ಒಂದು ವರ್ಷ ಸಮಯಾವಕಾಶ ಕೊಡಿ 


Team Udayavani, Aug 1, 2018, 6:00 AM IST

17.jpg

ಬೆಂಗಳೂರು: “ಉತ್ತರ ಕರ್ನಾಟಕ ಭಾಗದವರು ನನ್ನನ್ನು ನೇರವಾಗಿ ಭೇಟಿ ಮಾಡಲಿ. ಆ ಭಾಗದ ಅಭಿವೃದ್ಧಿಗೆ ನನ್ನದೇ ಆದ ಕನಸುಗಳಿವೆ’ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಮಾಜಿ ಶಾಸಕ ಎನ್‌.ಎಚ್‌.ಕೋನರೆಡ್ಡಿ ನೇತೃತ್ವದಲ್ಲಿ ವಿಧಾನಸೌಧಕ್ಕೆ ಆಗಮಿಸಿದ್ದ ಪ್ರತ್ಯೇಕ ರಾಜ್ಯ ಹೋರಾಟಗಾರರೊಂದಿಗೆ ಅವರು ಚರ್ಚೆ ನಡೆಸಿದ ವೇಳೆ ಅವರು ಈ ಭರವಸೆ ನೀಡಿದರು. “ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿಕೆಯನ್ನು  ಅಭಿವೃದ್ಧಿಗೊಳಿಸಲು ನನಗೆ ಒಂದು ವರ್ಷ ಸಮಯ ಕೊಡಿ, ಚುನಾವಣೆಯಲ್ಲಿ ಯಾರಿಗಾದರೂ ಮತ ಹಾಕಲಿ, ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. 15 ದಿನ ಮಾತ್ರ ಪ್ರತ್ಯೇಕತೆಯ ಕೂಗು ಇರುತ್ತದೆ. ಆ ಮೇಲೆ ಏನೂ ಇರುವುದಿಲ್ಲ. 2.18 ಲಕ್ಷ ಕೋಟಿ ರೂ. ಬಜೆಟ್‌ನಲ್ಲಿ 500 ಕೋಟಿ ರೂ. ಮಾತ್ರ ಹಾಸನ, ಮಂಡ್ಯ ಸೇರಿದಂತೆ ನಾಲ್ಕು ಜಿಲ್ಲೆಗಳಿಗೆ ಕೊಟ್ಟಿದ್ದೇನೆ. ಅದನ್ನೇ ಅನ್ಯಾಯವಾಗಿದೆ ಎಂದು ಹೇಳುತ್ತಿದ್ದಾರೆ.

ಯಾರು ಏನೇ ಹೇಳಿದರೂ ಕೇಳಬೇಡಿ, ಉತ್ತರ ಕರ್ನಾಟಕ ಭಾಗದವರು ನನ್ನನ್ನು ನೇರವಾಗಿ ಭೇಟಿ ಮಾಡಿ. ಶೀಘ್ರದಲ್ಲಿಯೇ ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿಯಲ್ಲಿ ಎರಡು ದಿನ ವಾಸ್ತವ್ಯ ಹೂಡುತ್ತೇನೆ ಎಂದು ಕುಮಾರಸ್ವಾಮಿ ಹೋರಾಟಗಾರರಿಗೆ ಭರವಸೆ ನೀಡಿದ್ದಾರೆ. ಮಹದಾಯಿ ವಿಚಾರದಲ್ಲಿ ನಾನು ಯಾವುದೇ ರಾಜಕೀಯ ಮಾಡಿಲ್ಲ. ಯಾರೊಬ್ಬರ ಮೇಲೂ ಆರೋಪ ಮಾಡಿಲ್ಲ. ಮಹದಾಯಿ ಪ್ರಕರಣ ನ್ಯಾಯಾಧಿಕರಣದಲ್ಲಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಅಥವಾ ಇನ್ನೊಬ್ಬರು ಈ ಬಗ್ಗೆ ತೀರ್ಮಾನ ಮಾಡಲು ಆಗುವುದಿಲ್ಲ. ನ್ಯಾಯಾಧೀಕರಣ ರಾಜ್ಯಕ್ಕೆ ನಿಗದಿ ಮಾಡುವ ನೀರಿನ ಸದ್ಬಳಕೆ ಮಾಡಿಕೊಳ್ಳುತ್ತೇವೆ. ನ್ಯಾಯಾಧೀಕರಣದ ತೀರ್ಪಿಗೆ ಕಾಯುತ್ತಿದ್ದೇವೆ ಎಂದರು.

ಮೈಸೂರು ಪ್ರಾಂತ್ಯಕ್ಕಿಂತ ಉ.ಕ. ಭಾಗದಲ್ಲಿ ನನಗೆ ಹೆಚ್ಚಿನ ಪ್ರೀತಿ ದೊರೆತಿದೆ. ಆ ಭಾಗದಲ್ಲಿ ಜೆಡಿಎಸ್‌ಗೆ ಶಕ್ತಿ ಇಲ್ಲ. ಬೇರೆಯವರ ಹಂಗಿನಲ್ಲಿ ನಾನು ಸರ್ಕಾರ ನಡೆಸುತ್ತಿರುವಾಗ ಸ್ವಲ್ಪ ಸಮಯ ಕೊಡಿ, ರೈತರ ಸಾಲ ಮನ್ನಾ ಗೊಂದಲವನ್ನು ನಿವಾರಿಸಿ ಉತ್ತರ ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿ ಎರಡು ದಿನ ಪ್ರವಾಸ ಮಾಡಿ ಸಮಸ್ಯೆಗಳನ್ನು ಆಲಿಸುತ್ತೇನೆ.
● ಎಚ್‌.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.