ಬಲಿಪಾಡ್ಯಮಿಯಂದು ದೇವಾಲಯಗಳಲ್ಲಿ ಗೋಪೂಜೆ: ಸಚಿವೆ ಶಶಿಕಲಾ ಜೊಲ್ಲೆ
Team Udayavani, Oct 26, 2021, 2:50 PM IST
Representative Image Used
ಬೆಂಗಳೂರು: ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗಗಳಾದ ಗೋವುಗಳ ಮಹತ್ವ ಹಾಗೂ ಗೋವುಗಳ ಸಂರಕ್ಷಣೆ ಕುರಿತು ಜನಜಾಗೃತಿ ಮೂಡಿಸುವ ಸಲುವಾಗಿ ನ. 5ರ ಬಲಿಪಾಡ್ಯಮಿಯಂದು ರಾಜ್ಯದ ಎಲ್ಲ ಹಿಂದೂ ದೇವಾಲಯಗಳಲ್ಲಿ ಗೋಮಾತೆಯನ್ನು ಪೂಜಿಸಿ ಆರಾಧಿಸಲು ಆದೇಶಿಸಲಾಗಿದೆ ಎಂದು ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಹಿಂದೂ ಧರ್ಮದ ಪುರಾಣ, ಉಪನಿಷತ್ತುಗಳಲ್ಲಿ ಗೋವುಗಳಿಗೆ ವಿಶೇಷ ಸ್ಥಾನವಿದೆ. ಹಿಂದೂ ಧರ್ಮಗ್ರಂಥಗಳಲ್ಲಿ ಗೋವಿಗೆ ಮಾತೆಯ ಸ್ಥಾನ ನೀಡಲಾಗಿದೆ. ಗೋಮಾತೆಯನ್ನು ಪೂಜಿಸಿದರೆ ಅನೇಕ ಸಮಸ್ಯೆಗಳು ಪರಿಹಾರವಾಗುವುದರ ಜೊತೆ ವಾಸ್ತುದೋಷಕ್ಕೂ ಪರಿಹಾರ ದೊರೆಯುವುದೆಂಬ ನಂಬಿಕೆ ನಮ್ಮ ಸಮಾಜದಲ್ಲಿರುವುದರಿಂದ ಬಲಿಪಾಡ್ಯಮಿ ದಿನದಂದು ಇಲಾಖೆಯ ದೇವಾಲಯಗಳಲ್ಲಿ ಗೋಮಾತೆಗೆ ಪೂಜೆ ಸಲ್ಲಿಸಲು ಹಿಂದೂ ಧಾರ್ಮಿಕ ಧರ್ಮಾದಾಯ ದತ್ತಿಗಳ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮಹಾನಗರಗಳಲ್ಲಿ ತಮ್ಮ ಬಿಡುವಿಲ್ಲದ ಚಟುವಟಿಕೆಗಳ ಮಧ್ಯೆ ಗೋಪೂಜೆಯಂತಹ ಕೆಲಸವನ್ನು ಮರೆಯುತ್ತಿದ್ದಾರೆ. ಸನಾತನ ಧರ್ಮದ ಗೋಮಾತೆಯ ಪೂಜೆಯನ್ನು ಪೂಜಿಸುವ ಸಂಪ್ರದಾಯ ನಮ್ಮ ಮುಂದಿನ ಪೀಳಿಗೆಗೂ ಗೊತ್ತಾಗಬೇಕಿದೆ. ಈ ಹಿನ್ನೆಲೆಯಲ್ಲಿ ಈ ಸಂಪ್ರದಾಯವನ್ನು ಮುಂದುವರೆಸಿಕೊಂಡು ಬರಲು ವರ್ಷದಲ್ಲಿ ಒಂದು ದಿನ ಇಲಾಖೆಯ ದೇವಾಲಯಗಳಲ್ಲಿ ಪೂಜಿಸುವುದನ್ನು ಕಡ್ಡಾಯ ಮಾಡುವುದರಿಂದೊಂದಿಗೆ ಗೋಮಾತೆಯ ಪೂಜೆಯನ್ನು ಪರಿಚಯಿಸಲು ಬಲಿಪಾಡ್ಯಮಿ ದಿನ ಸೂಕ್ತವಾಗಿರುವುದರಿಂದ ಆ ದಿನದಂದು ಗೋಪೂಜೆ ಮಾಡಲು ಆದೇಶ ಹೊರಡಿಸಲಾಗಿದೆ ಎಂದು ಸಚಿವೆ ಜೊಲ್ಲೆ ತಿಳಿಸಿದ್ದಾರೆ.
ಇದನ್ನೂ ಓದಿ:ಬಿಜೆಪಿ, ಆರ್ ಎಸ್ ಎಸ್ ಸುಳ್ಳನ್ನು ಬಹಿರಂಗಪಡಿಸಲು ಕಾಂಗ್ರೆಸ್ ಒಗ್ಗಟ್ಟು ಮುಖ್ಯ: ಸೋನಿಯಾ
ಬಲಿಪಾಡ್ಯಮಿ ದಿನ ಸಂಜೆ 5.30ರಿಂದ 6.30ರ ಸಮಯದಲ್ಲಿ ರಾಜ್ಯದ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳನ್ನು ಸ್ನಾನ ಮಾಡಿಸಿ ದೇವಾಲಯದಲ್ಲಿ ಅರಿಶಿಣ, ಕುಂಕುಮ, ಹೂವುಗಳಿಂದ ಪೂಜಿಸಿ ಅಕ್ಕಿ, ಬೆಲ್ಲ, ಬಾಳೆಹಣ್ಣು ಮತ್ತು ಸಿಹಿ ತಿನಿಸಿಗಳ ಗೋಗ್ರಾಸಗಳನ್ನು ಹಸುಗಳಿಗೆ ನೀಡಿ ಆರಾಧಿಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.