ಜಾರ್ಜ್ ಸಮರ್ಥನೆ ಸಿಎಂ ವಿಲಕ್ಷಣ ತರ್ಕ
Team Udayavani, Oct 28, 2017, 8:45 AM IST
ಬೆಂಗಳೂರು: “ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಆದೇಶದಂತೆ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದರೂ ಅವರಿಂದ ರಾಜೀನಾಮೆ ಪಡೆಯುವ ಬದಲು ಸಮರ್ಥಿಸಿಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು ವಿಲಕ್ಷಣ ತರ್ಕ’ ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಕಿಡಿ ಕಾರಿದ್ದಾರೆ.
ಈ ಹಿಂದೆ ಗಣಪತಿ ಪ್ರಕರಣದಲ್ಲಿ ಸಿಐಡಿ ವಿಚಾರಣೆ ಆರಂಭಿಸಿದಾಗ ಜಾರ್ಜ್ ಗೃಹ ಸಚಿವರಾಗಿದ್ದರು. ಹಾಗಾಗಿ ಅವರ ರಾಜೀನಾಮೆ ಪಡೆಯಲಾಗಿತ್ತು. ಈಗ ಅವರು ಗೃಹ ಸಚಿವರಲ್ಲದ ಕಾರಣ ರಾಜೀನಾಮೆ ನೀಡಬೇಕಾದ ಅಗತ್ಯವಿಲ್ಲ ಎಂದು ಜಾರ್ಜ್ ರಾಜೀನಾಮೆ ಪಡೆಯದಿರಲು ಸಿಎಂ ಸಿದ್ದರಾಮಯ್ಯ ಕಾರಣ ನೀಡುತ್ತಿದ್ದಾರೆ. ಹಾಗಿದ್ದರೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವಾಗ ಗೃಹ ಸಚಿವರಿಗೊಂದು, ಇತರೆ ಖಾತೆ ಸಚಿವರಿಗೊಂದು ಪ್ರಮಾಣವಚನ ಇರುತ್ತದೆಯೇ? ಇಂತಹ ಅತಿ ಕೆಟ್ಟ ವಾದವನ್ನು ಕೇಳುತ್ತಿರುವುದು ಇದೇ ಮೊದಲು. ನಾಯಕರ ಇಂತಹ ವಿಲಕ್ಷಣ ತರ್ಕಗಳಿಂದಲೇ ಕಾಂಗ್ರೆಸ್ ಜನರಿಂದ ದೂರವಾಗುತ್ತಿದೆ ಎಂದು ವ್ಯಂಗ್ಯವಾಡಿದರು. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದಲ್ಲಿ ಸಚಿವ ಜಾರ್ಜ್ ಅವರನ್ನು ಸುಪ್ರೀಂಕೋರ್ಟ್ ಸೂಚನೆಯಂತೆ ಸಿಬಿಐ ಮೊದಲ ಆರೋಪಿಯನ್ನಾಗಿ ಮಾಡಿದೆ. ಆದ್ದರಿಂದ ತಕ್ಷಣ ಅವರನ್ನು ಸಂಪುಟದಿಂದ ವಜಾ ಮಾಡಬೇಕು. ಇಲ್ಲದೇ ಇದ್ದಲ್ಲಿ ನಿಮಗೆ ನೈತಿಕತೆ ಇಲ್ಲ ಮತ್ತು ಉತ್ತಮ ಆಡಳಿತ ಕೊಡಲು ಸಾಧ್ಯವಿಲ್ಲ ಎಂದು ತಿಳಿದುಕೊಳ್ಳಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ಹೇಳಿದರು.
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರ್ದೇಶನದಂತೆ ತನಿಖೆ ಆರಂಭಿಸಿರುವ ಸಿಬಿಐ, ಸಚಿವ ಜಾರ್ಜ್ ಹಾಗೂ ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದೆ. ಅಲ್ಲದೆ, ಅದರಂತೆಯೇ ಸಚಿವ ಜಾರ್ಜ್ ಅವರನ್ನು ಮೊದಲ ಆರೋಪಿಯನ್ನಾಗಿ ಮಾಡಿದೆ. ಇದು ಗೊತ್ತಿದ್ದರೂ ಮುಖ್ಯಮಂತ್ರಿಗಳು ತಮ್ಮ ಸಹೋದ್ಯೋಗಿ ಎಂಬ ಕಾರಣಕ್ಕೆ ಜಾರ್ಜ್ ಅವರನ್ನು ಸಮರ್ಥಿಸಿಕೊಳ್ಳುವುದು ಅಕ್ಷಮ್ಯ. ಇದು ಉತ್ತಮ ಆಡಳಿತ ಮತ್ತು ನೈತಿಕತೆಯ ಲಕ್ಷಣವಲ್ಲ ಎಂದರು.
ಕೋರ್ಟ್ ಸಿಐಡಿ ತನಿಖೆಯನ್ನೇ ಒಪ್ಪಿಲ್ಲ: ಗಣಪತಿ ಅವರ ತಂದೆ ಸಲ್ಲಿಸಿದ್ದ ಅರ್ಜಿಯಲ್ಲಿ ಸಿಬಿಐ ತನಿಖೆಗೆ ಕೋರಲಾಗಿದೆ ಎಂಬ ಕಾರಣಕ್ಕಷ್ಟೇ ಸುಪ್ರೀಂಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿದ್ದಲ್ಲ. ಸಚಿವ ಜಾರ್ಜ್ ಮತ್ತಿತರರ ವಿರುದ್ಧ ಸಿಐಡಿ ಸಲ್ಲಿಸಿದ್ದ ಬಿ ರಿಪೋರ್ಟ್ ಮಾತ್ರವಲ್ಲ, ಸಿಐಡಿ ತನಿಖೆಯೇ ನಿಷ್ಪ್ರಯೋ ಜಕವಾಗಿದ್ದು, ನಂಬಿಕೆ ಉಳಿಸಿಕೊಂಡಿಲ್ಲ ಎಂದು ಹೇಳಿ ಸಿಬಿಐ ತನಿಖೆಗೆ ಆದೇಶಿಸಿದೆ. ಆದರೆ, ಮುಖ್ಯಮಂತ್ರಿ ಸೇರಿ ಅವರ ಸಂಪುಟದ ಕೆಲ ಸದಸ್ಯರು ಸುಪ್ರೀಂಕೋರ್ಟ್ ಉದ್ದೇಶಕ್ಕೇ ಸವಾಲೊಡ್ಡು ತ್ತಿದ್ದಾರೆ. ಅಲ್ಲದೆ, ಕೋರ್ಟ್ ಬಗ್ಗೆಯೇ ಅಪವಾದ ಹೊರಿಸುತ್ತಿದ್ದಾರೆ. ಮುಂದೆ ಅದು ಕಾಂಗ್ರೆಸ್ ಪಕ್ಷಕ್ಕೇ ಹೆಚ್ಚು ಹಾನಿಯುಂಟುಮಾಡಲಿದೆ
ಎಂದು ಎಚ್ಚರಿಸಿದರು. ಒಬ್ಬ ಪೊಲೀಸ್ ಅಧಿಕಾರಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ನೀಡಿದ ಹೇಳಿಕೆಯಲ್ಲಿ ಒಬ್ಬ ಸಚಿವ ಮತ್ತು ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರು ಹೇಳುತ್ತಾರೆ ಎಂದರೆ ಅದು ಕೇವಲ ಸರ್ಕಾರದ ವೈಫಲ್ಯ ಮಾತ್ರವಲ್ಲ, ಕರ್ತವ್ಯ ದ್ರೋಹವೂ ಹೌದು ಎಂದರು.
ಸಿಬಿಐ ದುರುಪಯೋಗ ಕಾಂಗ್ರೆಸ್‌ಗೆ ಮಾತ್ರ ಗೊತ್ತು
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಸಿಬಿಐಅನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಯನ್ನು ತಳ್ಳಿಹಾಕಿದ ಪ್ರಕಾಶ್ ಜಾವಡೇಕರ್, ಬಿಜೆಪಿ ಯಾವತ್ತೂ ಸಿಬಿಐ ಉದುಪಯೋಗಪಡಿಸಿಕೊಂಡಿಲ್ಲ. ಅದು ಕಾಂಗ್ರೆಸ್‌ಗೆ ಮಾತ್ರ ಗೊತ್ತು ಎಂದು ಹೇಳಿದ್ದಾರೆ. ಯುಪಿಎ ಸರ್ಕಾರ ಇದ್ದಾಗ ಸಿಬಿಐ ಕಾಂಗ್ರೆಸ್ ಬ್ಯೂರೋ ಆಫ್ ಇನ್‌ವೆಸ್ಟಿಗೇಷನ್ ಆಗಿತ್ತು. ಸಿಬಿಐ ವರದಿಯನ್ನು ಕಾನೂನು ಸಚಿವರೇ ಬದಲಿಸಿದ್ದರು. ಕಲ್ಲಿದ್ದಲು ಪ್ರಕರಣಕ್ಕೆ ಸಂಬಂಧಿಸಿದಂತೆ ಯುಪಿಎ ಸರ್ಕಾರದ ಒತ್ತಡಕ್ಕೆ ಸಿಬಿಐ ಕೆಲವು ಪ್ರಕರಣಗಳನ್ನು ಮುಚ್ಚಿಹಾಕಿತ್ತು ಎಂಬುದು ನಂತರ ಸುಪ್ರೀಂಕೋರ್ಟ್ ಉಸ್ತುವಾರಿಯಲ್ಲಿ ನಡೆದ ತನಿಖೆಯಲ್ಲಿ ಗೊತ್ತಾಗಿದೆ. ಆದರೆ, ಬಿಜೆಪಿ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಅಂತಹ ಒಂದೇ ಒಂದು ಪ್ರಕರಣ ವರದಿಯಾಗಿಲ್ಲ. ಕೇಂದ್ರ ಸರ್ಕಾರ ಸಿಬಿಐ ತನಿಖೆಯಲ್ಲಿ ಕೈಯಾಡಿಸುವುದೂ ಇಲ್ಲ ಎಂದರು.
ರಾಜೀನಾಮೆ ನೀಡದಿದ್ದರೆ ಉಗ್ರ ಹೋರಾಟ
ಹುಬ್ಬಳ್ಳಿ: “ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್ ಮೇಲೆ ಸಿಬಿಐ ಎಫ್ಐಆರ್ ದಾಖಲಿಸಿರುವ ಹಿನ್ನೆಲೆಯಲ್ಲಿ ಅವರು ತಮ್ಮ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಪುಟದಿಂದ ಕೈ ಬಿಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು’ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ” ಜಾರ್ಜ್ ಸಚಿವರಾಗಿ ಮುಂದುವರಿದರೆ ಸಾಕ್ಷಿಗಳ ನಾಶ ಹಾಗೂ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜೀನಾಮೆಗೆ ಒತ್ತಾಯಿಸುತ್ತಿದೆ. ಸಚಿವರ ರಾಜೀನಾಮೆ ವಿಚಾರವನ್ನು ವಿಧಾನಮಂಡಲ ಚಳಿಗಾಲ ಅಧಿವೇಶನದಲ್ಲೂ ಪ್ರಸ್ತಾಪಿಸಲಾಗುವುದು. ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದರು.
ರಾಜೀನಾಮೆಗೆ ಮುಂದಾಗಿದ್ದ ಜಾರ್ಜ್
ಎಫ್ಐಆರ್ ಹಿನ್ನೆಲೆಯಲ್ಲಿ ಸಚಿವ ಕೆ.ಜೆ. ಜಾರ್ಜ್ ಅವರು ರಾಜೀನಾಮೆಗೆ ಮುಂದಾಗಿದ್ದ ವಿಚಾರವೂ ಬಹಿರಂಗವಾಗಿದೆ. ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರವಾಗುವುದಾದರೆ ರಾಜೀನಾಮೆ ನೀಡುತ್ತೇನೆ ಎಂದು ಸಚಿವ ಜಾರ್ಜ್ ಅವರೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಹೇಳಿಕೊಂಡಿದ್ದರು ಎಂದು ಹೇಳಲಾಗಿದೆ. ಆದರೆ ಇದೇ ಪ್ರಕರಣದಲ್ಲಿ ಈ ಹಿಂದೆ ಕೂಡ ರಾಜೀನಾಮೆ ನೀಡಿರುವುದರಿಂದ ಮತ್ತೆ ಪದತ್ಯಾಗ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಅಭಯ ನೀಡಿದರು ಎನ್ನಲಾಗಿದೆ. ಆಗ ಗೃಹ ಸಚಿವರಾಗಿದ್ದ ಜಾರ್ಜ್ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದರಿಂದ ಅವರು ಪ್ರಭಾವ ಬೀರುವ ಅನುಮಾನ ಬರುತ್ತದೆ ಎಂಬ ಕಾರಣಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಈಗ ಸಿಬಿಐ ತನಿಖೆ ನಡೆಸಲು ಮುಂದಾಗಿರುವುದರಿಂದ ರಾಜೀನಾಮೆ ಅಗತ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಹೇಳಲಾಗಿದೆ.ಅಲ್ಲದೆ ಈಗ ರಾಜೀನಾಮೆ ಕೊಟ್ಟರೆ ಬಿಜೆಪಿ ಈ ವಿಚಾರವನ್ನೇ ಲಾಭವಾಗಿ ಬಳಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ ಎಂಬುದೂ ಮುಖ್ಯಮಂತ್ರಿ ಅವರ ನಿಲುವು ಎಂದು ಹೇಳಲಾಗಿದೆ. ಈ ಮಧ್ಯೆ, ಸಿಎಂ ತಮ್ಮ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡರೂ ಅದಕ್ಕೆ ಬದ್ಧನಾಗಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
HMPV Virus: ಭಾರತದ ಮೊದಲ ಎಚ್‌ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…
Yakshagana:ಆಗ ರಂಗದಲ್ಲಿ ಸ್ತ್ರೀಯಾಗುತ್ತಿದ್ದ ಬೆರಳೆಣಿಕೆ ಕಲಾವಿದರಿಗೆ ಸುಗ್ಗಿ..ಈಗ ಹಾಗಲ್ಲ
Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್ ಪ್ರಸಾದ್ ಸಿನಿಮಾ
Explainer; ಡಾ. ಚಿದಂಬರಂ & ಡಾ. ರಾಜಾ ರಾಮಣ್ಣ;ಪರಮಾಣು ವಿಜ್ಞಾನವನ್ನೂ ಮೀರಿದ ನಾಯಕತ್ವ
Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.