ಡಾ.ಪ್ರಿಯಾ ಶರತ್‌ಗೆ ಜಾಗತಿಕ ಗೌರವ
Team Udayavani, Aug 31, 2019, 3:00 AM IST
ಬೆಂಗಳೂರು: ಕೆನಡಾದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ಸೌಂದರ್ಯ ಮೇಳ-2019ರಲ್ಲಿ ಮಂಗಳೂರು ಮೂಲದ ಡಾ. ಕೆ.ಎಸ್. ಪ್ರಿಯಾ ಶರತ್ ರನ್ನರ್ ಅಪ್ ವಿಜೇತರಾಗಿ ಸಾಧನೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಐಎಫ್ಎಸ್ ನಿವೃತ್ತ ಅಧಿಕಾರಿ ಕೆ.ಸುಂದರ್ ಮಾತನಾಡಿ, ಡಾ.ಪ್ರಿಯಾ ಶರತ್ ಬೆಂಗಳೂರಿನಲ್ಲಿ ಚರ್ಮರೋಗ ಹಾಗೂ ಸೌಂದರ್ಯ ಚಿಕಿತ್ಸಾ ತಜ್ಞರಾಗಿ ಕೆಲಸ ಮಾಡುತ್ತಿದ್ದು, ವಿಶ್ವದಾದ್ಯಂತ ವಿವಿಧ ರಾಷ್ಟ್ರಗಳಿಂದ ಮಹಿಳಾ ಪ್ರತಿನಿಧಿಗಳು ಭಾಗವಹಿಸಿದ್ದ ಸೌಂದರ್ಯ ಸ್ಪರ್ಧೆಯಲ್ಲಿ ರನ್ನರ್ ಅಪ್ ವಿಜೇತರಾಗಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ಇದಕ್ಕೂ ಮೊದಲು ಪ್ರಿಯಾ ಅವರು ವಿಶ್ವಸಂಸ್ಥೆ ನೀಡುವ ಅಂತಾರಾಷ್ಟ್ರೀಯ ಮಿಸೆಸ್ ಇಂಡಿಯಾ ಪ್ರಶಸ್ತಿ ಹಾಗೂ ಮಿಸೆಸ್ ಇಂಡಿಯಾ ಗ್ಯಾಲಕ್ಸಿ-2018 ಪ್ರಶಸ್ತಿಗೂ ಭಾಜನರಾಗಿದ್ದರು. ಈಗ ವಿಶ್ವಮಟ್ಟದ ಸ್ಪರ್ಧೆಯಲ್ಲಿ ರನ್ನರ್ ಅಪ್ ವಿಜೇತರಾಗಿ ಹೊಸ ದಾಖಲೆ ಮಾಡಿದ್ದಾರೆಂದು ತಿಳಿಸಿದರು. ಡಾ. ಕೆ.ಎಸ್. ಪ್ರಿಯಾ ಶರತ್ ಬೆಂಗಳೂರಿನ ಬಸವೇಶ್ವರನಗರದಲ್ಲಿರುವ ಡಮಾರ್ ಹೀಲ್‌ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದು,
ಬಡವರು, ಗ್ರಾಮೀಣ ಜನರಿಗೆ ಆಗಾಗ್ಗೆ ಆರೋಗ್ಯ ತಪಾಸಣಾ ಶಿಬಿರ ಹಾಗೂ ಆರೋಗ್ಯ ಜಾಗೃತಿ ಮೂಲಕ ಸಾಮಾಜಿಕ ಕಾರ್ಯದಲ್ಲೂ ತೊಡಗಿಸಿ ಕೊಂಡಿದ್ದಾರೆ. ಈಗ ಜಾಗತಿಕ ಮಟ್ಟದ ಸ್ಪರ್ಧೆಯಲ್ಲಿ ರನ್ನರ್ ಅಪ್ ವಿಜೇತರಾದ ಬಳಿಕ ತಮ್ಮ ಸಾಮಾಜಿಕ ಸೇವೆಯನ್ನು ಇನ್ನಷ್ಟು ವಿಸ್ತರಿಸಲು ಯೋಚಿಸಿದ್ದಾರೆ. ಅದರಲ್ಲಿ ಮುಖ್ಯ ವಾಗಿ ಆಸಿಡ್ ದಾಳಿಗೆ ತುತ್ತಾದ ಸಂತ್ರಸ್ತ ಹೆಣ್ಣು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ಜೊತೆಗೆ ಅವರಿಗೆ ಪುನರ್ವಸತಿ ಕಲ್ಪಿಸಬೇಕೆಂಬ ಉದ್ದೇಶ ಹೊಂದಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.