Government Hospital ಸಮೀಪದ ಖಾಸಗಿ ಪ್ರಯೋಗಾಲಯ ಮುಚ್ಚಲು ಸರಕಾರ ಸುತ್ತೋಲೆ
Team Udayavani, Feb 29, 2024, 6:10 AM IST
ಬೆಂಗಳೂರು: ಸರಕಾರಿ ಆಸ್ಪತ್ರೆಯಿಂದ 200 ಮೀಟರ್ ಅಂತರದಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಪ್ರಯೋಗಾಲಯಗಳನ್ನು(ಲ್ಯಾಬ್) ಮುಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಜತೆಗೆ ಆಸ್ಪತ್ರೆಯಿಂದ 200 ಮೀಟರ್ ಅಂತರದೊಳಗೆ ಯಾವುದೇ ಹೊಸ ಖಾಸಗಿ ಪ್ರಯೋಗಾಲಯಕ್ಕೆ ಅನುಮತಿ ಕೊಡಬಾರದೆಂದೂ ಸೂಚಿಸಿದೆ. ಜತೆಗೆ ಮುಚ್ಚಿದ ಪ್ರಯೋಗಾಲಯಗಳ ಸಂಪೂರ್ಣ ಮಾಹಿತಿಗಳನ್ನು ಮಾರ್ಚ್ 30ರ ಒಳಗೆ ಛಛ2ಞಛಿಛಜಿcಚlಃಜಞಚಜಿl.cಟಞ ಗೆ ರವಾನಿಸಬೇಕು ಎಂದು ಎಲ್ಲ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಲಾಗಿದೆ.
2019ರ ಎಪ್ರಿಲ್ 4ರ ಬಳಿಕ ಯಾವುದೇ ಹೊಸ ಖಾಸಗಿ ಪ್ರಯೋಗಾಲಯಗಳು ಸರಕಾರಿ ಆಸ್ಪತ್ರೆಯಿಂದ ರಾಜ್ಯ ಸರಕಾರ, ಕೇಂದ್ರ ಸರಕಾರ, ಸ್ಥಳೀಯ ಸಂಸ್ಥೆಗಳು, ಸ್ವಯತ್ತ ಸಂಸ್ಥೆಯಿಂದ ನಿರ್ವಹಿಸಲಾದ ಆಸ್ಪತ್ರೆಯಿಂದ 200 ಮೀಟರ್‌ಗಳ ದೂರದ ಒಳಗೆ ಇದ್ದರೆ ಅಂತಹ ಲ್ಯಾಬ್‌ಗಳನ್ನು ಕೆಪಿಎಂಇ ಅಧಿನಿಯಮ 2007ರ ಸೆಕ್ಷನ್ (22) ಅನ್ವಯ ಮುಚ್ಚಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಎಲ್ಲ ತಾಲೂಕು ಆರೋಗ್ಯ ಅಧಿಕಾರಿಗಳಿಗೆ ಆದೇಶಿಸುವಂತೆ ಎಲ್ಲ ಜಿಲ್ಲೆಯ ಅಧಿಕಾರಿಗಳು (ಅಧ್ಯಕ್ಷರು, ನೋಂದಣಿ ಮತ್ತು ಕುಂದು ಕೊರತೆ ನಿವಾರಣ ಪ್ರಾಧಿಕಾರ) ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.