದೆ.
ಬಸ್‌ಗಳಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಕಿರಿಯ ಸಹಾಯಕ ವಿಠಲ್ ಭಜಂತ್ರಿ ಹಾಗೂ ಚಾಲಕ ಕಂ ನಿರ್ವಾಹಕ ಶರಣ ಬಸಪ್ಪ ಕ್ಷತ್ರೀಯ ಎಂಬುವರು ಲಗೇಜುಗಳ ರೂಪದಲ್ಲಿ ಗಾಂಜಾವನ್ನು ವಿಜಯಪುರ ಮತ್ತು ಕಲಬುರಗಿಯಿಂದ ಬೆಂಗಳೂರಿಗೆ ಸಾಗಣೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಹೀಗೆ ಬಸ್‌ಗಳಲ್ಲಿ ಮಾದಕ ವಸ್ತುಗಳ ಸಾಗಣೆ ಹಿಂದೆ ಇನ್ನೂ ಕೆಲವರ ಕೈವಾಡ ಇರುವ ಶಂಕೆಯೂ ವ್ಯಕ್ತವಾಗಿದೆ.
ಇದೇ ಮೊದಲ ಬಾರಿಗೆ ಬೆಳಕಿಗೆ ಬಂದ ಈ ಬೆಳವಣಿಗೆಯು ಬಸ್‌ಗಳಲ್ಲಿನ ಸರಕು-ಸಾಗಣೆ ವ್ಯವಸ್ಥೆಯನ್ನೇ ಅನುಮಾನದಿಂದ ನೋಡುವಂತೆ ಮಾಡಿದೆ. ನಿತ್ಯ ಸಿಬ್ಬಂದಿ ಸೇರಿದಂತೆ ಲಕ್ಷಾಂತರ ಪ್ರಯಾಣಿಕರು ಲಗೇಜುಗಳೊಂದಿಗೆ ಪ್ರಯಾಣ ಬೆಳೆಸುತ್ತಾರೆ. ಎಲ್ಲಿಯೂ ಯಾವುದೇ ನಿರ್ದಿಷ್ಟ ತಪಾಸಣಾ ವ್ಯವಸ್ಥೆ ಬಸ್‌ಗಳು ಮತ್ತು ನಿಲ್ದಾಣಗಳಲ್ಲಿ ಇಲ್ಲ. ಇಲಾಖೆ ಸಿಬ್ಬಂದಿ ಹಾಗೂ ಪರಿಚಯಸ್ಥರು ಆಗಿರುವುದರಿಂದ ಸಾಮಾನ್ಯವಾಗಿ ಅವರು ತೆಗೆದುಕೊಂಡು ಬರುವ ಲಗೇಜುಗಳನ್ನು ನೋಡುವುದೂ ಇಲ್ಲ. ತಪಾಸಣೆ ಮಾಡಿದರೂ ಮಾದಕ ವಸ್ತುಗಳನ್ನು ಗುರುತಿಸುವ ಕೌಶಲ್ಯವೂ ಸಾರಿಗೆ ಸಿಬ್ಬಂದಿಗೆ ಇಲ್ಲ. ಹೀಗಿರುವಾಗ ಇದಕ್ಕೆ ಕಡಿವಾಣ ಹಾಕುವುದು ಹೇಗೆ? ಗಾಂಜಾ ಸಾಗಣೆಯ ಜಾಡು ಪತ್ತೆ ಹೇಗೆ? ಇಂತಹ ಹಲವು ಪ್ರಶ್ನೆಗಳಿಗೆ ಸದ್ಯಕ್ಕೆ ನಿಗಮದ ಬಳಿ ಉತ್ತರ ಇಲ್ಲ.
ಇದನ್ನೂ ಓದಿ:ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಚರ್ಚೆ ಬೇಡ: ಹಾಲಪ್ಪ ಆಚಾರ್
ಈ ಮಧ್ಯೆ ಕೆಎಸ್‌ಆರ್‌ಟಿಸಿಯು ಕಾರ್ಗೋ (ಸರಕು -ಸಾಗಣೆ) ಸೇವೆಯನ್ನು ಪರಿಚಯಿಸಿದೆ. ಹತ್ತಾರು ಕಡೆಗಳಿಂದ ಪಾರ್ಸೆಲ್‌ಗಳು ಬರುತ್ತವೆ. ಸಾಗಣೆಯಾಗುತ್ತಿರುವ ವಸ್ತುವಿನ ವಿವರ ಇರುತ್ತದೆ. ಆದರೆ, ನಿಜವಾಗಿಯೂ ಗ್ರಾಹಕರು ಉಲ್ಲೇಖೀಸಿದ ವಸ್ತುವನ್ನು ಕಳುಹಿಸಿರುತ್ತಾರೆಯೇ ಎಂಬುದರ ಖಾತ್ರಿ ಇಲ್ಲ. ಅದರಲ್ಲೂ ಸಿಬ್ಬಂದಿ ಶಾಮೀಲಾಗಿರುವುದು ಬೆಳಕಿಗೆ ಬಂದಿರುವುದು ಮತ್ತಷ್ಟು ತಲೆನೋವಾಗಿ ಪರಿಣಮಿಸಿದೆ.
“ಗಾಂಜಾ ಸಾಗಣೆ ಹಿಂದೆ ಯಾರ್ಯಾರು ಇದ್ದಾರೆ ಎಂಬುದನ್ನು ಪೊಲೀಸರು ಪತ್ತೆ ಮಾಡುತ್ತಾರೆ. ನಾವು ತಪ್ಪಿತಸ್ಥರ ವಿರುದ್ಧ ಇಲಾಖಾ ತನಿಖೆ ನಡೆಸುತ್ತೇವೆ. ಆದರೆ, ಇದೇ ರೀತಿ ಗಾಂಜಾ ಸಾಗಣೆ ಎಲ್ಲೆಲ್ಲಿ ನಡೆಯುತ್ತಿದೆ ಎಂಬುದನ್ನು “ಟ್ರ್ಯಾಕ್’ ಮಾಡುವುದು ಸದ್ಯಕ್ಕೆ ಕಷ್ಟ.ಯಾಕೆಂದರೆ, ನಿತ್ಯ ಸಾಕಷ್ಟು ಜನ ಬಸ್‌ಗಳಲ್ಲಿ ಪ್ರಯಾಣಿಸುತ್ತಾರೆ. ಬಹುತೇಕರು ಲಗೇಜುಗಳನ್ನು ಹೊಂದಿರುತ್ತಾರೆ. ಪ್ರತಿ ಲಗೇಜುಗಳ ತಪಾಸಣೆ ಅಸಾಧ್ಯ. ಆದರೆ, ಯಾವೊಂದು ವ್ಯವಸ್ಥೆಯಲ್ಲಿ ಹೀಗೆ ನ್ಯೂನ್ಯತೆಗಳಿರುವುದು ಸಹಜ. ಯಾರೋ ಒಬ್ಬಿಬ್ಬರು ಇಂತಹ ಕೃತ್ಯದಲ್ಲಿ ತೊಡಗಿದ್ದಾರೆ ಎಂದಾಕ್ಷಣ ಎಲ್ಲರನ್ನೂ ಅದೇ ಅನುಮಾನದಿಂದ ನೋಡಲು ಸಾಧ್ಯವೂಇಲ್ಲ’ ಎಂದು ಕೆಎಸ್ ಆರ್‌ಟಿಸಿ ಹಿರಿಯ ಅಧಿಕಾರಿಯೊಬ್ಬರು ತಿಳಿಸುತ್ತಾರೆ.
ಏನು ಮಾಡಬಹುದು?: ಟಿಕೆಟ್ ರಹಿತ ಪ್ರಯಾಣಕ್ಕೆ ಕಡಿವಾಣ ಹಾಕಲು ನಿಗಮಗಳಲ್ಲಿ ಪ್ರತ್ಯೇಕ ವಿಭಾಗ ಇದೆ.ಅದೇ ಮಾದರಿಯಲ್ಲಿ ರ್‍ಯಾಂಡಮ್ ಆಗಿ ತಪಾಸಣೆ ಮಾಡುವ ವ್ಯವಸ್ಥೆ ಜಾರಿಗೊಳಿಸಬೇಕು. ಸೀಮಿತ ಮಾರ್ಗಗಳಲ್ಲಿ ನಿಯಮಿತವಾಗಿ ಅಥವಾ ಪದೇ ಪದೆ ಪ್ರಯಾಣಿಸುವ ಸಿಬ್ಬಂದಿ ಮೇಲೆ ನಿಗಾ ಇಡಬೇಕು. ಅನುಮಾನ ಬಂದರೆ ತಕ್ಷಣ ಮೇಲಧಿಕಾರಿಗಳಿಗೆ ಮಾಹಿತಿ ನೀಡಬೇಕು. ಗಾಂಜಾ ಸಾಗಣೆ ಮತ್ತು ಮಾರಾಟ ಜಾಲದ “ಹಾಟ್‌ಸ್ಪಾಟ್’ಗಳನ್ನು ಗುರುತಿಸಿ, ಕಣ್ಗಾವಲು ಇಡಬೇಕು. ಮಾದಕವಸ್ತುಗಳ ನಿಯಂತ್ರಣ ಬ್ಯೂರೋದೊಂದಿಗೆ ಸಂಪರ್ಕ ಸಾಧಿಸಿ, ಆ ತಂಡದ ಸಹಯೋಗದಲ್ಲಿ ತಪಾಸಣೆ ಕಾರ್ಯ ಕೈಗೆತ್ತಿಕೊಳ್ಳಬೇಕು ಎಂದು ತಜ್ಞರು ಹೇಳುತ್ತಾರೆ.
ನೌಕರರು ಅಮಾನತು: ಬಿಎಂಟಿಸಿ ಘಟಕ-17ರ ಚಾಲಕ ಕಂ ನಿರ್ವಾಹಕ ಶರಣಬಸಪ್ಪ ಕ್ಷತ್ರೀಯ ಹಾಗೂ ಘಟಕ-21ರ ಕಿರಿಯ ಸಹಾಯಕ ವಿಠಲ್ ಭಜಂತ್ರಿ ಗಾಂಜಾ ಮಾರಾಟ ಜಾಲದಲ್ಲಿ ಕೆಂಗೇರಿ ಠಾಣೆಯಲ್ಲಿ ಪ್ರಕರಣದಾಖಲಾಗಿದ್ದು, ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಬೆನ್ನಲ್ಲೇ ಅಮಾನತುಗೊಳಿಸಿ ಶುಕ್ರವಾರ ಬಿಎಂಟಿಸಿ ಆದೇಶ ಹೊರಡಿಸಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ (ನಡತೆ ಮತ್ತು ಶಿಸ್ತು) ನಿಯಮಾವಳಿಗಳು1971ರ ನಿಯಮ19 (2)ರ ಪ್ರಕಾರ ಆಗಸ್ಟ್ 11ರಿಂದ ಪೂರ್ವಾನ್ವಯ ವಾಗುವಂತೆ ಅಮಾನತಿನಲ್ಲಿಡಲಾಗಿದೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.