“ಕಾಲಾ’ ಚಿತ್ರ ಪ್ರದರ್ಶನಕ್ಕೆ ಸೂಕ್ತ ಭದ್ರತೆ ನೀಡಿ 


Team Udayavani, Jun 6, 2018, 6:00 AM IST

z-36.jpg

ಬೆಂಗಳೂರು: ರಜನಿಕಾಂತ್‌ ಅಭಿನಯದ “ಕಾಲಾ’ ಚಲನಚಿತ್ರ ಪ್ರದರ್ಶನದ ವೇಳೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಸೂಕ್ತ ಭದ್ರತೆ
ನೀಡುವಂತೆ ಹೈಕೋರ್ಟ್‌ ಪೊಲೀಸ್‌ ಇಲಾಖೆಗೆ ಮಧ್ಯಂತರ ಆದೇಶ ನೀಡಿದೆ. ಜೂ.7ರಂದು ಚಿತ್ರ ಬಿಡುಗಡೆಯಾಗುವ ಸ್ಥಳಗಳು, ಎಲ್ಲೆಲ್ಲಿ ಭದ್ರತೆಯ ಅವಶ್ಯವಿದೆ, ಯಾವ ನಿರ್ದಿಷ್ಟ ಸಂಘಟನೆ ಚಿತ್ರ ಪ್ರದರ್ಶನಕ್ಕೆ ಅಡ್ಡಿಪಡಿಸಬಹುದು ಎಂಬುದರ ಕುರಿತು ವಿವರಗಳನ್ನೊಳಗೊಂಡ ಮನವಿಯನ್ನು ವಿತರಕರು ಡಿಜಿಪಿಗೆ ಸಲ್ಲಿಸಬೇಕು. ಮನವಿ ಪರಿಗಣಿಸಿ ಡಿಜಿಪಿ, ನಗರ ಪೊಲೀಸ್‌ ಆಯುಕ್ತರು ಸೂಕ್ತ ಭದ್ರತೆ ಕಲ್ಪಿಸಿ ಕಾನೂನು ಸುವ್ಯವಸ್ಥೆ ಕಾಪಾಡಬೇಕೆಂದು ಹೈಕೋರ್ಟ್‌ ತಿಳಿಸಿದೆ.

ಚಿತ್ರ ಬಿಡುಗಡೆಗೆ ಕನ್ನಡಪರ ಸಂಘಟನೆಗಳು ಅಡ್ಡಿಪಡಿಸುವ ಬೆದರಿಕೆಯಿದ್ದು ಸೂಕ್ತ ರಕ್ಷಣೆ ನೀಡಲು ನಿರ್ದೇಶಿಸುವಂತೆ ಕೋರಿ, ಚಿತ್ರ ನಿರ್ಮಾಣ ಸಂಸ್ಥೆ ವಂಡರ್‌ಬಾರ್‌ ಫಿಲ್ಮ್ ಪ್ರೈ.ಲಿ., ರಜನಿಕಾಂತ್‌ ಅಳಿಯ ಹಾಗೂ ಚಿತ್ರದ ನಿರ್ಮಾಪಕ ಧನುಷ್‌ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ನ್ಯಾ.ಜಿ. ನರೇಂದರ್‌ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ತಮಿಳುನಾಡಿಗೆ ನೀರು ಬಿಡುವ ಸುಪ್ರೀಂ ಆದೇಶದ ವಿಚಾರವಾಗಿ ರಜನಿಕಾಂತ್‌ ಹೇಳಿಕೆಯನ್ನು ವಿರೋಧಿಸಿ ಚಲನಚಿತ್ರ ವಾಣಿಜ್ಯ
ಮಂಡಳಿ ಹಾಗೂ ಕೆಲ ಕನ್ನಡಪರ ಸಂಘಟನೆಗಳು “ಕಾಲಾ’ ಚಿತ್ರ ಬಿಡುಗಡೆ ಮಾಡ ದಂತೆ ಸಿಎಂಗೆ ಮನವಿ ಸಲ್ಲಿಸಿವೆ. ಇದರಿಂದ ಸಂವಿಧಾನಾತ್ಮಕ
ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಲಿದೆ ಎಂದರು. ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೋಕೆಟ್‌ ಜನರಲ್‌ ಎ.ಜಿ ಶಿವಣ್ಣ, ಭದ್ರತೆ
ಅಗತ್ಯವಿರುವ ಚಿತ್ರ ವಿತರಕರು, ಚಿತ್ರ ಪ್ರದರ್ಶನ ಕಾಣುವ ನಿರ್ದಿಷ್ಟ ಸ್ಥಳಗಳ ಬಗ್ಗೆ ವಿವರವಾದ ಮನವಿ ಸಲ್ಲಿಸಲಿ. ಅದರಂತೆ ಸೂಕ್ತ ರಕ್ಷಣೆ
ನೀಡಲಿದ್ದೇವೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಚಿತ್ರಪ್ರದರ್ಶನಕ್ಕೆ ಯಾವುದೇ ಅಡ್ಡಿಯಾಗದಂತೆ ಭದ್ರತೆ ಕೈಗೊಳ್ಳುವಂತೆ ಪೊಲೀಸ್‌ ಇಲಾಖೆಗೆ ಆದೇಶಿಸಿ, ಇತರೆ ಪ್ರತಿವಾದಿಗಳಾದ ಸಿಬಿಎಫ್ಸಿ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

ಚಿತ್ರ ಬಿಡುಗಡೆ ಬೇಡ: ಮುಖ್ಯಮಂತ್ರಿ ಎಚ್‌ಡಿಕೆ 
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಕನ್ನಡಪರ ಸಂಘಟನೆಗಳ ವಿರೋಧದ ನಡುವೆ ರಜನಿಕಾಂತ್‌ ಅಭಿನಯದ ಕಾಲಾ ಚಿತ್ರ ಬಿಡುಗಡೆ ಮಾಡುವುದು ಬೇಡ ಎಂಬುದು ಕನ್ನಡಿಗನಾಗಿ ನನ್ನ ಅಭಿಪ್ರಾಯ. ಅದನ್ನು ಮೀರಿ ವಿತರಕರು ಚಿತ್ರ ಪ್ರದರ್ಶನಕ್ಕೆ ಮುಂದಾದರೆ ಎದುರಾಗಬಹುದಾದ ಅಪಾಯಗಳಿಗೆ ಅವರೇ ಜವಾಬ್ದಾರರಾಗಿರುತ್ತಾರೆ ಎಂದು ಮುಖ್ಯಮಂತ್ರಿ ಎಚ್‌.ಡಿ.  ಕುಮಾರಸ್ವಾಮಿ ಹೇಳಿದ್ದಾರೆ. 

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಭೇಟಿಯಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ನೇತೃತ್ವದ ನಿಯೋಗ, ಕಾಲಾ ಚಿತ್ರ ಬಿಡುಗಡೆಗೆ ಅವಕಾಶ ನೀಡದಂತೆ ಮನವಿ ಸಲ್ಲಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಒಬ್ಬ ಮುಖ್ಯಮಂತ್ರಿಯಾಗಿ ಚಿತ್ರ ಬಿಡುಗಡೆ
ಮಾಡದಂತೆ ಸೂಚಿಸಲು ಸಾಧ್ಯವಿಲ್ಲ ಎಂದು ಹೇಳಿದರು. ವಿರೋಧದ ನಡುವೆಯೂ ನಿರ್ಮಾಣ ಸಂಸ್ಥೆಯವರೇ ಚಿತ್ರ ಬಿಡುಗಡೆ ಮಾಡಿ ಸಮಸ್ಯೆ ಎದುರಾದರೆ ಅದಕ್ಕೆ ಅವರೇ ಜವಾಬ್ದಾರರಾಗಬೇಕಾಗುತ್ತದೆ ಎಂದರು.

ಕೋರ್ಟ್‌ ಆದೇಶ ಪಾಲಿಸುತ್ತೆವೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮೂಲಕ “ಕಾಲಾ’ ಚಿತ್ರದ ಬಗ್ಗೆ ಯಾವ ಪ್ರತಿಕ್ರಿಯೆ ನೀಡುವಂತಿಲ್ಲ. ಆದರೆ, ನಾನೊಬ್ಬ ಕನ್ನಡಿಗ ನಾಗಿ “ಕಾಲಾ’ ಚಿತ್ರ ಬಿಡುಗಡೆ ಹಾಗೂ ಪ್ರದರ್ಶ ವನ್ನು ವಿರೋಧಿಸುತ್ತೇನೆ.
ಸಾ.ರಾ.ಗೋವಿಂದು, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ

ಟಾಪ್ ನ್ಯೂಸ್

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

highcourt

ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ಸೂಚನೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

Police

Kasragodu: ನರ್ಸಿಂಗ್‌ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್‌ ತನಿಖೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.