ವಿದಾಯ ಭಾಷಣ
Team Udayavani, Jul 13, 2018, 11:53 AM IST
ವಿಧಾನ ಪರಿಷತ್ತು: ಬಿಜೆಪಿಯ ಕೆ.ಬಿ.ಶಾಣಪ್ಪ, ತಾರಾ ಅನುರಾಧ ಅವರ ಸದಸ್ಯತ್ವ ಅವಧಿ ಆ.9ರಂದು ಮುಕ್ತಾಯವಾಗಲಿದ್ದು, ಗುರುವಾರ ಇಬ್ಬರೂ ಸದಸ್ಯರು ವಿದಾಯ ಭಾಷಣ ಮಾಡಿದರು.
ಹಿರಿಯ ಸದಸ್ಯರಾದ ಕೆ.ಬಿ.ಶಾಣಪ್ಪ ಅವರು 1983ರಲ್ಲಿ ಕಮ್ಯುನಿಸ್ಟ್ ಪಕ್ಷದಿಂದ ಮೊದಲ ಬಾರಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದ್ದು, ನಂತರದ ರಾಜಕೀಯ ಬೆಳವಣಿಗೆಯಲ್ಲಿ ಲೋಕಶಕ್ತಿ, ಜನತಾದಳ ಬಳಿಕ ಬಿಜೆಪಿ ಸೇರಿದ ಸಂದರ್ಭವನ್ನು ಸೂಚ್ಯವಾಗಿ ವಿವರಿಸಿದರು. ಸ್ಲಂನಲ್ಲಿ ಹುಟ್ಟಿದ ನಾನು ಸಂಸತ್ ಪ್ರವೇಶಿಸುವಂತಾಗಲು ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ ಕಾರಣ.
ಅದೇ ಪ್ರಜಾಪ್ರಭುತ್ವದ ಸೊಬಗು ಎಂದು ಹೇಳಿದರು. ನಾನು ಎಂದಿಗೂ ಬಿಜೆಪಿಗೆ ದ್ರೋಹ ಬಗೆದಿಲ್ಲ. 80 ವರ್ಷ ಪೂರೈಸಿದ್ದೇನೆ. ಈ ಸದನ ಯಾರಿಗೂ ಕಾಯಂ ಮನೆಯಲ್ಲ. ಈ ಮನೆಗೆ ಬಂದವರು ಒಂದಲ್ಲಾ ಒಂದು ದಿನ ಹೋಗಬೇಕು. ಎಲ್ಲರಿಗೂ ವಂದಿಸುತ್ತೇನೆ ಎಂದು ಹೇಳಿದರು.
ತಾರಾ ಅನುರಾಧ ಮಾತನಾಡಿ, 2008ರಲ್ಲಿ ಬಿಜೆಪಿಗೆ ಸೇರಿ 2012ರಲ್ಲಿ ವಿಧಾನ ಪರಿಷತ್ ಸದಸ್ಯೆಯಾದೆ. ಸದನದಲ್ಲಿ ಸಾಕಷ್ಟು ಕಲಿತಿದ್ದೇನೆ. ನಾನು ಸದನದಲ್ಲಿ ಪ್ರಸ್ತಾಪಿಸಿದ ಹಲವು ವಿಚಾರಗಳ ಬಗ್ಗೆ ಸರ್ಕಾರ ಗಮನ ಹರಿಸಿ ಕ್ರಮ ಕೈಗೊಂಡಿರುವುದು ತೃಪ್ತಿ ತಂದಿದೆ. ಸಭಾ ನಾಯಕಿ ಜಯಮಾಲಾ, ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಸಭಾಪರಿ ಬಸವರಾಜ ಹೊರಟ್ಟಿ ಅಭಿನಂದನೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.