ಗೌರಿ ಹತ್ಯೆ: ಆರೋಪಿ ತಾಹೀರ್ ವಿಚಾರಣೆ ಸಾಧ್ಯತೆ
Team Udayavani, Dec 6, 2017, 9:42 AM IST
ಬೆಂಗಳೂರು: ಇತ್ತೀಚೆಗಷ್ಟೇ ಅಪಹರಣ ಯತ್ನ, ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಬಂಧನಕ್ಕೊಳಗಾಗಿರುವ ತಾಹೀರ್ ಹುಸೇನ್ ಅಲಿಯಾಸ್ ಅನೂಪ್ ಗೌಡನನ್ನು ಪತ್ರಕರ್ತೆ ಗೌರಿ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸಲಿದೆ.
ಚಿಕ್ಕಬಳ್ಳಾಪುರ ಮೂಲದ ತಾಹೀರ್ ಹುಸೇನ್ ಹಲವು ಬಾರಿ ಅಕ್ರಮ ಶಸ್ತ್ರಾಸ್ತ್ರ ಪೂರೈಕೆ ಪ್ರಕರಣಗಳಲ್ಲಿ ಬಂಧಿತನಾಗಿದ್ದಾನೆ. ಈತನ ವಿರುದ್ದ ಬೆಳಗಾವಿ, ಮೈಸೂರು, ಬೆಂಗಳೂರು, ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳಿವೆ. 10 ತಿಂಗಳ ಹಿಂದೆಯಷ್ಟೇ ತಾಹೀರ್ ಹುಸೇನ್‌ನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದರು. ನೆರೆ ರಾಜ್ಯಗಳಲ್ಲಿನ ಅಕ್ರಮ ದ್ದ ಪೂರೈಸುವವರೊಂದಿಗೆ ತಾಹೀರ್ ನಿಕಟ ಸಂಪರ್ಕ ಹೊಂದಿದ್ದು, ಆತನನ್ನು ಗೌರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತೇವೆ. ಡಿ.16ರವರೆಗೆ ಸಿಸಿಬಿ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ನಡುವೆಯೇ ಆರೋಪಿಯನ್ನು ಬಾಡಿ ವಾರೆಂಟ್ ಮೂಲಕ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಎಸ್‌ಐಟಿ ತನಿಖಾಧಿಕಾರಿ ತಿಳಿಸಿದ್ದಾರೆ.
ಗೌರಿ ಹಂತಕರಿಗೆ ಪಿಸ್ತೂಲ್
ಪತ್ರಕರ್ತೆ ಗೌರಿ ಹತ್ಯೆಗೈದಿರುವುದು 7.65 ಎಂಎಂ ಕಂಟ್ರಿ ಮೆಡ್ ಪಿಸ್ತೂಲ್‌ನಲ್ಲಿಯೇ ಎಂದು ವಿಧಿ ವಿಜ್ಞಾನ ಪರೀಕ್ಷಾ ವರದಿ ತಿಳಿಸಿದೆ. ಹೆಚ್ಚಾಗಿ ಈ ಕಂಟ್ರಿಮೇಡ್ ಪಿಸ್ತೂಲ್‌ಗಳು ಮಾರಾಟವಾಗುವುದು ಉತ್ತರ ಕರ್ನಾಟಕದ ಭಾಗದಲ್ಲಿ. ಜತೆಗೆ ಗೌರಿ ಹಂತಕರಿಗೆ ಉತ್ತರ ಕರ್ನಾಟಕ ಹಾಗೂ ಉತ್ತರ ಭಾರತದ ಕಡೆಯವರೇ ಪಿಸ್ತೂಲ್ ಪೂರೈಕೆ ಮಾಡಿದ್ದಾರೆ ಎಂಬ ಅನುಮಾನ ಕೂಡ ಇದೆ. ಈ
ಹಿನ್ನೆಲೆಯಲ್ಲಿ ತಾಹೀರ್‌ನನ್ನು ವಿಚಾರಣೆಗೊಳಪಡಿ ಸುವುದರಿಂದ ಮಹತ್ವದ ಸುಳಿವು ಸಿಗುವ ಸಾಧ್ಯತೆಯಿದೆ ಎಂದು ಅಧಿಕಾರಿ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.