ಜಾರ್ಜ್ ರಾಜೀನಾಮೆ: ಪಟ್ಟು ಸಡಿಲಿಸಿದ ಬಿಜೆಪಿ
Team Udayavani, Nov 16, 2017, 6:00 AM IST
ಬೆಳಗಾವಿ: ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ಎಫ್‌ಐಆರ್ ದಾಖಲಿಸಿರುವ ಹಿನ್ನೆಲೆಯಲ್ಲಿ ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆಗೆ ಒತ್ತಾಯಿಸಿ ಉಭಯ ಸದನಗಳಲ್ಲಿ ಧರಣಿ ನಡೆಸಿದ್ದ ಬಿಜೆಪಿ ತನ್ನ ಪಟ್ಟು ಸಡಿಲಿಸಿದೆ.
ವಿಧಾನಪರಿಷತ್‌ನಲ್ಲಿ ಸೋಮವಾರ ಧರಣಿ ನಡೆಸಿ ಸುಮ್ಮನಾಗಿದ್ದ ಬಿಜೆಪಿ ಬುಧವಾರ ವಿಧಾನಸಭೆಯಲ್ಲೂ ಈ ವಿಚಾರವನ್ನು ಹೆಚ್ಚು ಬೆಳೆಸಲು ಹೋಗದೆ ಚರ್ಚೆಗೆ ಅವಕಾಶ ನೀಡುವುದಾಗಿ ಸ್ಪೀಕರ್ ಭರವಸೆ ನೀಡಿದ ಹಿನ್ನೆಲೆಯಲ್ಲಿ ಧರಣಿ ವಾಪಸ್ ಪಡೆಯಿತು.
ಬುಧವಾರ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಿಷಯ ಪ್ರಸ್ತಾವಿಸಿ, ಸಚಿವ ಜಾರ್ಜ್ ರಾಜೀನಾಮೆ ವಿಚಾರವನ್ನು ಚರ್ಚೆಗೆ ಅವಕಾಶ ಕೊಡುವಂತೆ ಒತ್ತಾಯಿಸಿದರು. ಸಿಬಿಐ ತನಿಖೆ ಸಂದರ್ಭ ಗಣಪತಿ ಆತ್ಮಹತ್ಯೆ ಮಾಡಿಕೊಂಡ ಕೊಠಡಿಯಲ್ಲಿ ಬುಲೆಟ್ ಪತ್ತೆಯಾಗಿದೆ. ಇದು ಸಾಕಷ್ಟು ಅನುಮಾನಕ್ಕೆ ಕಾರಣ ವಾಗಿದೆ. ಇದೊಂದು ಗಂಭೀರ ವಿಚಾರ ಎಂದರು.
ಆದರೆ ಆಡಳಿತಾರೂಢ ಕಾಂಗ್ರೆಸ್ ಸದಸ್ಯರು ಚರ್ಚೆಗೆ ಅವಕಾಶ ಕೊಡಬಾರದು ಎಂಬ ಆಗ್ರಹ ಮುಂದು
ವರಿಸಿದರು. ಈ ಸಂದರ್ಭ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಬಿಜೆಪಿ ಸದಸ್ಯರು ಸಭಾಧ್ಯಕ್ಷರ ಪೀಠದ ಎದುರು ಧಾವಿಸಿ ಧರಣಿ ಆರಂಭಿಸಿದರು. ಈ ಕುರಿತು ಚರ್ಚೆಗೆ ಬೇರೆ ಸಮಯದಲ್ಲಿ ಅವಕಾಶ ನೀಡುವುದಾಗಿ ಸ್ಪೀಕರ್ ಭರವಸೆಯಿತ್ತ ಬಳಿಕ ಧರಣಿ ಹಿಂಪಡೆದರು. ಪ್ರಶ್ನೋತ್ತರ ಕಲಾಪದ ಅನಂತರ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ಆರಂಭಿಸ ಲಾಯಿತು. ಹೀಗಾಗಿ, ಬಿಜೆಪಿ ಮತ್ತೆ ಜಾರ್ಜ್ ರಾಜೀನಾಮೆ ವಿಚಾರ ಪ್ರಸ್ತಾವಿಸಲು ಹೋಗಲಿಲ್ಲ.
ಮೂಲಗಳ ಪ್ರಕಾರ, ಜಾರ್ಜ್ ವಿಚಾರದಲ್ಲಿ ಬಿಗಿ ನಿಲುವು ಬೇಡ. ಧರಣಿ ನಡೆಸಿ ಕಲಾಪಕ್ಕೆ ಅಡ್ಡಿ ಮಾಡಿದರೆ ಉತ್ತರ ಕರ್ನಾಟಕ ಭಾಗದ ಜನರ ಆಕ್ರೋಶಕ್ಕೆ ತುತ್ತಾಗಬಹುದು. 3 ದಿನಗಳ ಕಾಲ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅವಕಾಶ ನೀಡಿರುವುದರಿಂದ ಅದನ್ನು ಸದುಪಯೋಗಪಡಿಸಿ ಕೊಂಡು ಸರಕಾರದ ವೈಫಲ್ಯ ತಿಳಿಸುವುದು ಸೂಕ್ತ ಎಂದು ಬಿಜೆಪಿ ಶಾಸಕ ಪಕ್ಷದ ಸಭೆಯಲ್ಲೂ ಚರ್ಚಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
MUST WATCH
ಹೊಸ ಸೇರ್ಪಡೆ
Bengaluru: ಶಾಸಕ ಮುನಿರತ್ನ ಕೇಸ್: ವಿಕಾಸಸೌಧದಲ್ಲಿ ಸ್ಥಳ ಮಹಜರು
Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.