ಆರಗ ಕ್ಷೇತ್ರದ ಆಸ್ಪತ್ರೆಯಲ್ಲಿ ಅವ್ಯವಸ್ಥೆಯ ಆಗರ : ರೋಗಿಗಳಿಗೆ ವೈದ್ಯರು ಸಿಕ್ಕರೆ ಅದೇ ಪುಣ್ಯ

ಸೂಕ್ತ ಚಿಕಿತ್ಸೆ ದೊರಕದೆ ಸಾರ್ವಜನಿಕರ ಆಕ್ರೋಶ !

Team Udayavani, May 5, 2022, 7:11 PM IST

ಗೃಹಸಚಿವರ ಸ್ವಕ್ಷೇತ್ರದ ಸರ್ಕಾರಿ ಆಸ್ಪತ್ರೆಯಲ್ಲಿ ಅವ್ಯವಸ್ಥೆಯ ಆಗರ : ಸಾರ್ವಜನಿಕರ ಆಕ್ರೋಶ !

ತೀರ್ಥಹಳ್ಳಿ : ತಾಲೂಕಿನ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಒಂದಲ್ಲ ಒಂದು ಸಮಸ್ಯೆ ಎದ್ದು ಕಾಣುತ್ತಿದೆ. ಸ್ಕ್ಯಾನಿಂಗ್ ಯಂತ್ರ ದೂಳು ಹಿಡಿದು ಕೂತಿರುವ ಬಗ್ಗೆ ಹಾಗೂ ಜಯಚಾಮರಾಜೇಂದ್ರ ಆಸ್ಪತ್ರೆಯ ಹೊರಾಂಗಣದಲ್ಲಿ ವಿದ್ಯುತ್ ದೀಪವಿಲ್ಲದೆ ಇರುವ ಬಗ್ಗೆ ಈಗಾಗಲೇ ಉದಯವಾಣಿ ಪತ್ರಿಕೆ ವರದಿ ಮಾಡಿತ್ತು. ಆದರೆ ಈಗ ಮತ್ತೊಂದು ಸಮಸ್ಯೆ ಕಾಡತೊಡಗಿದೆ.

ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಯನ್ನು ವೈದ್ಯರುಗಳು ನೀಡುತ್ತಿಲ್ಲ ಎಂಬುದು ಸಾರ್ವಜನಿಕರಿಂದ  ದೂರು ಕೇಳಿಬರುತ್ತಿದೆ.

ಸುಸಜ್ಜಿತವಾದ ಕಟ್ಟಡ, ನೂರು ಬೆಡ್ ಗಳ ಅಸ್ಪತ್ರೆ ಉತ್ತಮ ವೈದ್ಯಕೀಯ ಸೌಲಭ್ಯ ಹೊಂದಿರುವ ಆಸ್ಪತ್ರೆ ಎಂದೆಲ್ಲ ಗೃಹಸಚಿವರಾದ ಆರಗ ಜ್ಞಾನೇಂದ್ರ ಅವರು ಆಸ್ಪತ್ರೆಗೆ ಭೇಟಿ ನಿಡಿದಾಗೆಲ್ಲ ಹೇಳುತ್ತಿರುತ್ತಾರೆ.

ಸಚಿವರು ಬಂದಾಗ ಆಸ್ಪತ್ರೆಯ ತುಂಬಾ ಹಿಂದೆ ಮುಂದೆ ವೈದ್ಯೆರೇ ಇರುತ್ತಾರೆ. ಆದರೆ ಅನಾರೋಗ್ಯದಿಂದ ಬರುವ ರೋಗಿಗಳಿಗೆ ವೈದ್ಯರು ಸಿಕ್ಕಿದರೆ ಅದೇ ಅವರ ಪುಣ್ಯ.

ಹಿಂದೆ ಈ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯರೊಬ್ಬರ ವಿಶೇಷ ಮುತುವರ್ಜಿಯಿಂದ ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ಆಸ್ಪತ್ರೆಯ ವಾತಾವರಣವನ್ನು ಬಹಳ ಅಚ್ಚುಕಟ್ಟಾಗಿ ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ನೋಡಿಕೊಳ್ಳುತ್ತಿದ್ದರು. ಹಾಗೂ ದಾನಿಗಳ ನೆರವಿನಿಂದ ಅಸ್ಪತ್ರೆಗೆ ಬೇಕಾದ ಅಗತ್ಯ ತುರ್ತು ಪರಿಸ್ಥಿತಿಯಲ್ಲಿ ಚಿಕಿತ್ಸೆ ಕೊಠಡಿ, ಮತ್ತು ಪಾರ್ಕ್ , ಧ್ವಜದ ಕಟ್ಟೆ, ಪೀಠೋಪಕರಣ, ಡಯಾಲಿಸಿಸ್ ಮಿಷನ್ ,ಮಳೆಯಲ್ಲಿ ನೀರು ಸೊರದಂತೆ ಮೇಲ್ಛಾವಣಿ ಮಾಡು ಹಾಗೂ ಮತ್ತಿತರ ವಸ್ತುಗಳನ್ನು ಅಸ್ಪತ್ರೆಗೆ ಅಳವಡಿಸಿ ತಾಲೂಕು ಅಸ್ಪತ್ರೆಯಾದರೂ ಕೂಡ ರಾಜ್ಯದಲ್ಲಿ ಮಾದರಿ ಅಸ್ಪತ್ರೆ ಎನ್ನುವಂತೆ  ಮಾಡಿದ್ದರಲ್ಲದೆ ಬಡರೋಗಿಗಳ ಪಾಲಿಗೆ ಅಪಾತ್ಬಾಂದವರಾಗಿದ್ದರು. ಅವರು ವರ್ಗಾವಣೆ ಆದ ನಂತರ ಜೆ.ಸಿ ಆಸ್ಪತ್ರೆಗೆ ಗ್ರಹಣ ಒಕ್ಕರಿಸಿದೆ. ಈಗಿರುವ ಹಲವು ವೈದ್ಯರುಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ. ಹೆಸರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಆದರೆ ಅವರು ಮಾಡುವುದು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಇದು ಈಗಿರುವ ವೈದ್ಯರ ಸಮಸ್ಯೆ.

ಇದನ್ನೂ ಓದಿ : ಬಜೆಟ್ ಅನುಷ್ಠಾನ : ಹೊಸ ಪರಂಪರೆ ಆರಂಭಿಸಿದ ಸಿಎಂ ಬೊಮ್ಮಾಯಿ

ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುವ ವೈದ್ಯರು ಸಮಯಕ್ಕೆ ಸರಿಯಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಇರದೇ  ಖಾಸಗಿ ಆಸ್ಪತ್ರೆಯಲ್ಲಿ ಕಾಣಸಿಗುತ್ತಾರೆ. ಇನ್ನು ಕೆಲವು ವೈದ್ಯಾಧಿಕಾರಿಗಳು ಆಸ್ಪತ್ರೆ ವೈದ್ಯರ ಕೊಠಡಿಯಲ್ಲೇ ಹಣ ಪೀಕುವ ಕೆಲಸಕ್ಕೆ ಮುಂದಾಗಿದ್ದಾರೆ. ಒಟ್ಟಿನಲ್ಲಿ ಬಡ ರೋಗಿಗಳ ಪಾಡು ಹೇಳತೀರದಾಗಿದೆ. ಜಯಚಾಮರಾಜೇಂದ್ರ ಆಸ್ಪತ್ರೆಯ ( ಹೆಸರು ಬೇಡ ) ವೈದ್ಯರು ಆಸ್ಪತ್ರೆಯ ಕೊಠಡಿಯಲ್ಲಿ ಕುಳಿತು ಬಡ ರೋಗಿಗಳಿಗೆ ಖಾಸಗಿ ನರ್ಸಿಂಗ್ ಹೋಂ ಗಳಲ್ಲಿ ಸಿಗುವ ಸೌಲಭ್ಯ ಮತ್ತು ಚಿಕಿತ್ಸೆ ಎಷ್ಟಾಗುತ್ತದೆ ಎಂಬ ಮಾಹಿತಿ ನೀಡಿ ನಂತರ ಡೀಲ್ ಕುದುರಿಸಿ ಬಡಪಾಯಿ ರೋಗಿಗಳನ್ನು ಖಾಸಗಿ ನರ್ಸಿಂಗ್ ಹೋಂ ಗಳಿಗೆ ಕಳುಹಿಸಿ ನಂತರ ಜೆ.ಸಿ ಆಸ್ಪತ್ರೆಯ ವೈದ್ಯರೇ ಹೋಗಿ ದುಬಾರಿ ವೆಚ್ಚದ ಚಿಕಿತ್ಸೆ ನೀಡುತ್ತಿದ್ದಾರೆ ಎಂಬ ಮಾತು ಹಣ ಕಳೆದುಕೊಂಡ ರೋಗಿಯೊಬ್ಬರು ಉದಯವಾಣಿ ಪತ್ರಿಕೆಗೆ ತಿಳಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಯ ವೈದ್ಯರು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸಬಾರದು ಎಂಬ ಕಾನೂನು ಇದ್ದರೂ ಸಹ ತರಬೇತಿ ರೂಪದಲ್ಲಿ ಖಾಸಗಿ ಆಸ್ಪತ್ರೆಗೆ ಹೋಗಿ ಬಡ ರೋಗಿಗಳನ್ನು ಪಿಕುವುದು ಎಷ್ಟರ ಮಟ್ಟಿಗೆ ಸರಿ?  ಗೃಹಸಚಿವರು ಇದನ್ನು ತಕ್ಷಣ ಗಮನಿಸದೆ ಹೋಗದಿದ್ದರೆ  ಮಾತ್ರ ತೀರ್ಥಹಳ್ಳಿಯಲ್ಲಿ ಸರ್ಕಾರಿ ಆಸ್ಪತ್ರೆ ಹೆಸರಿಗಷ್ಟೇ ಇರಲಿದೆ ಎನ್ನುವುದು ಅಕ್ಷರಶಃ ಸತ್ಯ.

– ಶ್ರೀಕಾಂತ್ ವಿ ನಾಯಕ್ ತೀರ್ಥಹಳ್ಳಿ

ಟಾಪ್ ನ್ಯೂಸ್

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8

Kasaragod: ಟ್ಯಾಂಕರ್‌ ಲಾರಿಯಿಂದ ರಸ್ತೆಗೆ ಹರಿದ ಎಣ್ಣೆ

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

crime

Siddapura: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Untitled-1

Kasaragod Crime News: ಬೈಕ್‌ ಕಳವು; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.