![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 3, 2023, 6:10 AM IST
ನವದೆಹಲಿ: ಮೈಸೂರಿನ ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತ ಸ್ಥಾನಮಾನ ನೀಡುವಂತೆ ಕೇಂದ್ರ ಸರ್ಕಾರವನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮನವಿ ಮಾಡಿದರು.
ರಾಜ್ಯಸಭೆಯ ಮುಂಗಾರು ಅಧಿವೇಶನದ ವಿಶೇಷ ವೇಳೆಯಲ್ಲಿ ಬುಧವಾರ ವಿಷಯ ಪ್ರಸ್ತಾಪಿಸಿದ ಅವರು, “ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆಯಲ್ಲಿ ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತ ಸ್ಥಾನ ಮಾನ ನೀಡಬೇಕು. ಕನ್ನಡ ಭಾಷೆಯ ಬೆಳವಣಿಗೆಗೆ ಕೇಂದ್ರ ಸರ್ಕಾರವು ಹೆಚ್ಚಿನ ಅನುದಾನವನ್ನು ಮೀಸಲಿರಿಸಬೇಕು’ ಎಂದು ಕೋರಿದರು.
“ಕನ್ನಡ ಭಾಷೆಗೆ 3,000ಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಸುಮಾರು ಆರು ಕೋಟಿಗೂ ಹೆಚ್ಚು ಜನರು ಕನ್ನಡ ಭಾಷೆ ಯನ್ನು ಮಾತೃಭಾಷೆ ಯಾಗಿ ಹೊಂದಿದ್ದಾರೆ. ಭಾರ ತದ ಅತ್ಯಂತ ಹಳೆಯ ಭಾಷೆ ಗಳಲ್ಲಿ ಕನ್ನಡ ಒಂದು. 2008 ರಲ್ಲಿ ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ನೀಡಲಾಗಿದೆ. 2011ರಲ್ಲಿ ಮೈಸೂರಿನ ಭಾರತೀಯ ಭಾಷೆ ಗಳ ಕೇಂದ್ರ ಸಂಸ್ಥೆಯಲ್ಲಿ ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರ ತೆರೆಯಲಾಗಿದೆ. ಈ ಕೇಂದ್ರಕ್ಕೆ ಸ್ವಾಯತ್ತ ಸ್ಥಾನಮಾನದ ಜತೆಗೆ ಹೆಚ್ಚಿನ ಅನುದಾನ ನೀಡಬೇಕು’ ಎಂದು ಈರಣ್ಣ ಕಡಾಡಿ ಹೇಳಿದರು.
ರಾಜ್ಯಸಭೆಯ ಮುಂಗಾರು ಅಧಿವೇಶನದ ವಿಶೇಷ ವೇಳೆಯಲ್ಲಿ ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆಯಲ್ಲಿ ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತ ಸ್ಥಾನಮಾನವನ್ನು ನೀಡಬೇಕು ಮತ್ತು ಕನ್ನಡ ಭಾಷೆಯ ಬೆಳವಣಿಗೆಗೆ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುಧಾನವನ್ನು ಮೀಸಲಿಡಬೇಕೆಂದು ಸರ್ಕಾರಕ್ಕೆ ವಿನಂತಿಸಿದ ಕ್ಷಣ.#MonsoonSession 2023 pic.twitter.com/C6WgE6R2LW
— Iranna Kadadi-MP (@Irannakadadi_MP) August 2, 2023
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.