ಎಲ್ಲ ಮಕ್ಕಳಿಗೂ ಸರಕಾರಿ ಆಂಗ್ಲ ಮಾಧ್ಯಮ ಶಿಕ್ಷಣ


Team Udayavani, May 21, 2022, 6:40 AM IST

ಎಲ್ಲ ಮಕ್ಕಳಿಗೂ ಸರಕಾರಿ ಆಂಗ್ಲ ಮಾಧ್ಯಮ ಶಿಕ್ಷಣ

ಸಾಂದರ್ಭಿಕ ಚಿತ್ರ.

ಬೆಂಗಳೂರು: ರಾಜ್ಯಾದ್ಯಂತ ಸರಕಾರಿ ಇಂಗ್ಲಿಷ್‌ ಮಾಧ್ಯಮ ಶಾಲೆಗಳಿಗೆ ಪ್ರವೇಶ ಬಯಸಿ ಬರುವ ಎಲ್ಲ ಮಕ್ಕಳಿಗೂ ಪ್ರವೇಶ ಕಲ್ಪಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದ್ದು, ಈ ಬಾರಿ ದಾಖಲಾತಿ ಹೆಚ್ಚಾಗುವ ನಿರೀಕ್ಷೆಯಿದೆ.

ಇದರಿಂದಾಗಿ ತಮ್ಮ ಮಕ್ಕಳನ್ನು “ಇಂಗ್ಲಿಷ್‌ ಮಾಧ್ಯಮ’ದಲ್ಲಿ ಓದಿಸಬೇಕು ಎಂಬ ಕಾರಣಕ್ಕಾಗಿ ಖಾಸಗಿ ಶಾಲೆಗಳಿಗೆ ಸೇರಿಸುತ್ತಿರುವ ಪೋಷಕರು ಇನ್ನು ಸರಕಾರಿ ಶಾಲೆಗಳಿಗೂ ಸೇರಿಸಬಹುದಾಗಿದೆ ಎಂದು ಪ್ರಾಥಮಿಕ ಶಿಕ್ಷಣ ಇಲಾಖೆ ನಿರ್ದೇಶಕ ಎಂ. ಪ್ರಸನ್ನಕುಮಾರ್‌ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಾಲಾಭಿವೃದ್ಧಿ ಮತ್ತು ನಿರ್ವಹಣ ಸಮಿತಿಯು (ಎಸ್‌ಡಿಎಂಸಿ) ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳು (ಬಿಇಒ) ಹಾಗೂ ಜಿಲ್ಲಾ ಉಪ ನಿರ್ದೇಶಕ (ಡಿಡಿಪಿಐ)ರಿಗೆ ಮನವಿ ಸಲ್ಲಿಸಿದರೆ ಸರಕಾರ ಅನುಮತಿ ನೀಡಲಿದೆ. ಸಾಕಷ್ಟು ಶಾಲೆಗಳಿಂದ ಬೇಡಿಕೆ ಬರುತ್ತಿದೆ.

ಮೂಲಸೌಕರ್ಯವಿದ್ದರೆ, ಅನುಮತಿ ನೀಡಲಾಗುತ್ತದೆ. ಅಗತ್ಯ ಶಿಕ್ಷಕರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲು ನಿರ್ಧರಿಸಲಾಗಿದೆ.

ಸರಕಾರವು 2019-20ನೇ ಸಾಲಿನಲ್ಲಿ 1,001 ಮತ್ತು 2020-21ರಲ್ಲಿ 1,400 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಿತು. 276 ಕರ್ನಾಟಕ ಪಬ್ಲಿಕ್‌ ಶಾಲೆ, 444 ಉರ್ದು ಮಾಧ್ಯಮ ಸೇರಿ 2,401 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಬೋಧಿಸಲಾಗುತ್ತಿದೆ. ಈ ಶಾಲೆಗಳಲ್ಲಿ ಪ್ರತಿ ತರಗತಿಗೆ 30 ಮಕ್ಕಳಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ. ಶಾಲೆಗಳಲ್ಲಿ ಕೊಠಡಿಗಳು ಲಭ್ಯವಿದ್ದಲ್ಲಿ ಪ್ರವೇಶ ನೀಡುವಂತೆ ಸರಕಾರ ತಿಳಿಸಿದೆ.

2021-22 ಮತ್ತು 2022-23ನೇ ಸಾಲಿನಲ್ಲಿ ಹೊಸ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸುತ್ತಿಲ್ಲ. ಆದರೆ, ಈಗಾಗಲೇ ಆರಂಭಿಸಿರುವ ಶಾಲೆಗಳಲ್ಲಿ ತರಗತಿಗಳನ್ನು ವಿಸ್ತರಿಸಲು ಅವಕಾಶ ಕಲ್ಪಿಸಲಾಗಿದೆ.

ಸಂಬಂಧಪಟ್ಟ ಶಾಲೆಗಳಲ್ಲಿ ಮೂಲಸೌಕರ್ಯವಿದ್ದಲ್ಲಿ ಅನುಮತಿ ನೀಡಲಾಗುತ್ತದೆ. ಕಳೆದ ವರ್ಷ 3ನೇ ತರಗತಿವರೆಗೆ ಇದ್ದ ಆಂಗ್ಲ ಮಾಧ್ಯಮವನ್ನು ಈ ವರ್ಷ 4ನೇ ತರಗತಿವರೆಗೆ ವಿಸ್ತರಿಸಲಾಗಿದೆ.

ಮತ್ತಷ್ಟು ಶಾಲೆಗಳಲ್ಲಿ ಆರಂಭಿಸಲು ಆಗ್ರಹ
ರಾಜ್ಯದಲ್ಲಿ 44,615 ಸರಕಾರಿ ಪ್ರಾಥಮಿಕ ಶಾಲೆಗಳಿವೆ. ಈ ಪೈಕಿ ಕೇವಲ 2,401 ಶಾಲೆಗಳಲ್ಲಿ ಮಾತ್ರ ಆಂಗ್ಲ ಮಾಧ್ಯಮವಿದೆ. ಮತ್ತಷ್ಟು ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಿದರೆ, ಕೂಲಿ ಕಾರ್ಮಿಕರು, ಆರ್ಥಿಕವಾಗಿ ಹಿಂದುಳಿದವರು, ಹಿಂದುಳಿದ ವರ್ಗದ ಮಕ್ಕಳು ಸಹಿತ ಎಲ್ಲ ವರ್ಗದ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಸೇರಿಸಲು ಅನುಕೂಲವಾಗಲಿದೆ. ಕೇಲವೇ ಮಂದಿಗೆ ಸಿಗುತ್ತಿರುವ ಸವಲತ್ತು ರಾಜ್ಯಾದ್ಯಂತ ಸಿಗುವಂತೆ ಮಾಡಬೇಕು ಎಂಬುದು ಪೋಷಕರ ಆಗ್ರಹವಾಗಿದೆ.

ಈಗಾಗಲೇ ಆಂಗ್ಲ ಮಾಧ್ಯಮ ಬೋಧಿಸುತ್ತಿರುವ ಸರಕಾರಿ ಶಾಲೆಗಳಲ್ಲಿ ಮೂಲಸೌಕರ್ಯವಿದ್ದರೆ, ನಿಗದಿತ ಸಂಖ್ಯೆಗಿಂತ ಹೆಚ್ಚಿನ ಮಕ್ಕಳಿಗೆ ಪ್ರವೇಶ ಕಲ್ಪಿಸಲು ನಿರ್ದೇಶನ ನೀಡಲಾಗಿದೆ.
– ಎಂ.ಪ್ರಸನ್ನಕುಮಾರ್‌,
ನಿರ್ದೇಶಕರು, ಪ್ರಾಥಮಿಕ ಶಿಕ್ಷಣ

-ಎನ್‌. ಎಲ್‌. ಶಿವಮಾದು

ಟಾಪ್ ನ್ಯೂಸ್

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.