Karnataka: ವಾರದೊಳಗೆ ಬೆಳೆ ನಷ್ಟ ಪರಿಹಾರ ಕೊಡಿ: ಅಶೋಕ್
Team Udayavani, Oct 28, 2024, 1:04 AM IST
ಬೆಂಗಳೂರು: ತಂತ್ರಾಂಶದಲ್ಲಿ ತೊಂದರೆ ಇದೆ, ಆಧಾರ್ ವಿಲೀನ ಆಗಿಲ್ಲ ಎಂಬ ಕುಂಟು ನೆಪವೊಡ್ಡದೆ ಅತಿವೃಷ್ಟಿಯಿಂದಾಗಿರುವ ಬೆಳೆ ನಷ್ಟ ಪರಿಹಾರವನ್ನು ಒಂದು ವಾರದೊಳಗೆ ಬಿಡುಗಡೆ ಮಾಡುವಂತೆ ರಾಜ್ಯ ಸರಕಾರಕ್ಕೆ ಆಗ್ರಹಿಸಿರುವ ವಿಧಾನಸಭೆ ವಿಪಕ್ಷದ ನಾಯಕ ಆರ್. ಅಶೋಕ್, ರೈತರು ನೆಮ್ಮದಿಯಿಂದ ದೀಪಾವಳಿ ಹಬ್ಬವನ್ನಾದರೂ ಆಚರಿಸಲು ಸಹಕಾರಿಯಾಗುತ್ತದೆ ಎಂದಿದ್ದಾರೆ.
ರವಿವಾರ ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ, ಹಿಂಗಾರು ಅವಧಿಯಲ್ಲಿ ಸುರಿದಿರುವ ಅತಿವೃಷ್ಟಿಯಿಂದ ಅಪಾರ ಬೆಳೆ ಹಾನಿಯಾಗಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಇದನ್ನು ವಿಪಕ್ಷಗಳು ಗಮನಕ್ಕೆ ತಂದ ಬಳಿಕ ಗಾಢ ನಿದ್ರೆಯಿಂದ ಎಚ್ಚೆತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ, ಜಿಲ್ಲಾಡಳಿತಗಳೊಂದಿಗೆ ವೀಡಿಯೋ ಸಂವಾದ ನಡೆಸಿದೆ ಎಂದರು.
ಕಳೆದ ವರ್ಷ ಬರ ಪರಿಹಾರ ವಿತರಣೆ ವೇಳೆ, ಈ ವರ್ಷ ಮುಂಗಾರು ಬೆಳೆ ಹಾನಿ ಪರಿಹಾರ ವಿತರಣೆ ವೇಳೆ ಉಂಟಾದ ಎಡವಟ್ಟುಗಳು ಮರುಕಳಿಸದಂತೆ ಸರಕಾರ ಈ ಬಾರಿಯಾದರೂ ಎಚ್ಚರ ವಹಿಸಬೇಕು. ಬೆಳೆ ಹಾನಿ ಸಮೀಕ್ಷೆಯನ್ನು ಸಮರೋಪಾದಿಯಲ್ಲಿ ನಡೆಸಿ, ಒಂದು ವಾರದೊಳಗೆ ಪರಿಹಾರದ ಹಣ ರೈತರ ಕೈಸೇರುವಂತೆ ಕ್ರಮ ಕೈಗೊಳ್ಳಬೇಕು. ಫ್ರೂಟ್ಸ್ ತಂತ್ರಾಂಶದಲ್ಲಿ ಸಮಸ್ಯೆ ಇದೆ, ಆಧಾರ್ ಲಿಂಕ್ ಆಗಿಲ್ಲ ಎಂದು ಕುಂಟು ನೆಪವೊಡ್ಡಿ ಪರಿಹಾರ ವಿತರಣೆಯಲ್ಲಿ ವಿಳಂಬ ಮಾಡದೆ ಈಗಲೇ ಪೂರ್ವಸಿದ್ಧತೆ ಮಾಡಿಕೊಂಡು, ಸಮೀಕ್ಷೆ ವರದಿ ಕೈಸೇರುತ್ತಿದ್ದಂತೆ ಡಿಬಿಟಿ ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮೆ ಮಾಡಬೇಕು. ಕಳೆದ 2 ವರ್ಷದಿಂದ ಸತತವಾಗಿ ಬರ, ನೆರೆ ಹಾವಳಿಯಿಂದ ಹೈರಾಣಾಗಿರುವ ರೈತರು ವಾರದೊಳಗೆ ಪರಿಹಾರ ಹಣ ಕೈಸೇರಿದರೆ ದೀಪಾವಳಿ ಹಬ್ಬವನ್ನಾದರೂ ನೆಮ್ಮದಿಯಿಂದ ಆಚರಿಸಲು ಸಹಕಾರಿಯಾಗುತ್ತದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.