ಲಸಿಕೆ ಪಡೆಯಿರಿ: ಜಗ್ಗಿ ವಾಸುದೇವ್
Team Udayavani, Apr 30, 2021, 6:16 AM IST
ಬೆಂಗಳೂರು: ಸರಕಾರ ಕೋವಿಡ್ ಲಸಿಕೆ ನೀಡುತ್ತಿದ್ದು, ಕೆಲವರು ಅದನ್ನು ನಿರ್ಲಕ್ಷಿಸುತ್ತಿದ್ದಾರೆ. ಲಸಿಕೆ ನಮ್ಮನ್ನು ಕಾಪಾಡಲಿದ್ದು, ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಈಶ ಫೌಂಡೇಶನ್ ಮುಖ್ಯಸ್ಥ ಸದ್ಗುರು ಜಗ್ಗಿ ವಾಸುದೇವ್ ಹೇಳಿದ್ದಾರೆ.
ಗುರುವಾರ ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿದ ಅವರು, ಯೋಗಕ್ಕೆ ರೋಗ ನಿರೋಧಕ ಶಕ್ತಿಯಿದ್ದು, ಆರೋಗ್ಯ ಸಂರಕ್ಷಣೆ ದೃಷ್ಟಿಯಿಂದ ಎಲ್ಲರೂ ಪ್ರತಿನಿತ್ಯ ಯೋಗ ಮಾಡಬೇಕು. ಯೋಗಕ್ಕೆ ಹಲವು ರೋಗಗಳನ್ನು ಗುಣಪಡಿಸುವ ಶಕ್ತಿಯಿದೆ. ಪ್ರತಿ ನಿತ್ಯ 90-120 ನಿಮಿಷದ ವರೆಗೆ ಸೂರ್ಯ ನಮಸ್ಕಾರ, ಅಷ್ಟಾಂಗ ನಮಸ್ಕಾರ, ಸಿಂಹ ಕ್ರಿಯೆ ಮುಂತಾದ ಯೋಗಾಸಗಳನ್ನು ಮಾಡುವಂತೆ ವಿನಂತಿಸಿಕೊಂಡರು. ಕೋವಿಡ್ ಸೋಂಕು ತೀವ್ರವಾಗಿ ರುವ ಈ ಹೊತ್ತಿನಲ್ಲಿ ವಿಮರ್ಶೆ-ಟೀಕೆಗಳನ್ನು ಮಾಡುವುದನ್ನು ಬಿಟ್ಟು ಅಪಾಯದಲ್ಲಿದ್ದವರನ್ನು ರಕ್ಷಣೆಗೆ ಶ್ರಮಿ ಸಬೇಕಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.