ಅಂಬಾವಿಲಾಸ ಅರಮನೆಯಲ್ಲಿ ರತ್ನಸ್ವರ್ಣ ಸಿಂಹಾಸನ ಜೋಡಣೆ
Team Udayavani, Sep 25, 2019, 3:05 AM IST
ಮೈಸೂರು: ರಾಜ ಮನೆತನದವರು ನಡೆಸುವ ನವರಾತ್ರಿ ಉತ್ಸವದ ಪ್ರಮುಖ ಭಾಗವಾಗಿರುವ ಖಾಸಗಿ ದರ್ಬಾರ್‌ಗಾಗಿ ಮಂಗಳವಾರ ಅರಮನೆಯ ದರ್ಬಾರ್ ಹಾಲ್‌ನಲ್ಲಿ ರತ್ನಖಚಿತ ಸ್ವರ್ಣ ಸಿಂಹಾಸನ, ಕನ್ನಡಿ ತೊಟ್ಟಿಯಲ್ಲಿ ಭದ್ರಾಸನ ಜೋಡಿಸಲಾಯಿತು. ನವರಾತ್ರಿ ಹಿನ್ನೆಲೆಯಲ್ಲಿ ಸೆ.29ರಿಂದ ಅ.8ರವರೆಗೆ ಅರಮನೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ಜರುಗಲಿದ್ದು, ಪ್ರತಿ ದಿನ ಸಂಜೆ ಖಾಸಗಿ ದರ್ಬಾರ್ ನಡೆಯಲಿದೆ.
ಸಿಂಹಾಸನ ಮತ್ತು ಭದ್ರಾಸನ ಜೋಡಣೆ ಹಿನ್ನೆಲೆಯಲ್ಲಿ ಮಂಗಳವಾರ ಮುಂಜಾನೆಯಿಂದಲೇ ಅರಮನೆಯಲ್ಲಿ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ಶಾಂತಿ ಪೂಜೆ ನಂತರ ಬೆಳಗ್ಗೆ 10.45ಕ್ಕೆ ಅರಮನೆಯ ನೆಲಮಾಳಿಗೆಯಲ್ಲಿರುವ ಭದ್ರತಾ ಕೊಠಡಿಯನ್ನು ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳ ಸಮ್ಮುಖದಲ್ಲಿ ತೆರೆಯಲಾಯಿತು.
ಶಸ್ತ್ರಸಜ್ಜಿತ ಪೊಲೀಸರ ಕಣ್ಗಾವಲಿನಲ್ಲಿ ಒಂದೊಂದೇ ಬಿಡಿ ಭಾಗವನ್ನು ದರ್ಬಾರ್ ಹಾಲ್‌ಗೆ ತರಲಾ ಯಿತು. ಸುಮಾರು 13 ಬಿಡಿ ಭಾಗಗಳಾಗಿ ವಿಂಗಡಿಸಲಾಗಿದ್ದ ಸಿಂಹಾಸನವನ್ನು ಜೋಡಿಸಿ, ಪರದೆ ಬಿಡಲಾಯಿತು. ಸಿಂಹಾಸನ ಜೋಡಣೆ ಬಳಿಕ ಅರ ಮನೆಯ ಕನ್ನಡಿ ತೊಟ್ಟಿಯಲ್ಲಿ ಬೆಳ್ಳಿಯ ಭದ್ರಾಸನ ಜೋಡಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Surathkal-ಗಣೇಶಪುರ ರಸ್ತೆಯಲ್ಲಿ ಟ್ಯಾಂಕರ್ ರಾಜ್ಯಭಾರ!
Mangaluru: ಕರಾವಳಿ ಉತ್ಸವ; ಮತ್ಸ್ಯ ಲೋಕದೊಳಗೆ ನಾವು!
Kundapura: ಮೆಟ್ಟಿಲು ಹತ್ತುವಾಗಲೇ ಶುಚಿಯಾಗುವ ಶೌಚಾಲಯ!
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.