ಗಣರಾಜ್ಯೋತ್ಸವ ವೇಳೆಗೆ ಅನಿಲ ಭಾಗ್ಯ: ಖಾದರ್
Team Udayavani, Jan 17, 2018, 8:58 AM IST
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿಯವರ ಅನಿಲ ಭಾಗ್ಯ ಯೋಜನೆ ಗಣರಾಜ್ಯೋತ್ಸವ ವೇಳೆಗೆ ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದರು. ವಿಕಾಸಸೌಧದಲ್ಲಿ ಅನಿಲ ಭಾಗ್ಯ ಯೋಜನೆ ಜಾರಿ ಸಂಬಂಧ ವಿವಿಧ ಜಿಲ್ಲೆಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ನಂತರ ಮಾತನಾಡಿ, ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರಿಗೆ ಫಲಾನುಭವಿಗಳ ಆಯ್ಕೆ ಪಟ್ಟಿ ಸಿದ್ಧಪಡಿಸಿ ಕಳುಹಿಸುವಂತೆ ಸೂಚಿಸಲಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರಿಂದ ಬಂದಿರುವ ಪಟ್ಟಿಯಲ್ಲಿ ರುವವರು ಈಗಾಗಲೇ ಅನಿಲ ಸಂಪರ್ಕ ಪಡೆದಿದ್ದಾರೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಲಾಗುವುದು. ನಂತರ ಅರ್ಹರ ಪಟ್ಟಿಗೆ ಮುಖ್ಯಮಂತ್ರಿ ಒಪ್ಪಿಗೆ ಪಡೆದು ಸಂದೇಶ ರವಾನಿಸಲಾಗುವುದು. ಫಲಾನುಭವಿಗಳು ಪಂಚಾಯತ್ ಕಚೇರಿಗೆ ಹೋಗಿ ಅರ್ಜಿ ಭರ್ತಿ ಮಾಡಿ ಕೊಟ್ಟರೆ ತೈಲ ಕಂಪನಿಗಳಿಗೆ ಚೆಕ್ ಮೂಲಕ ಹಣ ಸಂದಾಯ ಮಾಡಲಾಗುವುದು. ಫಲಾನುಭವಿಗಳಿಗೆ ಸ್ಟೌ ಖರೀದಿ ಸಂಬಂಧ ಡಿಡಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ಒಟ್ಟು 10 ಲಕ್ಷ ಫಲಾನುಭವಿಗಳಿಗೆ ಮುಖ್ಯಮಂತ್ರಿಯವರ ಅನಿಲ ಭಾಗ್ಯ ಯೋಜನೆ ತಲುಪಿಸಲು ಗುರಿ ಹೊಂದಲಾಗಿದೆ. ಪ್ರತಿ ವರ್ಷ 1.50 ರಿಂದ 2 ಲಕ್ಷ ಫಲಾನುಭವಿಗಳ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.
ಪ್ರಶಸ್ತಿ ಗರಿ
ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಕೇಂದ್ರ ಸರ್ಕಾರದ ಅತ್ಯುತ್ತಮ ಕಾರ್ಯ ನಿರ್ವಹಣೆ ಪ್ರಶಸ್ತಿ ಪ್ರಕಟವಾಗಿದ್ದು, ಮಂಗಳವಾರ ದೆಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಲಾಖೆಯ ಕಾರ್ಯದರ್ಶಿ ಪ್ರಶಸ್ತಿ ಪಡೆದಿದ್ದಾರೆ. ಈ ಹಿಂದೆ ನಾನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವನಾಗಿದ್ದಾಗಲೂ ಕೇಂದ್ರ ಸರ್ಕಾರದ ಪ್ರಶಸ್ತಿ ದೊರೆತಿತ್ತು. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ ರಾಜ್ಯ ಸರ್ಕಾರದ ಕಾರ್ಯ ನಿರ್ವಹಣೆ ಮೆಚ್ಚಿ ಪ್ರಶಸ್ತಿ ನೀಡಲಾಗಿದೆ ಎಂದು ಯು.ಟಿ.ಖಾದರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.